ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

Date:

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ ಮತ್ತು ಒಡಿಶಾಗಳಲ್ಲಿ ಭಾರಿ ಅನಾಹುತ ಸೃಷ್ಟಿಸಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಉತ್ತರ ಪ್ರದೇಶದಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದರೆ, ಒಡಿಶಾದಲ್ಲಿ ಭಾರಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು 70,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

- Advertisement -

ಉತ್ತರ ಪ್ರದೇಶದ ಸುಮಾರು 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಗೋಡೆ ಕುಸಿತ, ಮಿಂಚು ಹಾಗೂ ಹಠಾತ್ ಪ್ರವಾಹದಂತಹ ದುರಂತಗಳಲ್ಲಿ 10 ಜನರು ಮೃತಪಟ್ಟಿದ್ದಾರೆ. 17ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಸಾರಿಗೆ ಹಾಗೂ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ವ್ಯತ್ಯಯಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಇದನ್ನೂ ಓದಿ: ಹವಾಮಾನ ವರದಿ | ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; ರಾಜ್ಯದ ಹಲವು ಜಿಲ್ಲೆಗಳಲ್ಲಿ  ಭಾರೀ ಮಳೆ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಒಡಿಶಾದ ಮಹಾನದಿ ಸೇರಿದಂತೆ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಭುವನೇಶ್ವರ ಹಾಗೂ ದಕ್ಷಿಣ ಒಡಿಶಾದ ಜಿಲ್ಲೆಗಳು ತೀವ್ರವಾಗಿ ಸಂಕಷ್ಟಕ್ಕೊಳಗಾಗಿವೆ. ಒಡಿಶಾ ಸರ್ಕಾರವು ಜಲಾವೃತ ತಗ್ಗು ಪ್ರದೇಶಗಳಿಂದ 70,000ಕ್ಕೂ ಹೆಚ್ಚು ಜನರನ್ನು ತೆರವುಗೊಳಿಸಿ, ಸುಮಾರು 395 ಪರಿಹಾರ ಶಿಬಿರಗಳಲ್ಲಿ ಆಶ್ರಯ ನೀಡಿದೆ.

ರಾಜ್ಯದಲ್ಲಿ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್‌ಡಿಆರ್‌ಎಫ್), ಒಡಿಶಾ ದುರಂತ ತಡೆ ಪಡೆ (ಒಡಿಆರ್‌ಎಎಫ್‌) ಮತ್ತು ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲು ನಿರ್ಧರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...