ಮೋದಿ ಮತಗಳ ಕಳವು ಮಾಡಿ ಪ್ರಧಾನಿಯಾಗಿದ್ದಾರೆ, ಸಾಬೀತುಪಡಿಸಬಲ್ಲೆವು: ರಾಹುಲ್ ಗಾಂಧಿ

Date:

ಪ್ರಧಾನಿ ನರೇಂದ್ರ ಮೋದಿ ಅವರು ಮತಗಳ ಕಳವು ಮಾಡಿ ಪ್ರಧಾನಿಯಾಗಿದ್ದಾರೆ. ನಾವು ಕೇಳಿದ ಮಾಹಿತಿಯನ್ನು, ಡೇಟಾವನ್ನು ಚುನಾವಣಾ ಆಯೋಗ ನಮಗೆ ನೀಡಿದರೆ ನಾವು ಅದನ್ನು ಸಾಬೀತುಪಡಿಸಬಲ್ಲೆವು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

- Advertisement -

ಮತ ಕಳವು ವಿರುದ್ಧವಾಗಿ ಶುಕ್ರವಾರ(ಆಗಸ್ಟ್ 8) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಒಬ್ಬ ಮನುಷ್ಯನಿಗೆ ಒಂದು ಮತ ಎಂಬುದನ್ನು ಸಂವಿಧಾನ ಹೇಳುತ್ತದೆ. ಒಂದು ಮತದ ಅಧಿಕಾರವನ್ನು ಸಂವಿಧಾನ ನೀಡುತ್ತದೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಒಬ್ಬರೇ ಹಲವು ಮತ ಹಾಕುವ ಮೂಲಕ ಅಕ್ರಮ ನಡೆದಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಮತ ಕಳವು | ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ರ್‍ಯಾಲಿ: ಹಲವೆಡೆ ಸಂಚಾರ ಬಂದ್, ಬದಲಿ ಮಾರ್ಗ ಪರಿಶೀಲಿಸಿ

“ಕಳೆದ ಚುನಾವಣೆಯಲ್ಲಿ ಬಿಜೆಪಿಯ ಮುಖಂಡರು, ನರೇಂದ್ರ ಮೋದಿ ಈ ಗ್ರಂಥದ(ಸಂವಿಧಾನ) ಮೇಲೆ ದಾಳಿ ನಡೆದಿದ್ದಾರೆ. ಲೋಕಸಭೆ ಚುನಾವಣೆ ಆದ ಬಳಿಕ ಮಹಾರಾಷ್ಟ್ರ ಚುನಾವಣೆ ನಡೆದಿದೆ. ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಇಂಡಿಯಾ ಮೈತ್ರಿಕೂಟಾ ಗೆದ್ದಿದೆ. ಅದಾದ ನಾಲ್ಕು ತಿಂಗಳಲ್ಲೇ ನಡೆದ ವಿಧಾನಸಭೆಯಲ್ಲಿ ಬಿಜೆಪಿ ಗೆದ್ದಿದೆ. ಆಶ್ಚರ್ಯಕರ ಫಲಿತಾಂಶ ಹೊರಬಿದ್ದಿದೆ” ಎಂದರು.

“ಇದಾದ ಬಳಿಕ ಪರಿಶೀಲಿಸಿದಾಗ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಒಂದು ಕೋಟಿ ಅಧಿಕ ಹೊಸ ಮತದಾರರು ಇರುವುದು ತಿಳಿದುಬಂದಿದೆ. ಎಲ್ಲಿ ಹೊಸ ಮತದಾರರು ಇದ್ದಾರೋ ಅಲ್ಲಿ ಬಿಜೆಪಿ ಗೆದ್ದಿದೆ. ಇಂಡಿಯಾ ಒಕ್ಕೂಟದ ಮತವೇನೂ ಕಡಿಮೆಯಾಗಿಲ್ಲ. ಹೊಸ ಮತವೆಲ್ಲವೂ ಬಿಜೆಪಿ ಖಾತೆಗೆ ಸೇರಿದೆ. ಇದು ಹಲವು ಅನುಮಾನಕ್ಕೆ ಕಾರಣವಾಯಿತು” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ನಾವು ನಡೆದ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ 15-16ರಷ್ಟು ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಬೇಕಿತ್ತು. ಆದರೆ ಒಂಬತ್ತರಲ್ಲಿ ಮಾತ್ರ ಗೆಲುವು ಕಂಡಿದ್ದೇವೆ. ನಾವು ನಿಜವಾಗಿಯೂ ಸೋಲು ಕಂಡೆವಾ? ಇದನ್ನು ಪರಿಶೀಲಿಸಲು ಚುನಾವಣಾ ಆಯೋಗದ ಬಳಿ ಮತದಾರರ ಪಟ್ಟಿ ಕೇಳಿದೆವು. ವಿಡಿಯೋಗ್ರಫಿ ಕೇಳಿದೆವು. ಆದರೆ ಆಯೋಗ ನೀಡಲು ನಿರಾಕರಿಸಿತು. ಅಷ್ಟು ಮಾತ್ರವಲ್ಲದೆ 45 ದಿನದಲ್ಲೇ ವಿಡಿಯೋ ಅಳಿಸುವಂತೆ ಕಾನೂನನ್ನೇ ಬದಲಾಯಿಸಿತು” ಎಂದು ದೂರಿದ್ದಾರೆ.

