ಭಾರೀ ಮಳೆ | ತಾಪ ಏರಿಕೆಯಿಂದ ದೆಹಲಿಗೆ ಮುಕ್ತಿ, ಮುಂಬೈನಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

ಶನಿವಾರ ಮುಂಜಾನೆ ದೆಹಲಿಯ ಕೆಲವು ಭಾಗಗಳಲ್ಲಿ ಮಳೆಯು ಜನರಿಗೆ ಬಿಸಿಲಿನ ತಾಪದಿಂದ ಮುಕ್ತಿ ನೀಡಿದರೆ ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ.

- Advertisement -

ದೆಹಲಿಯಲ್ಲಿ ಇಂದು ದಿನವಿಡೀ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುವ ನಿರೀಕ್ಷೆಯಿದ್ದು, ಬೆಳಿಗ್ಗೆಯಿಂದಲೇ ಕೆಲವೆಡೆ ಮಳೆಯಾಗುತ್ತಿದೆ. ಆದರೆ ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಹಲವಾರು ಪ್ರದೇಶಗಳು ಜಲಾವೃತಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ದೆಹಲಿಯ ಬಾರಾಪುಲ್ಲಾ ಮೇಲ್ಸೇತುವೆಯಲ್ಲಿ ಜಲಾವೃತವಾದ ರಸ್ತೆಗಳಲ್ಲಿ ವಾಹನಗಳು ನಿಧಾನವಾಗಿ ಸಂಚರಿಸುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಜನಪಥ್‌ ತುಂತುರು ಮಳೆಗೆ ಸಾಕ್ಷಿಯಾಗಿದೆ.

ಶನಿವಾರ ಮತ್ತು ಭಾನುವಾರದಂದು ದೆಹಲಿ ಮತ್ತು ನೋಯ್ಡಾದಲ್ಲಿ ಮೋಡ ಕವಿದ ವಾತಾವರಣವಿದ್ದು ಲಘು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಜುಲೈ 17ರವರೆಗೆ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ?  ಕರಾವಳಿ-ಮಲೆನಾಡಿನಲ್ಲಿ ಮಳೆ ಅಬ್ಬರ; ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌

ಮುಂಬೈನಲ್ಲಿ, ಭಾರೀ ಮಳೆಯಿಂದಾಗಿ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಪ್ರವಾಹದಿಂದಾಗಿ ಅಂಧೇರಿ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಜನರು ತೀರಾ ಅಗತ್ಯವಿದ್ದರೆ ಮಾತ್ರ ಪ್ರಮಾಣ ಮಾಡುವಂತೆ ಬಿಎಂಸಿ ಸೂಚಿಸಿದೆ.

ಈ ನಡುವೆ ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಮಳೆಯು ಮುಂದುವರಿದಿದೆ. 15 ರಸ್ತೆಗಳನ್ನು ಮುಚ್ಚಲಾಗಿದ್ದು ಮಂಡಿ, ಶಿಮ್ಲಾ ಮತ್ತು ಕಾಂಗ್ರಾ ಜಿಲ್ಲೆಗಳಲ್ಲಿ 47 ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಸಮಸ್ಯೆ ಉಂಟಾಗಿದೆ.

ಕೇರಳದಲ್ಲಿ ಭಾರೀ ಮಳೆಯಾಗಿದ್ದು, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು ಇತರ ಒಂಬತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಗುಜರಾತ್ ಮತ್ತು ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಬಿಹಾರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸಸಾರಾಮ್‌ನ ಜಲಪಾತದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ರಾಜ್ಯದ ವಾಯುವ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...