ಪಶ್ಚಿಮ ಬಂಗಾಳದಲ್ಲಿ ರಾಹುಲ್ ಕಾರಿನ ಮೇಲೆ ಕಲ್ಲು ತೂರಾಟಕ್ಕೆ ಕಾಂಗ್ರೆಸ್ ಸ್ಪಷ್ಟನೆ

Date:

ಪಶ್ಚಿಮ ಬಂಗಾಳದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಸಾಗುತ್ತಿದ್ದ ಸಂದರ್ಭದಲ್ಲಿ ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.

- Advertisement -

ಇಂದು ಬಂಗಾಳದ ಮಾಲ್ದಾ ಜಿಲ್ಲೆಯಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಸಾಗುತ್ತಿದ್ದ ಸಂದರ್ಭದಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಂಗಾಳದ ರಾಜ್ಯ ಘಟಕದ ಅಧ್ಯಕ್ಷರಾದ ಅಧೀರ್ ರಂಜನ್ ಚೌಧರಿ ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಬಿಹಾರದಿಂದ ಪಶ್ಚಿಮ ಬಂಗಾಳದ ಹರಿಶ್ಚಂದ್ರ ಪುರ್ ಪ್ರದೇಶಕ್ಕೆ ಯಾತ್ರೆ ಪ್ರವೇಶಿಸಿದಾಗ ಬಹುಶಃ ಗುಂಪಿನಲ್ಲಿ ಹಿಂದಿನಿಂದ ಯಾರೋ ಒಬ್ಬರು ಕಲ್ಲು ತೂರಿದ್ದಾರೆ. ಪೊಲೀಸ್ ಪಡೆ ಇದನ್ನು ನಿರ್ಲಕ್ಷ್ಯ ವಹಿಸಿದೆ. ಇದು ಸಣ್ಣ ಘಟನೆಯಾದರೂ ಏನಾದರೂ ಆಗಬಹುದಿತ್ತು” ಎಂದು ಅಧೀರ್ ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶೂದ್ರ ಸ್ವಾಮಿ ಕೇಸರಿ ಸ್ವಾಮಿಯಾಗುವುದು ತಪ್ಪೇ?

ಇದಕ್ಕೆ ಸ್ಪಷ್ಟನೆ ನೀಡಿರುವ ಕಾಂಗ್ರೆಸ್, ಇದು ತಪ್ಪಾದ ಸುದ್ದಿ. ಒಂದು ದೊಡ್ಡ ಗುಂಪು ರಾಹುಲ್ ಅವರನ್ನು ಭೇಟಿ ಮಾಡಲು ಬಂದಾಗ ಗುಂಪಿನಲ್ಲಿದ್ದ ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ರಾಹುಲ್ ಅವರ ಕಾರಿನ ಬಳಿ ಬಂದಿದ್ದಾರೆ. ತಕ್ಷಣ ಕಾರ್ ಬ್ರೇಕ್‌ ಹಾಕಿದಾಗ ಭದ್ರತಾ ವೃತ್ತದಲ್ಲಿದ್ದ ಹಗ್ಗ ತಗುಲಿ ಗಾಜು ಒಡೆದಿದೆ. ಜನ ನಾಯಕ ರಾಹುಲ್ ಗಾಂಧಿ ಅವರು ಜನರಿಗೆ ಅನ್ಯಾಯದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಜನರು ಅವರ ಜೊತೆಗಿದ್ದಾರೆ. ಜನರು ಅವರನ್ನು ರಕ್ಷಿಸುತ್ತಾರೆ” ಎಂದು ಎಕ್ಸ್‌ನಲ್ಲಿ ತಿಳಿಸಲಾಗಿದೆ.

ಬಂಗಾಳದಲ್ಲಿ ಲೋಕಸಭಾ ಚುನಾವಣೆಗಾಗಿ ಟಿಎಂಸಿ ಹಾಗೂ ಕಾಂಗ್ರೆಸ್ ನಡುವೆ ಚುನಾವಣಾ ಮೈತ್ರಿಯಲ್ಲಿ ಉಂಟಾದ ಅಸಮಾಧಾನದಿಂದ ದಾಳಿಯ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಸದ್ಯ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳದೆ ಪ್ರತ್ಯೇಕವಾಗಿ ಸ್ಪರ್ಧಿಸುವುದಾಗಿ ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...