“ನಾವು ಕರ್ನಾಟಕದಲ್ಲಿ ಮಹದೇವಪುರ ಕ್ಷೇತ್ರದ ವಿಶ್ಲೇಷನೆ ಆರಂಭಿಸಿದೆವು. ಈ ಬಗ್ಗೆ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ವಿವರವಾದ ಮಾಹಿತಿಯನ್ನು ನಾನು ನೀಡಿದ್ದೇನೆ, ನೀವು ನೋಡಿರುವಿರಿ. ಇಲ್ಲಿ ಮತ ಕಳವು ಆಗಿರುವುದನ್ನು ನಾವು ಶೇಕಡ 100ರಷ್ಟು ಸಾಬೀತುಪಡಿಸಿದ್ದೇವೆ. ಚುನಾವಣಾ ಆಯೋಗ ಬಿಜೆಪಿ ಜೊತೆ ಸೇರಿ ಮೋಸ ಮಾಡಿದೆ. ಆರುವರೆ ಲಕ್ಷ ಮತದಾರರು ಇರುವ ಮಹದೇವಪುರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳನ್ನು ಕಳವು ಮಾಡಲಾಗಿದೆ. ಅಂದರೆ ಆರರಲ್ಲಿ ಒಂದು ಮತವನ್ನು ಕದಿಯಲಾಗಿದೆ. ಇದೊಂದೇ ಕ್ಷೇತ್ರವಲ್ಲ ಕರ್ನಾಟದಲ್ಲಿ ಇನ್ನೂ ಕೆಲವು ಕ್ಷೇತ್ರಗಳಲ್ಲಿ ಮತಗಳವು ನಡೆದಿದೆ. ಈ ಸಂಬಂಧ ಕರ್ನಾಟಕ ಸರ್ಕಾರ ತನಿಖೆಗೆ ಆದೇಶಿಸಬೇಕು” ಎಂದು ರಾಹುಲ್ ಗಾಂಧಿ ಆಗ್ರಹಿಸಿದರು.

“ನನ್ನ ಬಳಿ ಚುನಾವಣಾ ಆಯೋಗ ಅಫಿಡವಿಟ್ ಕೇಳುತ್ತದೆ. ಪ್ರಮಾಣ ಮಾಡುವಂತೆ ಹೇಳುತ್ತದೆ. ಆದರೆ ನಾನು ಈಗಾಗಲೇ ಸಂಸತ್ತಿನಲ್ಲಿ ಪ್ರಮಾಣ ಮಾಡಿದ್ದೇನೆ, ಸಂವಿಧಾನದ ಮೇಲೆ ಪ್ರಮಾಣ ಮಾಡಿದ್ದೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಎಲ್ಲಾ ಮಾಹಿತಿ ಬಿಡುಗಡೆಯಾಗುತ್ತಿದ್ದಂತೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಜನರು ಪ್ರಶ್ನಿಸುತ್ತಿದ್ದಾರೆ. ಈ ಬೆನ್ನಲ್ಲೇ ಆಯೋಗ ವೆಬ್‌ಸೈಟ್ ಅನ್ನೇ ಬಂದ್ ಮಾಡಿದೆ. ಮಧ್ಯಪ್ರದೇಶ, ಬಿಹಾರದಲ್ಲಿ ವೆಬ್‌ಸೈಟ್ ಬಂದ್ ಮಾಡಲಾಗಿದೆ. ಚುನಾವಣಾ ಆಯೋಗ ನಮಗೆ ಸಂಪೂರ್ಣವಾದ ಮತದಾರರ ಪಟ್ಟಿಯನ್ನು ನೀಡಿದರೆ ನಾವು ಕರ್ನಾಟಕ ಮಾತ್ರವಲ್ಲ ಭಾರತದಾದ್ಯಂತ ನಡೆದಿರುವ ಈ ಮತ ಕಳವನ್ನು ಸಾಕ್ಷಿ ಸಮೇತ ಬಹಿರಂಗಪಡಿಸಬಲ್ಲೆವು” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...