ಹರಿಯಾಣ | ಸೋನಿಪತ್‌ಗೆ ರಾಹುಲ್ ಗಾಂಧಿ ಭೇಟಿ, ರೈತರೊಂದಿಗೆ ಭತ್ತ ನಾಟಿ, ಟ್ರ್ಯಾಕ್ಟರ್ ಚಾಲನೆ

Date:

  • ಬರೊಡಾ, ಮದೀನಾಗಳಲ್ಲಿನ ಗ್ರಾಮಗಳ ರೈತರ ಜೊತೆ ರಾಹುಲ್ ಬಿತ್ತನೆ
  • ಮೇನಲ್ಲಿ ದೆಹಲಿ-ಚಂಡೀಗಢ ಹೆದ್ದಾರಿಯಲ್ಲಿ ಚಾಲಕರ ಜೊತೆ ಟ್ರಕ್‌ನಲ್ಲಿ ಪ್ರಯಾಣಿಸಿದ್ದ ರಾಹುಲ್

ಹರಿಯಾಣದ ಸೋನಿಪತ್ ಜಿಲ್ಲೆಗೆ ಶನಿವಾರ (ಜುಲೈ 8) ಬೆಳಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಿಢೀರ್ ಭೇಟಿ ನೀಡಿದ್ದು ಗ್ರಾಮಸ್ಥರನ್ನು ಭೇಟಿಯಾಗಿ ರೈತರೊಂದಿಗೆ ಸಂವಾದ ನಡೆಸಿದ್ದಾರೆ.

- Advertisement -

ಇದೇ ವೇಳೆ ರೈತರ ಜೊತೆ ಗದ್ದೆಯಲ್ಲಿ ಬಿತ್ತನೆ ಮಾಡುವ ಪ್ರಕ್ರಿಯೆಗೆ ಕೈಜೋಡಿಸಿದ್ದಾರೆ. ಗದ್ದೆಯಲ್ಲಿ ಟ್ರ್ಯಾಕ್ಟರ್ ಚಾಲನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಾಹುಲ್ ಗಾಂಧಿ ಅವರು ದೆಹಲಿಯಿಂದ ಶಿಮ್ಲಾಗೆ ತೆರಳುತ್ತಿದ್ದ ಮಾರ್ಗದಲ್ಲಿ ಬರೋಡಾದ ನಾನಾ ಗ್ರಾಮಗಳ ರೈತರನ್ನು ಭೇಟಿಯಾಗಿದ್ದಾರೆ.

ಸೋನಿಪತ್‌ಗೆ ಭೇಟಿ ನೀಡಿರುವ ರಾಹುಲ್‌ ಅವರು ಬರೋಡಾ ಮತ್ತು ಮದೀನಾಗಳಲ್ಲಿನ ಗದ್ದೆಗಳಲ್ಲಿ ರೈತರೊಂದಿಗೆ ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಗಬೀರ್ ಸಿಂಗ್ ಮಲಿಕ್ ತಿಳಿಸಿದ್ದಾರೆ.

ರಾಹುಲ್ ಅವರು ಟ್ರ್ಯಾಕ್ಟರ್ ಚಾಲನೆ ಮಾಡುತ್ತಿರುವುದು, ಬಿತ್ತನೆ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರೈತರ ಜತೆ ಸೇರಿ ರಾಹುಲ್ ಅವರು ಬಿತ್ತನೆ ಹಾಗೂ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿರುವ ಫೋಟೋಗಳನ್ನು ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಒಂದೇ ದಿನ 5 ಕೋಟಿ ದಾಟಿದ ಮೆಟಾದ ‘ಥ್ರೆಡ್ಸ್’ ಬಳಕೆದಾರರು | ಟ್ವಿಟರ್‌ನಿಂದ ಬೆದರಿಕೆ

ಕಳೆದ ಮೇನಲ್ಲಿ ಟ್ರಕ್ ಚಾಲಕರ ಸಮಸ್ಯೆಗಳನ್ನು ಅರಿತುಕೊಳ್ಳಲು ರಾಹುಲ್ ಗಾಂಧಿ ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದ್ದರು.

ಭಾರತ್ ಜೋಡೋ ಯಾತ್ರೆ ವೇಳೆಯೂ ರಾಹುಲ್ ಅವರು ಮಾರ್ಗಮಧ್ಯದಲ್ಲಿ ಅನೇಕ ಜನರ ಜತೆ ಸಂವಾದ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...