ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ರಾಹುಲ್ ಗಾಂಧಿ ತೆರಳುತ್ತಿದ್ದ ಹೆಲಿಕಾಪ್ಟರ್‌ಅನ್ನು ತಪಾಸಣೆಗೊಳಪಡಿಸಿದ್ದಾರೆ.
ನೀಲಗಿರಿ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಆದ ನಂತರ ವೈಮಾನಿಕ ದಳದ ಅಧಿಕಾರಿಗಳು ತಪಾಸಣೆ ನಡೆಸಿದರು.
ಕೇರಳದ ತಮ್ಮ ಲೋಕಸಭಾ ಕ್ಷೇತ್ರ ವಯನಾಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ರಾಹುಲ್ ಗಾಂಧಿ ಕೇರಳದಲ್ಲಿ ರೋಡ್‌ಶೋ, ಸಾರ್ವಜನಿಕ ಭಾಷಣ ಸೇರಿದಂತೆ ಹಲವು ಪ್ರಚಾರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ
2019ರಲ್ಲಿ ವಯನಾಡುವಿನಿಂದ ಸಂಸದರಾಗಿದ್ದ ರಾಹುಲ್ ಗಾಂಧಿ, ಈಗ ಎರಡನೇ ಬಾರಿ ಕಣಕ್ಕಿಳಿದಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷ ಸಿಪಿಐನ ಅನ್ನೇ ರಾಜ ಹಾಗೂ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಕೆ ಸುರೇಂದ್ರನ್ ಕೂಡ ಸ್ಪರ್ಧಿಸಿದ್ದಾರೆ.
ಕೇರಳದ 20 ಕ್ಷೇತ್ರಗಳ ಲೋಕಸಭಾ ಚುನಾವಣೆಯು ಒಂದೇ ಹಂತದಲ್ಲಿ ಏ.26 ರಂದು ನಡೆಯಲಿದೆ. ತಮಿಳುನಾಡಿನಲ್ಲೂ ಕೂಡ ಏ.19ರಂದು 39 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
