ರಾಮ ಮಂದಿರ ಉದ್ಘಾಟನೆಗೆ ದಲಿತರು, ಹಿಂದುಳಿದವರನ್ನು ಆಹ್ವಾನಿಸದ ಮೋದಿ ಸರ್ಕಾರ: ರಾಹುಲ್ ವಾಗ್ದಾಳಿ

Date:

ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ದಲಿತರು, ಹಿಂದುಳಿದವರು ಹಾಗೂ ರಾಷ್ಟ್ರಪತಿಗಳನ್ನು ಕೂಡ ಆಹ್ವಾನಿಸದೆ ಅವರಿಗೆ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

- Advertisement -

ಭಾರತ್ ಜೋಡೋ ನ್ಯಾಯಯಾತ್ರೆ ಅಂಗವಾಗಿ ಉತ್ತರ ಪ್ರದೇಶದ ರಾಮ್‌ಪುರ ಖಾಸ್ ವಿಧಾನಸಭಾ ಕ್ಷೇತ್ರದ ಲಾಲ್‌ಗಂಜ್‌ ಇಂದಿರಾ ಚೌಕ್‌ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಉದ್ಯಮಿಗಳು ಹಾಗೂ ಅಮಿತಾಭ್ ಬಚ್ಚನ್ ಅವರನ್ನು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮದಲ್ಲಿ ಆಹ್ವಾನಿಸಿ ದೇಶದಲ್ಲಿರುವ ಶೇ.73 ರಷ್ಟರಿರುವ ದಲಿತರು ಹಾಗೂ ಹಿಂದುಳಿದವರು ಮುಖ್ಯರಲ್ಲ ಎಂದು ಮೋದಿ ಸಂದೇಶ ರವಾನಿಸಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ

”ಮೋದಿ ರೈತರ ಜೇಬಿನಿಂದ ಕತ್ತರಿಸಿ ಶ್ರೀಮಂತರ ಜೇಬುಗಳನ್ನು ತುಂಬಿಸುತ್ತಿದೆ. ಧರ್ಮದ ಹೆಸರಿನಲ್ಲಿ ದೇಶದಲ್ಲಿ ದ್ವೇಷವನ್ನು ಹರಡುವ ಕೆಲಸ ಮಾಡಲಾಗುತ್ತಿದೆ. ದೇಶದ ಯುವಕರಿಗೆ ಉದ್ಯೋಗ ಹಾಗೂ ಮಹಿಳೆಯರಿಗೆ ಭದ್ರತೆ ಒದಗಿಸಲು ಸರ್ಕಾರ ವಿಫಲವಾಗಿದೆ. ಮೋದಿಯ ಕೈಗೊಂಬೆಗಳಾಗಿರುವ ಇ.ಡಿ ಹಾಗೂ ಸಿಬಿಐ ಸಂಸ್ಥೆಗಳು ವಿಪಕ್ಷಗಳನ್ನು ಬೆದರಿಸುವ ಕೆಲಸ ಮಾಡುತ್ತಿವೆ” ಎಂದರು.

ಜಿಲ್ಲಾ ಪ್ರಧಾನ ಕಚೇರಿಯ ಮೂಲಕ ಲಾಲ್‌ಗಂಜ್‌ ಇಂದಿರಾ ಚೌಕ್‌ಗೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ನಾಯಕರು ಸ್ವಾಗತಿಸಿದರು.

ರಾಜ್ಯಸಭಾ ಸದಸ್ಯ ಪ್ರಮೋದ್ ತಿವಾರಿ, ಶಾಸಕರಾದ ಆರಾಧನ ಮಿಶ್ರಾ ಹಾಗೂ ಕಾಂಗ್ರೆಸ್‌ನ ಅಲ್ಪಸಂಖ್ಯಾತ ಇಲಾಖೆಯ ರಾಷ್ಟ್ರೀಯ ಅಧ್ಯಕ್ಷ ಇಮ್ರಾನ್‌ ಪ್ರತಾಪ್‌ಗಿರಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...