ಜನರು ಸಂಕಷ್ಟದಲ್ಲಿರುವಾಗ ರೋಮ್‌ನಲ್ಲಿ ಮಿಠಾಯಿ ಹಂಚಿ ರೀಲ್ಸ್‌ ಮಾಡುತ್ತಿರುವ ಪಿಎಂ ಮೋದಿ: ರಾಹುಲ್ ಗಾಂಧಿ

Date:

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ‘ಮೆಲೋಡಿ’ ಚಾಕೊಲೇಟ್ ನೀಡಿ ಮಾಡಿರುವ ರೀಲ್ಸ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಉಲ್ಲೇಖಿಸಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ದೇಶದಲ್ಲಿ ತೀವ್ರ ಆರ್ಥಿಕ ಸಂಕಷ್ಟ ಎದುರಾಗಿದ್ದರೂ ಪ್ರಧಾನಿ ವಿದೇಶದಲ್ಲಿ ರೀಲ್ಸ್ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

- Advertisement -

ಪ್ರಧಾನಿ ಮೋದಿ ಮತ್ತು ಮೆಲೋನಿ ಇವರಿಬ್ಬರ ಸ್ನೇಹವನ್ನು ‘ಮೆಲೋಡಿ’ (Melodi – Modi + Meloni) ಎಂದು ಬಿಜೆಪಿಗರು ಹೇಳುತ್ತಿದ್ದರು. ಈ ನಡುವೆ ಪ್ರಧಾನಿ ಮೋದಿ ಅವರು ಮೆಲೋನಿ ಅವರಿಗೆ ‘ಮೆಲೋಡಿ’ ಚಾಕೊಲೇಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ವಿಡಿಯೋವನ್ನು ಮೆಲೋನಿ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಅಪ್ಪಳಿಸಲಿದೆ ಆರ್ಥಿಕ ದುರ್ದಿನಗಳ ಸುಂಟರಗಾಳಿ: ಈ ಹಿಂದಿನಂತೆ ಈ ಸಲವೂ ನಿಜವಾಗುತ್ತಾ ರಾಹುಲ್ ಭವಿಷ್ಯ?

ವಿಡಿಯೋದಲ್ಲಿ ಮೆಲೋನಿ ಅವರು, “ಪ್ರಧಾನಿ ಮೋದಿ ಅವರು ನನಗೆ ತುಂಬಾ ರುಚಿಕರವಾದ ಭಾರತೀಯ ಟಾಫಿ ‘ಮೆಲೋಡಿ’ಯನ್ನು ಉಡುಗೊರೆಯಾಗಿ ತಂದಿದ್ದಾರೆ” ಎಂದು ಹೇಳುತ್ತಾ ನಗುವುದು ಕಾಣಬಹುದು. ಇದಕ್ಕೆ ಮೋದಿ ಅವರು ಕೂಡ ನಗುವಿನ ಮೂಲಕ ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ವಿಪಕ್ಷಗಳು ಪ್ರಧಾನಿ ಮೋದಿ ಅವರನ್ನು ಟೀಕಿಸಿದೆ.

“ದೇಶದ ರೈತರು, ಯುವಕರು, ಮಹಿಳೆಯರು, ಕಾರ್ಮಿಕರು ಹಾಗೂ ಸಣ್ಣ ವ್ಯಾಪಾರಿಗಳು ಬೆಲೆ ಏರಿಕೆ ಮತ್ತು ಆರ್ಥಿಕ ಚಂಡಮಾರುತದಿಂದಾಗಿ ಕಣ್ಣೀರು ಹಾಕುತ್ತಿದ್ದಾರೆ. ದೇಶ ಇಂತಹ ಕಠಿಣ ಪರಿಸ್ಥಿತಿಯಲ್ಲಿದ್ದರೂ, ಪ್ರಧಾನಿ ಮೋದಿ ಇಟಲಿಯಲ್ಲಿ ನಗುತ್ತಾ ರೀಲ್ಸ್ ಮಾಡುತ್ತಿದ್ದಾರೆ, ಸಿಹಿತಿಂಡಿ ಹಂಚುತ್ತಿದ್ದಾರೆ. ಇದು ಕೇವಲ ‘ಗಿಮಿಕ್’ (ನೌಟಂಕಿ), ನಾಯಕತ್ವವಲ್ಲ” ಎಂದು ಹೇಳಿದ್ದಾರೆ.

“ಸಾರ್ವಜನಿಕರಿಗೆ ವಿದೇಶಿ ಪ್ರವಾಸ ಮಾಡಬೇಡಿ, ಪೆಟ್ರೋಲ್-ಡೀಸೆಲ್ ಕಡಿಮೆ ಬಳಸಿ ಎಂದು ಪ್ರಧಾನಿ ಕರೆ ನೀಡಿದ್ದರು. ಆದರೆ ತಾವೇ ಕೋಟ್ಯಂತರ ರೂಪಾಯಿ ವೆಚ್ಚದ ವಿಮಾನದಲ್ಲಿ ವಿದೇಶ ಪ್ರವಾಸ ಮಾಡುತ್ತಿದ್ದಾರೆ” ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಗ್ಯಾನೇಶ್ ರಕ್ಷಣೆಗಾಗಿ ಯುವತಿಯರನ್ನು ಪೀಡಿಸುವ ಕೀಚಕರಾಗುತ್ತಿದ್ದಾರೆಯೇ ದೆಹಲಿ ಪೊಲೀಸರು?

ರಕ್ಷಕರೇ ಭಕ್ಷಕರಾಗುವ ಅದೇ ಹಳೆಯ ನಿರಾಶಾಜನಕ ಕತೆಯಿದು. ದೆಹಲಿ ಪ್ರತಿಭಟನೆಯಲ್ಲಿ ಪೊಲೀಸರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...