ಆಗಸ್ಟ್ ಮಳೆಯೂ ಕೊರತೆ ನೀಗಿಸಲಿಲ್ಲ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ತೀವ್ರ ಅಭಾವ

Date:

ಆಗಸ್ಟ್ ತಿಂಗಳಲ್ಲಿ ದೇಶದ ಹಲವು ಭಾಗಗಳಲ್ಲಿ ನಿರೀಕ್ಷೆಗಿಂತ ಉತ್ತಮ ಮಳೆಯಾದರೂ, ಒಟ್ಟಾರೆ ಮುಂಗಾರು ಮಳೆಯ ಕೊರತೆ ಕಡಿಮೆಯಾಗಿಲ್ಲ. ಜೂನ್ 1ರಿಂದ ಜುಲೈ 31ರವರೆಗೆ ದೇಶದ ಸರಾಸರಿ ಮಳೆ ಕೊರತೆ 13%ರಷ್ಟಿದ್ದರೆ, ಆಗಸ್ಟ್ ಅಂತ್ಯದ ವೇಳೆಗೆ ಸುಮಾರು 14%ಗೆ ಏರಿದೆ. ಬಿಹಾರ, ಆಂಧ್ರ ಪ್ರದೇಶ, ಪಂಜಾಬ್ ಹಾಗೂ ಕೆಲವು ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ ಕೊರತೆ ದಾಖಲಾಗಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.

- Advertisement -

ಗಮನಾರ್ಹವಾಗಿ, 12 ರಾಜ್ಯಗಳಲ್ಲಿ ಜೂನ್ 1ರಿಂದ ಈವರೆಗೆ 20%ಕ್ಕಿಂತ ಹೆಚ್ಚು ಮಳೆ ಕೊರತೆ ದಾಖಲಾಗಿದೆ. ಬಿಹಾರ, ಆಂಧ್ರ ಪ್ರದೇಶ, ಮೇಘಾಲಯ, ಮಣಿಪುರ ಹಾಗೂ ಅರುಣಾಚಲ ಪ್ರದೇಶಗಳಲ್ಲಿ ಜೂನ್ 1ರಿಂದ ಆಗಸ್ಟ್ 29ರವರೆಗೆ ಒಟ್ಟು ಮಳೆ ಕೊರತೆ 40%ಗೂ ಹೆಚ್ಚಾಗಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ 23% ಮಳೆ ಕೊರತೆ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮಳೆ ಕೊರತೆಯು ಕೃಷಿ ಮೇಲೂ ನೇರ ಪರಿಣಾಮ ಬೀರಿದೆ. ಪ್ರಮುಖ ಖಾರಿಫ್ ಬೆಳೆಯಾದ ಭತ್ತದ ಬಿತ್ತನೆ ಪ್ರದೇಶವು ಕಳೆದ ವರ್ಷದ ಇದೇ ಅವಧಿಗಿಂತ 3%ಗೂ ಹೆಚ್ಚು ಕುಸಿದಿದೆ. ಎಥನಾಲ್ ಉತ್ಪಾದನೆಗೆ ಪ್ರಮುಖ ಕಚ್ಚಾ ವಸ್ತುವಾಗಿರುವ ಮೆಕ್ಕೆಜೋಳದ ಬಿತ್ತನೆ ಪ್ರದೇಶವೂ 4%ಗೂ ಹೆಚ್ಚು ಕಡಿಮೆಯಾಗಿದೆ. ಇದರ ಪರಿಣಾಮ ಮುಂದಿನ ದಿನಗಳಲ್ಲಿ ಎಥನಾಲ್ ಉತ್ಪಾದನೆಗಾಗಿ ಕಬ್ಬಿನ ಮೇಲಿನ ಅವಲಂಬನೆ ಹೆಚ್ಚುವ ಸಾಧ್ಯತೆ ಇದೆ ಎಂದು ವರದಿ ಸೂಚಿಸಿದೆ.

ಇನ್ನು, ದಕ್ಷಿಣ ಭಾರತದ ಪರಿಸ್ಥಿತಿ ಇನ್ನಷ್ಟು ಕಳವಳಕಾರಿಯಾಗಿದೆ. ಈ ಭಾಗದಲ್ಲಿ ಈವರೆಗೆ ಒಟ್ಟು ಮಳೆ ಕೊರತೆ 23%ಗಿಂತ ಹೆಚ್ಚಾಗಿದೆ. ಇದರ ಪರಿಣಾಮ ಆಂಧ್ರ ಪ್ರದೇಶ, ಕರ್ನಾಟಕ ಹಾಗೂ ಕೇರಳದ ಬಹುಭಾಗಗಳು ಒಣ ಪರಿಸ್ಥಿತಿಯಲ್ಲೇ ಉಳಿದಿವೆ.

ಮುಖ್ಯವಾಗಿ, ಕರ್ನಾಟಕದ ಹಲವೆಡೆ ಕೆಲಕಾಲ ಉತ್ತಮ ಮಳೆ ದಾಖಲಾಗಿದ್ದರೂ, ಒಟ್ಟಾರೆ ಮುಂಗಾರು ಅವಧಿಯಲ್ಲಿ ಮಳೆಯ ಕೊರತೆ ಹೆಚ್ಚಾಗಿದೆ. ಇದು ಕೃಷಿ, ಜಲಾಶಯಗಳ ತುಂಬುವಿಕೆ ಹಾಗೂ ಮುಂದಿನ ಹಂಗಾಮಿನ ನೀರಿನ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಇನ್ನೊಂದೆಡೆ, ಎಲ್ ನಿನೊ ಪರಿಣಾಮದಿಂದ ಭಾರತದಲ್ಲಿ ದುರ್ಬಲ ಮುಂಗಾರು ಮತ್ತು ಹೆಚ್ಚು ಬಿಸಿಲು ಉಂಟಾಗಬಹುದು ಎಂಬ ಮುನ್ಸೂಚನೆಗಳಿವೆ. ಆಧರೂ, ದೇಶದ ಅನೇಕ ಭಾಗಗಳಲ್ಲಿ ಸಾಮಾನ್ಯ ಮಳೆಯಾಗಿದೆ. ಆದರೆ, ಕೆಲವು ರಾಜ್ಯಗಳಲ್ಲಿನ ಅಧಿಕ ಮಳೆ ಕೊರತೆಯಿಂದ ದೇಶದ ಒಟ್ಟಾರೆ ಸರಾಸರಿ ಸುಧಾರಿಸಲಿಲ್ಲ.

ಈ ನಡುವೆ, ಪೂರ್ವ ಭಾರತದಲ್ಲಿ ಮುಂದಿನ ಎರಡು-ಮೂರು ದಿನಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ವಾಯುವ್ಯ ಬಂಗಾಳ ಕೊಲ್ಲಿ ಮತ್ತು ಪಶ್ಚಿಮ ಬಂಗಾಳ–ಉತ್ತರ ಒಡಿಶಾ ಕರಾವಳಿ ಸಮೀಪ ವಾಯುಭಾರ ಕುಸಿದಿದ್ದು, ಪಶ್ಚಿಮ ಬಂಗಾಳದಲ್ಲಿ ಭಾನುವಾರ, ಜಾರ್ಖಂಡ್‌ನಲ್ಲಿ ಸೋಮವಾರ ಹಾಗೂ ಒಡಿಶಾದಲ್ಲಿ ಸೆಪ್ಟೆಂಬರ್ 1ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...