ಬಿಜೆಪಿ 400 ಸ್ಥಾನ ಗೆಲ್ಲುವುದಾಗಿ ಎಲ್ಲ ಕಡೆ ಪ್ರಚಾರ ಮಾಡುತ್ತಿರುವ ಮರ್ಮದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನುಮಾನ ವ್ಯಕ್ತಪಡಿಸಿದ್ದಾರೆ.
ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಅರವಿಂದ್ ಕೇಜ್ರಿವಾಲ್ ಬಂಧನದ ವಿರುದ್ಧ ಇಂಡಿಯಾ ಒಕ್ಕೂಟದಿಂದ ಹಮ್ಮಿಕೊಂಡಿರುವ ‘ಪ್ರಜಾಪ್ರಭುತ್ವ ಉಳಿಸಿ’ ರ್‍ಯಾಲಿಯಲ್ಲಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
“ಇವಿಎಂಗಳು, ಮ್ಯಾಚ್ ಫಿಕ್ಸಿಂಗ್, ಸಾಮಾಜಿಕ ಮಾಧ್ಯಮ ಹಾಗೂ ಮಾಧ್ಯಮಗಳ ಮೇಲೆ ಒತ್ತಡವಿಲ್ಲದೆ ಬಿಜೆಪಿ 180ಕ್ಕೂ ಅಧಿಕ ಸ್ಥಾನ ಗೆಲ್ಲುವುದಿಲ್ಲ.ಪಕ್ಷದ 400 ಸ್ಥಾನಗಳ ಘೋಷವಾಕ್ಯವು ಮ್ಯಾಚ್ ಫಿಕ್ಸಿಂಗ್ ಇಲ್ಲದೆ ಸಾಧ್ಯವಿಲ್ಲ. ಇವರು ತಮ್ಮ 400ರ ಸಂಖ್ಯೆಗಾಗಿ ಅಂಪೈರ್ ಬಳಿ ಹೋಗಿದ್ದಾರೆ” ಎಂದು ಹೇಳಿದರು.
“ ಈಗ ಐಪಿಎಲ್ ಪಂದ್ಯಗಳು ನಡೆಯುತ್ತಿವೆ. ಅಂಪೈರ್‌ಗಳು ಒತ್ತಡದಲ್ಲಿದ್ದರೆ, ಆಟಗಾರರು ಹಾಗೂ ನಾಯಕರ ಮೇಲೆ ಒತ್ತಡ ಹಾಕಿ ಪಂದ್ಯಗಳನ್ನು ಗೆಲ್ಲಿಸುತ್ತಾರೆ. ಇದನ್ನು ಕ್ರಿಕೆಟ್‌ನಲ್ಲಿ ಮ್ಯಾಚ್ ಫಿಕ್ಸಿಂಗ್” ಎಂದು ಕರೆಯಲಾಗುತ್ತದೆ.ನಾವು ಲೋಕಸಭಾ ಚುನಾವಣೆಗೆ ಹೋಗುವ ಮುಂಚೆ ಪ್ರಧಾನಿಯವರು ಅಂಪೈರ್‌ಗಳನ್ನು ಫಿಕ್ಸ್ ಮಾಡಿಕೊಂಡಿದ್ದಾರೆ. ಮ್ಯಾಚ್ ಶುರುವಾಗುವುದಕ್ಕೂ ಮುಂಚೆ ನಮ್ಮ ತಂಡದ ಇಬ್ಬರು ನಾಯಕರನ್ನು ಬಂಧಿಸಲಾಗಿದೆ” ಎಂದು ರಾಹುಲ್ ಗಾಂಧಿ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಕಾಲದಲ್ಲಿ ಮೋದಿಯ ಬಾಂಡ್ ಭಯೋತ್ಪಾದನೆ
“ಕಾಂಗ್ರೆಸ್ ಅತಿ ದೊಡ್ಡ ವಿಪಕ್ಷಗಳಾಗಿದ್ದು,ನಮ್ಮ ಎಲ್ಲ ಬ್ಯಾಂಕ್ ಅಕೌಂಟ್‌ಗಳನ್ನು ಚುನಾವಣೆಗೂ ಮುನ್ನವೆ ಸ್ಥಗಿತಗೊಳಿಸಲಾಗಿದೆ. ನಾವು ಪ್ರಚಾರಗಳನ್ನು ನಡೆಸಬೇಕು, ಕಾರ್ಯಕರ್ತರನ್ನು ರಾಜ್ಯಗಳಿಗೆ ಕಳಿಸಬೇಕು, ಪೋಸ್ಟರ್‌ಗಳನ್ನು ಅಂಟಿಸಬೇಕು ಆದರೆ ನಮ್ಮ ಎಲ್ಲ ಬ್ಯಾಂಕ್ಗಳನ್ನು ಸ್ಥಗಿತಗೊಳಿಸಲಾಗಿದೆ. ಇದು ಯಾವ ರೀತಿಯ ಚುನಾವಣೆ” ಎಂದು ರಾಹುಲ್ ಗಾಂಧಿ ಪ್ರಶ್ನಿಸಿದರು.
