ಸರ್ಕಾರದ ವಿರುದ್ಧ ಘೋಷಣೆ ಕೂಗುವುದು ದೇಶದ್ರೋಹವಲ್ಲ: ಪಂಜಾಬ್ ಹರಿಯಾಣ ಹೈಕೋರ್ಟ್

Date:

ಚುನಾಯಿತ ಪ್ರಜಾಪ್ರಭುತ್ವದಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವುದು ಅಥವಾ ಅಸಮ್ಮತಿಯನ್ನು ವ್ಯಕ್ತಪಡಿಸುವುದು ‘ದೇಶದ್ರೋಹ’ ಎನಿಸಿಕೊಳ್ಳುವುದಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಾಗೆಯೇ ಪ್ರತಿಭಟನೆಯು ಹಿಂಸಾತ್ಮಕ ರೂಪ ಪಡೆದರೆ ಅದು ದಂಗೆ ಅಥವಾ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟದ ವ್ಯಾಪ್ತಿಗೆ ಬರಬಹುದೇ ಹೊರತು ಅದನ್ನು ಸರ್ಕಾರದ ವಿರುದ್ಧ ದ್ವೇಷ ಬಿತ್ತುವ ‘ದೇಶದ್ರೋಹದ ಕೃತ್ಯ’ ಎಂದು ಪರಿಗಣಿಸಲಾಗದು ಎಂದಿದೆ.

- Advertisement -

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಂದ ಬಳಿಕ ಸರ್ಕಾರದ ನೀತಿಗಳನ್ನು ಟೀಕಿಸುವವರ ವಿರುದ್ಧ ದೇಶದ್ರೋಹದಂತಹ ಗಂಭೀರ ಕಾನೂನುಗಳನ್ನು ಬಳಸಲಾಗುತ್ತಿದೆ. ಈ ಬಗ್ಗೆ ತೀವ್ರವಾದ ಆಕ್ಷೇಪ ವ್ಯಕ್ತವಾಗುತ್ತಿರುವ ನಡುವೆ ಹೈಕೋರ್ಟ್‌ ಈ ಆದೇಶ ನೀಡಿರುವುದು ಕಾನೂನು ಮತ್ತು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಪ್ರಯಾಣಿಕರಲ್ಲಿ, ವಿಶೇಷವಾಗಿ ಮಹಿಳೆಯರಲ್ಲಿ ಭಯದ...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಇದನ್ನೂ ಓದಿ: ಎಲ್ಲಾ ನಾಗರಿಕರನ್ನು ಸರ್ಕಾರದ ಗುಲಾಮರನ್ನಾಗಿ ಮಾಡಲಾಗುತ್ತಿದೆ: ನ್ಯಾಯಮೂರ್ತಿ ಮಾಧವ್

2017ರಲ್ಲಿ ಹರಿಯಾಣದ ಕೈತಾಲ್‌ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ನಡೆಸಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ವಿನೋದ್ ಎಸ್. ಭಾರದ್ವಾಜ್ ಮತ್ತು ಸುಖ್ವಿಂದರ್ ಕೌರ್ ಅವರಿದ್ದ ವಿಭಾಗೀಯ ಪೀಠವು ಈ ಮಹತ್ವದ ಅವಲೋಕನ ಮಾಡಿದೆ.

ಹಾಗೆಯೇ ಕೆಳ ನ್ಯಾಯಾಲಯವು ಆರೋಪಿಗಳನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಹರಿಯಾಣ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

“ಪ್ರಜಾಪ್ರಭುತ್ವದಲ್ಲಿ ನಾಗರಿಕರ ಒಳಗಿರುವ ನಿರಾಶೆ, ಅಸಮಾಧಾನ ಅಥವಾ ಆಕ್ರೋಶ ಎಂದಿಗೂ ಸರ್ಕಾರದ ಮೇಲಿನ ದ್ವೇಷ ಅಥವಾ ದೇಶದ್ರೋಹವಾಗದು. ಸರ್ಕಾರದ ವಿರುದ್ಧ ಘೋಷಣೆ ಕೂಗುವುದನ್ನೇ ನೆಪಮಾಡಿಕೊಂಡು ಜನರ ಮೇಲೆ ದೇಶದ್ರೋಹದ ಗಂಭೀರ ಪ್ರಕರಣಗಳನ್ನು ದಾಖಲಿಸಲು ಸಾಧ್ಯವಿಲ್ಲ. ಘೋಷಣೆಗಳು ಕೇವಲ ಪ್ರತಿಭಟನೆಯ ಮತ್ತು ಭಿನ್ನಾಭಿಪ್ರಾಯದ ಧ್ವನಿಯಾಗಿವೆ” ಎಂದು ಹೈಕೋರ್ಟ್ ತಿಳಿಸಿದೆ.

