ಒಡಿಶಾ ರೈಲು ದುರಂತ | ಹಳಿ ಬದಲಿಸುವ ವ್ಯವಸ್ಥೆಯ ದೋಷ ಕಾರಣ; ಸಚಿವ ಅಶ್ವಿನಿ ವೈಷ್ಣವ್

Date:

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ  ಭೀಕರ ರೈಲು ಅಪಘಾತಕ್ಕೆ ಹಳಿ ಬದಲಿಸುವ ವ್ಯವಸ್ಥೆಯಲ್ಲಿನ (ಎಲೆಕ್ಟ್ರಾನಿಕ್​ ಇಂಟರ್​ಲಾಕಿಂಗ್​ ಸಿಸ್ಟಮ್​) ದೋಷವೇ ಕಾರಣ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

- Advertisement -

288 ಜನರನ್ನು ಬಲಿ ಪಡೆದ ತ್ರಿವಳಿ ರೈಲು ಅಪಘಾತದ ಘಟನಾ ಸ್ಥಳದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು,  `ರೈಲು ಅಪಘಾತ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಅಪಘಾತದ ಮೂಲ ಕಾರಣ ಮತ್ತು ಅದಕ್ಕೆ ಕಾರಣವಾದ ಅಪರಾಧಿಗಳನ್ನು ಗುರುತಿಸಲಾಗಿದೆ’ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಹಾನಿಗೀಡಾಗಿರುವ ರೈಲು ಹಳಿಗಳ ದುರಸ್ತಿ ಕಾರ್ಯ ಭರದಿಂದ ಸಾಗಿದ್ದು, ರೈಲ್ವೆ ಅಧಿಕಾರಿಗಳ ಜೊತೆ ಘಟನಾ ಸ್ಥಳದಲ್ಲಿ ಮೊಕ್ಕಾಂ ಹೂಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆ ವಹಿಸಿದ್ದಾರೆ.

ಸಿಬಿಐ ತನಿಖೆ

ತ್ರಿವಳಿ ರೈಲು ಅಪಘಾತದ ಕುರಿತಾದ ಆಡಳಿತಾತ್ಮಕ ಮಾಹಿತಿಯನ್ನು ಪರಿಗಣನೆಗೆ ಇಟ್ಟುಕೊಂಡು ರೈಲ್ವೆ ಮಂಡಳಿಯು, ಸಂಪೂರ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಶಿಫಾರಸು ಮಾಡಿದೆʼ ಎಂದು ರೈಲ್ವೆ ಸಚಿವರು ಹೇಳಿದ್ದಾರೆ.

ಶುಕ್ರವಾರ ಸಂಜೆ ಸುಮಾರು 6.50 ಮತ್ತು 7.10 ರ ನಡುವೆ, ಶಾಲಿಮಾರ್-ಚೆನ್ನೈ ನಡುವಿನ ಕೊರಮಂಡಲ್ ಎಕ್ಸ್‌ಪ್ರೆಸ್ ರೈಲು, ಬೆಂಗಳೂರಿನ ಯಶವಂತಪುರ-ಹೌರ ಸೂಪರ್‌ಫಾಸ್ಟ್‌ ರೈಲು ಹಾಗೂ ಗೂಡ್ಸ್ ರೈಲಿನ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಬಹನಾಗಾ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ವೇಗವಾಗಿ ಬಂದ ಕೊರಮಂಡಲ್ ಎಕ್ಸ್‌ಪ್ರೆಸ್  ರೈಲು ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ರೈಲಿನ ಬೋಗಿಗಳು ಪಕ್ಕದ ಹಳಿಯ ಮೇಲೆ ಬಿದ್ದಿತ್ತು. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಯಶವಂತಪುರ-ಹೌರ ಸೂಪರ್‌ಫಾಸ್ಟ್‌ ರೈಲು ಹಳಿತಪ್ಪಿ ಬಿದ್ದಿದ್ದ ರೈಲಿನ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆ ನಡೆದ ಸ್ಥಳದಿಂದ 5 ಕಿಲೋ ಮೀಟರ್‌ ದೂರದವರೆಗೂ ಅಪಘಾತದ ಶಬ್ಧ ಕೇಳಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆತ್ಮಹತ್ಯೆ ಪ್ರಕರಣ: ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. 2010ರ...

ರಷ್ಯಾದ ಇಂಧನದಿಂದ ಭಾರತ ದೂರ ಸರಿಯುವುದು ಅಸಾಧ್ಯ: ಅಮೆರಿಕ

ರಷ್ಯಾದ ತೈಲ ಖರೀದಿಸುವ ರಾಷ್ಟ್ರಗಳ ಮೇಲಿನ ದಿಗ್ಬಂಧನ ಮತ್ತು ಆಮದು ಸುಂಕದ...

ಫುಟ್‌ಪಾತ್ ನಿರ್ಮಿಸದಿದ್ರೆ, ನಾವೇ ಧರಣಿ‌ ಕೂರ್ತೀವಿ; BJP ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವಾರ್ನಿಂಗ್!

ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು...