ಬಿಜೆಪಿಯೊಂದಿಗೆ ಚುನಾವಣಾ ಆಯೋಗ ಕೈಜೋಡಿಸಿದೆ ಎಂದು ಆರೋಪಿಸಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ತಿರುಗೇಟು ನೀಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಇದು ಹತಾಶೆಯ ಪರಮಾವಧಿ ಎಂದಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾತ್ರ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣದಲ್ಲಿ ಗೆಲುವು ಸಾಧಿಸಿದಾಗ ಯಾವುದೇ ರೀತಿಯ ಆಕ್ಷೇಪ ವ್ಯಕ್ತಪಡಿಸಲಿಲ್ಲ. ನಿಮ್ಮ ಪಕ್ಷ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಿದಾಗ ಚುನಾವಣಾ ಆಯೋಗದಿಂದ ವಂಚನೆಯಾಗಿದೆ ಎಂದು ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸಿಲ್ಲ, ಈ ಆಯ್ದ ಆಕ್ರೋಶವನ್ನು ದೇಶದ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿ ಮೋದಿಗೆ ಅದಾನಿ-ಅಂಬಾನಿ ದೋಸ್ತಿ ತಂದ ದುರ್ಗತಿ
ಭಾರತೀಯ ಚುನಾವಣಾ ಆಯೋಗವು ರಾಜಿ ಮಾಡಿಕೊಂಡಿದೆ ಎನ್ನುವ ರಾಹುಲ್, ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿನ 99 ಸ್ಥಾನಗಳ ವಿಜಯವನ್ನು ಹೇಗೆ ಆಚರಿಸಬಹುದು ಎಂದು ಪ್ರಶ್ನಿಸಿದರು. ಬಿಜೆಪಿ ದೀರ್ಘಕಾಲ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತರು ನಮ್ಮ ಯಾವ ನಾಯಕರು ಕೂಡ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಬೆದರಿಕೆ ಹಾಕಿರಲಿಲ್ಲ ಎಂದರು.
ನನ್ನ ಪತ್ರಿಕಾಗೋಷ್ಠಿಗೆ ಯಾವುದೇ ಉತ್ತರ ನೀಡದಿದ್ದರೆ, ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದಿರುವ ರಾಹುಲ್ ಗಾಂಧಿ, ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಚುನಾವಣಾ ಆಯೋಗದ ಪ್ರತಿಯೊಬ್ಬ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ. ಇದು ವಿಪಕ್ಷ ನಾಯಕ ಬಳಸುವ ಭಾಷೆಯೇ?, ಅಲ್ಲ ಇದು ಚುನಾವಣಾ ಕೋಪದ ಭಾಷೆ ಎಂದರು.