ಯುಪಿಯಲ್ಲಿ ಮಳೆ ಅವಾಂತರ: ಪ್ರವಾಹದಲ್ಲಿ ಕೊಚ್ಚಿಹೋದ ವಾಹನಗಳು; 75 ಜಿಲ್ಲೆಗಳಲ್ಲಿ ಹೈ ಅಲರ್ಟ್!

Date:

ಉತ್ತರ ಪ್ರದೇಶದಲ್ಲಿ ಮುಂಗಾರು ತೀವ್ರಗೊಂಡಿದ್ದು, ರಾಜ್ಯದಾದ್ಯಂತ ಭಾರಿ ಮಳೆಯಾಗುತ್ತಿದೆ. ಮಂಗಳವಾರ (ಜು.7) ಬೆಳಗ್ಗಿನಿಂದ ಲಕ್ನೋ, ಪ್ರಯಾಗ್‌ರಾಜ್, ವಾರಣಾಸಿ, ಚಂದೌಲಿ ಮತ್ತು ಮೊರಾದಾಬಾದ್ ಸೇರಿದಂತೆ ಸುಮಾರು 50 ನಗರಗಳಲ್ಲಿ ಹೆಚ್ಚು ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯು (IMD) ರಾಜ್ಯದ ಎಲ್ಲಾ 75 ಜಿಲ್ಲೆಗಳಲ್ಲಿ ಹೈ ಅಲರ್ಟ್‌ ಘೋಷಿಸಿದೆ. ಈ ಪೈಕಿ 8 ಜಿಲ್ಲೆಗಳಲ್ಲಿ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.

- Advertisement -

ಶಾಮ್ಲಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ವೇಗವಾಗಿ ಹರಿಯುವ ತೊರೆಗಳಾಗಿ ಬದಲಾಗಿವೆ. ಕಾರು ಮತ್ತು ಬೈಕುಗಳು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಿದ್ದರೆ, ಮಕ್ಕಳು ಪ್ರವಾಹದ ನೀರನ್ನು ಈಜುಕೊಳದಂತೆ ಬಳಸುತ್ತಿರುವುದು ಕಂಡುಬಂದಿದೆ. ಮಥುರಾದ ವೃಂದಾವನದಲ್ಲಿ ರಸ್ತೆಗಳು ನದಿಗಳಂತಾಗಿವೆ. ಅಮ್ರೋಹಾದಲ್ಲಿ ಕೇವಲ ಒಂದು ಗಂಟೆಯ ಮಳೆಗೆ ದೆಹಲಿ-ಲಕ್ನೋ ಹೆದ್ದಾರಿ ಜಲಾವೃತವಾಗಿದೆ. ಹಪುರ್‌ನಲ್ಲಿ ಮಾರುಕಟ್ಟೆಗಳಿಗೆ ನೀರು ನುಗ್ಗಿದ್ದು, ವ್ಯಾಪಾರಿಗಳು ಪೀಠೋಪಕರಣಗಳ ಮೇಲೆ ಕುಳಿತುಕೊಳ್ಳುವ ಪರಿಸ್ಥಿತಿ ಉಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌...

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅಡುಗೆ ಮನೆಯ ಪ್ರಮುಖ ಪದಾರ್ಥವಾದ ಸಾಂಬಾರ್ ಈರುಳ್ಳಿ (ಸಣ್ಣ ಈರುಳ್ಳಿ) ಬೆಲೆ ಗ್ರಾಹಕರಿಗೆ ದೊಡ್ಡ ಆಘಾತ ನೀಡಿದೆ. ಚಿಲ್ಲರೆ...