“ಪ್ರಧಾನಿಯಿಂದ ಮ್ಯಾಚ್ ಫಿಕ್ಸಿಂಗ್ ಮುಗಿದಿದೆ. ಮೂರರಿಂದ ನಾಲ್ಕು ಕ್ರೋನಿ ಬಂಡವಾಳಶಾಹಿಗಳು ಬಡವರಿಂದ ಸಂವಿಧಾನವನ್ನು ಕಿತ್ತುಕೊಳ್ಳುತ್ತಿದ್ದಾರೆ” ಎಂದು ಹೇಳಿದರು.
“ಈ ಚುನಾವಣೆಯು ಸಾಮಾನ್ಯ ಚುನಾವಣೆಯಲ್ಲ. ಇದು ದೇಶ ಮತ್ತು ಸಂವಿಧಾನವನ್ನು ಉಳಿಸುವುದಾಗಿದೆ. ನೀವು ಪೂರ್ತಿ ಪಡೆಯೊಂದಿಗೆ ಮತ ನೀಡದಿದ್ದರೆ ಮ್ಯಾಚ್ ಫಿಕ್ಸಿಂಗ್ ಯಶಸ್ವಿಯಾಗುತ್ತದೆ. ಇದು ಯಶಸ್ವಿಯಾದರೆ ಸಂವಿಧಾನ ನಾಶವಾಗುತ್ತದೆ. ಸಂವಿಧಾನವು ಜನರ ಧನಿಯಾಗಿದೆ. ಅದು ಮುಗಿದು ಹೋದರೆ ದೇಶವು ಮುಗಿದುಹೋಗುತ್ತದೆ” ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ ಬಿಜೆಪಿ 400 ಸೀಟುಗಳನ್ನು ಪಡೆದರೆ ಸಂವಿಧಾನವನ್ನು ಬದಲಿಸುತ್ತೇವೆ ಎಂಬ ಹೇಳಿಕೆಯನ್ನು ಮೊದಲಿಸಿದ ರಾಹುಲ್ ಗಾಂಧಿ, ಈ ರೀತಿ ಹೇಳಿಕೆಯು ತಮ್ಮ ಪ್ರಾಯೋಗಿಕ ಪರೀಕ್ಷೆಯನ್ನು ಜನರಿಗೆ ತಿಳಿಸುವುದಾಗಿದ್ದು” ಎಂದು ಹೇಳಿದರು.
ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ರ್ಯಾಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್, ಹೇಮಂತ್ ಸೊರೇನ್ ಪತ್ನಿ ಕಲ್ಪನಾ ಸೊರೇನ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜಿನ ಖರ್ಗೆ, ರಾಹುಲ್ ಗಾಂಧಿ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ, ಎಸ್‌ಪಿ ನಾಯಕ ಅಖಿಲೇಶ್ ಯಾದವ್, ತೃಣಮೂಲ ಕಾಂಗ್ರೆಸ್‌ನ ಇಬ್ಬರು ಸಂಸದರು ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದಾರೆ.
