ಶೇ.50 ಮಹಿಳಾ ಮುಖ್ಯಮಂತ್ರಿಗಳು ಕಾಂಗ್ರೆಸ್ ಗುರಿ: ರಾಹುಲ್ ಗಾಂಧಿ

Date:

ಕಾಂಗ್ರೆಸ್ ತನ್ನ ಸಾಂಸ್ಥಿಕ ರಚನೆಯಲ್ಲಿ ಮಹಿಳೆಯರನ್ನು ಸಕ್ರಿಯವಾಗಿ ಉತ್ತೇಜಿಸಬೇಕು ಮತ್ತು ಮುಂದಿನ 10 ವರ್ಷಗಳಲ್ಲಿ ಶೇಕಡ 50 ರಷ್ಟು ಮಹಿಳೆಯರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಗುರಿಯನ್ನು ಹೊಂದಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

- Advertisement -

ಕೊಚ್ಚಿಯ ಕೇರಳ ಮಹಿಳಾ ಕಾಂಗ್ರೆಸ್ ಸಮಾವೇಶವಾದ ‘ಉತ್ಸಾಹ್’ ಅನ್ನು ಉದ್ಘಾಟಿಸಿದ ರಾಹುಲ್ ಗಾಂಧಿ, ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿಯಾಗಲು ಅಗತ್ಯವಾದ ಗುಣಗಳನ್ನು ಹೊಂದಿರುವ ಹಲವಾರು ಮಹಿಳಾ ನಾಯಕರಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಈ ಹಿಂದೆ, ನಾವು ಸಾಧಿಸಬೇಕಾದ ಉತ್ತಮ ಗುರಿ ಏನೆಂಬುದನ್ನು ನಾನು ಚರ್ಚಿಸುತ್ತಿದ್ದೆ. ಇಂದಿನಿಂದ 10 ವರ್ಷಗಳಲ್ಲಿ ನಮ್ಮ ಪಕ್ಷದ ಮುಖ್ಯಮಂತ್ರಿಗಳಲ್ಲಿ 50 ಪ್ರತಿಶತದಷ್ಟು ಮಹಿಳೆಯರು ಇರಬೇಕೆಂಬುದು ಕಾಂಗ್ರೆಸ್‌ನ ಉತ್ತಮ ಗುರಿಯಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದರು.

‘ದೇಶದಲ್ಲಿ ಒಬ್ಬರು ಮಾತ್ರ ಮಹಿಳಾ ಮುಖ್ಯಮಂತ್ರಿಯಿದ್ದಾರೆ. ಆದರೆ ಕಾಂಗ್ರೆಸ್‌ನಲ್ಲಿ ಉತ್ತಮ ಮುಖ್ಯಮಂತ್ರಿಯಾಗುವ ಗುಣ ಹೊಂದಿರುವ ಅನೇಕ ಮಹಿಳೆಯರು ಇದ್ದಾರೆ ಎಂಬುದು ನನಗೆ ಗೊತ್ತು’ ಎಂದು ರಾಹುಲ್ ಗಾಂಧಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕವಿದೆಯೇ?

ಇದೇ ಸಂದರ್ಭದಲ್ಲಿ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ , ಇದು ಸಂಪೂರ್ಣವಾಗಿ ಪುರುಷ ಸಂಘಟನೆ. ಮಹಿಳೆಯರನ್ನು ಸೇರಿಸುವುದು ಆರ್‌ಎಸ್‌ಎಸ್‌ ಸಿದ್ಧಾಂತದ ಭಾಗವಲ್ಲ. ಆರ್‌ಎಸ್‌ಎಸ್‌ ಸಂಪೂರ್ಣ ಇತಿಹಾಸದಲ್ಲಿ ಮಹಿಳೆಯರಿಗೆ ಉತ್ತಮ ಸ್ಥಾನಕ್ಕೆ ಅವಕಾಶ ನೀಡಿಲ್ಲ” ಎಂದು ರಾಹುಲ್‌ ಹೇಳಿದರು.

“ಮಹಿಳೆಯರು ಅನೇಕ ವಿಷಯಗಳಲ್ಲಿ ಪುರುಷರಿಗಿಂತ ಶ್ರೇಷ್ಠರು ಎಂದು ನಾನು ಭಾವಿಸುತ್ತೇನೆ. ಅವರು ಪುರುಷರಿಗಿಂತ ಹೆಚ್ಚು ತಾಳ್ಮೆ ಹೊಂದಿದ್ದಾರೆ. ಅವರು ಪುರುಷರಿಗಿಂತ ದೀರ್ಘಾವಧಿಯ ಗುರಿಯನ್ನು ಹೊಂದಿದ್ದಾರೆ. ಅವರು ಪುರುಷರಿಗಿಂತ ಹೆಚ್ಚು ಸೂಕ್ಷ್ಮ ಮತ್ತು ಸಹಾನುಭೂತಿ ಹೊಂದಿದ್ದಾರೆ. ಮಹಿಳೆಯರು ಅಧಿಕಾರ ರಚನೆಯ ಭಾಗವಾಗಬೇಕು ಎಂದು ನಾವು ಮೂಲಭೂತವಾಗಿ ನಂಬುತ್ತೇವೆ” ಎಂದು ತಿಳಿಸಿದರು

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡುವ ಗುರಿಯನ್ನು ಹೊಂದಿರುವ ಮಸೂದೆಯು ಸೆಪ್ಟೆಂಬರ್‌ನಲ್ಲಿ ಸಂಸತ್ತಿನ ಅನುಮೋದನೆಯನ್ನು ಪಡೆದಿತ್ತು. ಒಂದು ದಶಕದ ನಂತರ ಸಂಸತ್ತಿನಲ್ಲಿ ಅಂಗೀಕಾರವಾದ ಯಾವುದೇ ಮಸೂದೆಯನ್ನು ನಾನು ನೋಡಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...