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....
WhatsApp Image 2026 07 07 at 6.51.25 PM

ವಾರಣಾಸಿಯಲ್ಲಿ ಮೆಟ್ಟಿಲುಗಳ ಮೇಲೆ ಜಲಪಾತದಂತೆ ನೀರು ಹರಿಯುತ್ತಿದ್ದು, ಬಲವಾದ ಗಾಳಿಯಿಂದಾಗಿ ದೋಣಿ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ವಾರಣಾಸಿ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ ನಂಬರ್ 8ರಲ್ಲಿ ಮೇಲ್ಛಾವಣಿ ಸೋರಿ, ಫ್ಯಾನ್ ಮೂಲಕ ನೀರು ಜಲಪಾತದಂತೆ ಹರಿಯುವ ದೃಶ್ಯಗಳು ಕಂಡುಬಂದಿವೆ. ಸಹರಾನ್‌ಪುರದ ಮಾ ಶಾಕಂಭರಿ ದೇವಿ ದೇವಾಲಯದ ಬಳಿ ಶಾಕಂಭರಿ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದ್ದು, ಪೊಲೀಸರು ಲೌಡ್‌ಸ್ಪೀಕರ್ ಮೂಲಕ ಭಕ್ತರಿಗೆ ಸ್ಥಳವನ್ನು ತಕ್ಷಣ ಖಾಲಿ ಮಾಡುವಂತೆ ಎಚ್ಚರಿಕೆ ನೀಡಿರುವುದಾಗಿ ವರದಿಯಾಗಿದೆ.

ಕಳೆದ 24 ಗಂಟೆಗಳಲ್ಲಿ ಔರಯ್ಯದಲ್ಲಿ ರಾಜ್ಯದಲ್ಲೇ ಗರಿಷ್ಠ 35.9 ಮಿ.ಮೀ ಮಳೆಯಾಗಿದ್ದು, ಇದು ಸಾಮಾನ್ಯ ಮಳೆಗಿಂತ 379% ಹೆಚ್ಚಾಗಿದೆ. ಲಕ್ನೋದ ಹವಾಮಾನ ತಜ್ಞ ಅತುಲ್ ಕುಮಾರ್ ಸಿಂಗ್ ಅವರ ಪ್ರಕಾರ, ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಉತ್ತರ ಒಡಿಶಾ ಕರಾವಳಿಯನ್ನು ದಾಟಿ, ಈಗ ದಕ್ಷಿಣ ಜಾರ್ಖಂಡ್ ಮತ್ತು ಉತ್ತರ ಛತ್ತೀಸ್‌ಗಢದ ಮೇಲೆ ಕೇಂದ್ರೀಕೃತವಾಗಿದೆ. ಈ ವ್ಯವಸ್ಥೆಯು ಉತ್ತರ ಪ್ರದೇಶದಾದ್ಯಂತ ಮುಂಗಾರು ಮಳೆಯನ್ನು ಗಮನಾರ್ಹವಾಗಿ ಬಲಪಡಿಸಿದೆ ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಲ್ಲಾಪುರ | ಪ್ರಜಾಸೇವಾ ಆಂದೋಲನಕ್ಕೆ ಜನರಿಂದ ಉತ್ತಮ ಸ್ಪಂದನೆ: ಲಕ್ಷ್ಮಣ ಸವದಿ

ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯುತ್ತಿದ್ದು,...

ಲಡಾಖ್ ಚುನಾವಣೆ: ಗ್ರಾಮೀಣ ಭಾಗದಲ್ಲಿ ಶೇ. 70ರಷ್ಟು, ಪಟ್ಟಣಗಳಲ್ಲಿ ಬರೀ ಶೇ.52.4 ಮತದಾನ; ಯಾಕಿಷ್ಟು ಕುಸಿತ?

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಟ್ಟು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ (UT)...

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌ ರೈತನಿಗಿಲ್ಲ ಲಾಭ!

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ...

ಬೆಳಗಾವಿ | ದುಡಿಮೆಯ ಪ್ರತಿಶತ 30ರಷ್ಟು ಜನ ಸೇವೆಗೆ ಮೀಸಲು: ಸಿದ್ದಾರ್ಥ್ ವಾಡೆನ್ನವರ್

ಸಮಾಜಕ್ಕೆ ತನ್ನಿಂದಾದ ಕೊಡುಗೆ ನೀಡಬೇಕು. ಯಾವುದೇ ಅಧಿಕಾರ, ಹುದ್ದೆಯ ನಿರೀಕ್ಷೆಯಿಲ್ಲದೆ ಜನರಿಗಾಗಿ...