ಕರ್ನಾಟಕದ ಗೇರುಸೊಪ್ಪ ಸೇರಿ ಹಲವೆಡೆ ಮಳೆ; 4 ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್‌: ಹವಾಮಾನ ಇಲಾಖೆ

Date:

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ತಮಿಳುನಾಡು ಒಳಗೊಂಡಂತೆ 4 ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

- Advertisement -

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದಲ್ಲಿ ಸೋಮವಾರ ಸಂಜೆ ಸಾಧಾರಣ ಮಳೆಯಾಗಿದೆ. ಆದಾಗ್ಯೂ, ರಾಜ್ಯದಲ್ಲಿ ಒಣ ಹವೆ ಹೆಚ್ಚಾಗಿದ್ದು, ಬಿಸಿಲು ಹೆಚ್ಚುತ್ತಿದೆ. ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇನ್ನು, ತಮಿಳುನಾಡು, ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಮಳೆಯಾಗಿದೆ. ತಮಿಳುನಾಡಿನಲ್ಲಿ ಅಲ್ಲಿಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಫೆಬ್ರವರಿ 28 ಮತ್ತು ಮಾರ್ಚ್ 1ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆ ಎರಡೂ ದಿನ 10 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ತಂಜಾವೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ, ಪುದುಕೊಟ್ಟೈ, ರಾಮನಾಥಪುರಂ, ತೂತುಕುಡಿ, ತಿರುನಲ್ವೇಲಿ, ತೆಂಕಶಿ ಮತ್ತು ಕನ್ನಿಯಾಕುಮಾರಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಹಿಮಾಚಲ ಪ್ರದೇಶದಲ್ಲಿಯೂ ಭಾರಿ ಮಳೆ ಮತ್ತು ಹಿಮಪಾತವಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಫೆಬ್ರವರಿ 26ರಿಂದ ಎತ್ತರದ ಪ್ರದೇಶಗಳಲ್ಲಿ ಭಾರೀ ಹಿಮಪಾತವಾಗುವ ನಿರೀಕ್ಷೆಯಿದೆ. ಗುಡ್ಡಗಾಡು ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘Instagram ಹೆಣ್ಮಕ್ಕಳಿಗೆ ಮಾತ್ರ’; ಎಲಾನ್ ಮಸ್ಕ್ ಹೀಗ್ಯಾಕಂದ್ರು?

ಟೆಕ್ ಜೈಂಟ್ ಎಲಾನ್ ಮಸ್ಕ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳ...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...