ಸಂಸತ್ತಿನಲ್ಲಿ ನೀಟ್ ಚರ್ಚೆಗೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

Date:

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌-ಯುಜಿ ವಿವಾದದ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

- Advertisement -

“ನೀಟ್‌ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿ ಈ ಪತ್ರ ಬರೆಯುತ್ತಿದ್ದೇನೆ. ನಿಮಗೆ ತಿಳಿದಿರುವಂತೆ ನೀಟ್‌ ವಿಷಯದ ಬಗ್ಗೆ ವಿಪಕ್ಷಗಳ ಮನವಿಯನ್ನು ಜೂನ್‌ 28ರಂದು ಸಂಸತ್ತಿನ ಎರಡೂ ಸದನಗಳಲ್ಲಿ ನಿರಾಕರಿಸಲಾಯಿತು. ನಿನ್ನೆ ಇದೇ ವಿಷಯವಾಗಿ ಚರ್ಚಿಸಲು ವಿಪಕ್ಷ ಮನವಿ ಮಾಡಿತ್ತು. ಲೋಕಸಭೆಯ ಗೌರನಾನ್ವಿತ ಸ್ಪೀಕರ್‌ ಅವರು ಸರ್ಕಾರದೊಂದಿಗೆ ಚರ್ಚಿಸುವುದಾಗಿ ವಿಪಕ್ಷಕ್ಕೆ ಮಾತು ಕೊಟ್ಟಿದ್ದರು” ಎಂದು ರಾಹುಲ್ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ನಮ್ಮ ಉದ್ದೇಶ ರಚನಾತ್ಮಕವಾಗಿ ಮುಂದಿನ ದಾರಿಯನ್ನು ಕಂಡುಕೊಳ್ಳುವುದಾಗಿದೆ. ಈ ಸಂದರ್ಭದಲ್ಲಿ ನಮ್ಮ ಒಂದೇ ಕಾಳಜಿ ಭಾರತದಾದ್ಯಂತ ಸುಮಾರು 24 ಲಕ್ಷ ನೀಟ್‌ ಆಕಾಂಕ್ಷಿಗಳ ಅಬ್ಯುದಯವಾಗಿದೆ. ಲಕ್ಷಾಂತರ ಕುಟುಂಬಗಳು ತಮ್ಮ ಮಕ್ಕಳಿಗಾಗಿ ವೈಯುಕ್ತಿಕವಾಗಿ ಅದ್ಭುತ ತ್ಯಾಗ ಮಾಡಿದ್ದಾರೆ. ಇವರಲ್ಲಿ ಬಹುತೇಕರಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಜೀವಮಾನದ ಕನಸಿಗೆ ದ್ರೋಹವಾಗಿದೆ” ಎಂದು ರಾಹುಲ್‌ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೊದಲ ಭಾಷಣದಲ್ಲೇ ಬಿಜೆಪಿಗರ ಬೆವರಿಳಿಸಿದ ರಾಹುಲ್ ಮತ್ತು ಮಹುವಾ

“ಇಂದು ಈ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳು ನಮ್ಮ ಕಡೆ ಮುಖ ಮಾಡಿದ್ದಾರೆ.ಅವರ ಸಾರ್ವಜನಿಕ ಪ್ರತಿನಿಧಿಗಳಾಗಿ ಸಮಸ್ಯೆಯನ್ನು ಪರಿಹರಿಸಲು ದಿಟ್ಟ ಹಾಗೂ ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದೆ. ನೀಟ್‌ ಪರೀಕ್ಷೆ ಅಕ್ರಮಗಳಿಂದಾಗಿ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಹೊಲಸುಗೊಂಡಿರುವುದರಿಂದ ತಕ್ಷಣ ಗಮನಹರಿಸಬೇಕಿದೆ. ಕಳೆದ 7 ವರ್ಷಗಳಲ್ಲಿ 70 ಪ್ರಶ್ನೆ ಪರೀಕ್ಷೆ ಸೋರಿಕೆಗಳನ್ನು ನೋಡಿದ್ದೇವೆ” ಎಂದು ರಾಹುಲ್ ತಿಳಿಸಿದ್ದಾರೆ.

“ಸರ್ಕಾರವು ಪರೀಕ್ಷೆಗಳನ್ನು ಮುಂದೂಡಿದ್ದು, ಶಿಕ್ಷಣ ವ್ಯವಸ್ಥೆಯ ಅತ್ಯಂತ ಆಳವಾಗಿರುವ ಅಸಮರ್ಪಕ ವ್ಯವಸ್ಥೆಯನ್ನು ಮರೆಮಾಚಲು ಎನ್‌ಟಿಎದ ಮುಖ್ಯಸ್ಥರನ್ನು ಬದಲಿಸಿದೆ. ನಮ್ಮ ವಿದ್ಯಾರ್ಥಿಗಳು ಉತ್ತರಗಳಿಗೆ ಅರ್ಹರಾಗಿದ್ದರು. ಸಂಸತ್ತಿನ ಚರ್ಚೆಯು ವಿದ್ಯಾರ್ಥಿಗಳಲ್ಲಿ ತಮ್ಮ ಗುರಿಯನ್ನು ಮರಳಿ ಪಡೆಯುವುದರತ್ತ ದಾರಿ ಮಾಡಿಕೊಡಬಹುದು.ಈ ವಿಷಯವನ್ನು ತುರ್ತಾಗಿ ಪರಿಗಣಿಸಬೇಕಾಗಿದೆ. ಹಾಗಾಗಿ ನಾನು ಸರ್ಕಾರವು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ. ನೀವು ಈ ಚರ್ಚೆಯನ್ನು ಮುನ್ನೆಡೆಸಿದರೆ ಸೂಕ್ತವಾಗಿರುತ್ತದೆ ಎಂದು ನಾನು ನಂಬಿದ್ದೇನೆ” ಎಂದು ರಾಹುಲ್‌ ಗಾಂಧಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....