ಅಮೇಥಿಯಿಂದ ರಾಹುಲ್ ಸ್ಪರ್ಧೆ; ರಾಯ್‌ಬರೇಲಿಯಿಂದ ಪ್ರಿಯಾಂಕಾ ಸಾಧ್ಯತೆ!

Date:

Advertisements

ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. 2002ರಿಂದ ಹಲವು ಬಾರಿ ಸ್ಪರ್ಧಿಸಿರುವುದರಿಂದ ರಾಹುಲ್ ಇಲ್ಲಿಂದಲೇ ಸ್ಪರ್ಧಿಸಿದ್ದಾರೆ ಎಂದು ಹೇಳಿದ್ದಾರೆ.

ದೆಹಲಿಯಿಂದ ಸಭೆ ಮುಗಿಸಿಕೊಂಡು ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಪ್ರದೀಪ್ ಸಿಂಘಾಲ್, ಅಮೇಥಿಯಿಂದ ರಾಹುಲ್‌ ಗಾಂಧಿ ಪಕ್ಷದ ಅಭ್ಯರ್ಥಿಯಾಗುತ್ತಾರೆ. ಅವರ ಹೆಸರನ್ನು ಶೀಘ್ರದಲ್ಲೇ ಘೋಷಿಸಲಾಗುತ್ತದೆ ಎಂದು ಸಿಂಘಾಲ್ ಹೇಳಿದರು.

ರಾಹುಲ್ ಗಾಂಧಿ 2002 ರಿಂದ 2019ರವರೆಗೆ ಅಮೇಥಿಯ ಲೋಕಸಭಾ ಸದಸ್ಯರಾಗಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಪರಾಭವಗೊಂಡಿದ್ದರು. ಪ್ರಸ್ತುತ ಕೇರಳದ ವಯನಾಡು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

Advertisements

ರಾಯ್‌ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಈ ಬಾರಿ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕಾರಣ ಈ ಬಾರಿ ರಾಯ್‌ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!

ರಾಯ್‌ಬರೇಲಿಯಿಂದ 1952ರಿಂದ 2019ರವರೆಗೂ ನೆಹರು ಕುಟುಂಬದ ಫಿರೋಜ್ ಗಾಂಧಿ, ಇಂದಿರಾ ಗಾಂಧಿ, ಅರುಣ್‌ ನೆಹರು, ಸೋನಿಯಾ ಗಾಂಧಿ ಅವರು 12 ಬಾರಿ ಸೇರಿ 17 ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. 1977 ಜನತಾ ಅಭ್ಯರ್ಥಿ ಹಾಗೂ 1996 ಹಾಗೂ 1998 ರಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದರು.

ಕ್ಷೇತ್ರದಲ್ಲಿ ಗಾಂಧಿ ಕುಟುಂಬದವರನ್ನು ಹೆಚ್ಚು ಗೆಲ್ಲಿಸಿದ ಕಾರಣ ಇತ್ತೀಚಿಗೆ ರಾಯ್‌ಬರೇಲಿಯಲ್ಲಿ ಭಾವನಾತ್ಮಕವಾಗಿ ಪ್ರಿಯಾಂಕಾ ಗಾಂಧಿ ಸಾರ್ವಜನಿಕ ಭಾಷಣ ಮಾಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X