ಸರ್ಕಾರದ ವಿರುದ್ಧ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಮಾಧವ್ ಜಮ್ದಾರ್ ತರಾಟೆ

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೂ ಹಿಂದೆ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಮಾಧವ್ ಜಮ್ದಾರ್ ಅವರ ನ್ಯಾಯಪೀಠವೂ ಸಹ ಇಂತಹದ್ದೇ ಒಂದು ಪ್ರಕರಣದಲ್ಲಿ ಕೇಂದ್ರ ಸರ್ಕಾರ ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದರು. “ಎಲ್ಲಾ ನಾಗರಿಕರನ್ನು ಸರ್ಕಾರದ ಗುಲಾಮರನ್ನಾಗಿ ಮಾಡಲಾಗುತ್ತಿದೆ” ಎಂದು ನ್ಯಾಯಮೂರ್ತಿ ಮಾಧವ್ ಜಮ್ದಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪ್ರತಿಭಟಿಸುವುದು ನಾಗರಿಕರ ಹಕ್ಕು. ಅರ್ಜಿದಾರರು ‘ಬಿಜೆಪಿ ಸರ್ಕಾರ ಮುರ್ದಾಬಾದ್’, ‘ಅಮಿತ್ ಶಾ ಮುರ್ದಾಬಾದ್’ ಮುಂತಾದ ಘೋಷಣೆಗಳನ್ನು ಎತ್ತಿದ್ದಾರೆ. ನಾಗರಿಕರು ಅಂತಹ ಘೋಷಣೆಗಳನ್ನು ಏಕೆ ಕೂಗಬಾರದು? ಅಂತಹ ಘೋಷಣೆಗಳಿಗೆ ಗಡಿಪಾರು ಆದೇಶ ಯಾಕೆ? ಅಷ್ಟಕ್ಕೂ ಪೊಲೀಸರು ಸಾರ್ವಜನಿಕ ಸೇವಕರು, ಮುಖ್ಯಮಂತ್ರಿ ಅಥವಾ ಪ್ರಧಾನ ಮಂತ್ರಿಯ ಸೇವಕರಲ್ಲ” ಎಂದು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: SIR | ಮುಸ್ಲಿಮರು, ಅಲ್ಪಸಂಖ್ಯಾತರ ಮೇಲೆ ತೀವ್ರ ಪರಿಣಾಮ; ವಿಶ್ವಸಂಸ್ಥೆ ಕಳವಳ

ಈ ಸಂದರ್ಭದಲ್ಲೇ ಕುದುರೆ ವ್ಯಾಪಾರದ ಬಗ್ಗೆಯೂ ನ್ಯಾಯಮೂರ್ತಿಗಳು ಮಾತನಾಡಿದ್ದಾರೆ. ಮಹಾರಾಷ್ಟ್ರದಲ್ಲಿನ ಪ್ರಸ್ತುತ ರಾಜಕೀಯ ಘಟನೆಗಳ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. “ನಿನ್ನೆ ಮೊನ್ನೆ, 10 ವರ್ಷದ ಮಗುವೊಂದು ಅಪಘಾತದಲ್ಲಿ ಸಾವನ್ನಪ್ಪಿತು. ಆದರೆ ರಾಜ್ಯದ ವಿಧಾನಸಭೆಯಲ್ಲಿ ಚರ್ಚೆಯಾಗುವುದೇನು? ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೇಗೆ ಪಕ್ಷಾಂತರ ಮಾಡಿಕೊಂಡ ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಏನಿದು” ಎಂದು ಟೀಕಿಸಿದ್ದರು.

“ನೀವು ಕೂಡ ಪಕ್ಷ ಬದಲಾಯಿಸಬೇಕು. ಹೇಗೂ ಇಡೀ ಮಹಾರಾಷ್ಟ್ರದಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ. ನಿಮ್ಮ ಬಳಿ ಕೆಲವು ಎಫ್‌ಐಆರ್‌ಗಳಿವೆ. ಪ್ರಕರಣಗಳನ್ನು ಬದಲಾಯಿಸುವುದನ್ನು ಪರಿಗಣಿಸಿ, ವಾಷಿಂಗ್ ಮೆಷಿನ್ ಇದೆ” ಎಂದು ಮಾರ್ಮಿಕವಾಗಿ ನುಡಿದರು.

ಪ್ರಸ್ತುತ ದೇಶದಲ್ಲಿ ಮೋದಿ ಸರ್ಕಾರದ ನೀತಿಗಳನ್ನು ಟೀಕಿಸುವ ಅಥವಾ ಪ್ರತಿಭಟಿಸುವ ಧ್ವನಿಗಳನ್ನು ದೇಶವಿರೋಧಿ ಎಂಬ ಕಥನದ ಅಡಿಯಲ್ಲಿ ಹತ್ತಿಕ್ಕಲಾಗುತ್ತಿದೆ. ಇದರ ವಿರುದ್ದ ದೇಶದ ಎರಡು ಪ್ರಮುಖ ಹೈಕೋರ್ಟ್‌ಗಳು ನೀಡಿರುವ ಈ ಆದೇಶಗಳು ಪ್ರಜಾಪ್ರಭುತ್ವದಲ್ಲಿ ‘ಅಸಮ್ಮತಿ ಮತ್ತು ಪ್ರತಿಭಟನೆಯ ಹಕ್ಕನ್ನು’ ಎತ್ತಿ ಹಿಡಿದಿವೆ.

ಕೇವಲ ರಾಜಕೀಯ ವಿರೋಧ ಅಥವಾ ಘೋಷಣೆಗಳು ದೇಶದ ಸಾರ್ವಭೌಮತೆಗೆ ಧಕ್ಕೆ ತರುವುದಿಲ್ಲ ಮತ್ತು ಸರ್ಕಾರವನ್ನು ಟೀಕಿಸುವುದು ನಾಗರಿಕರ ಸಾಂವಿಧಾನಿಕ ಹಕ್ಕು ಎಂಬುದನ್ನು ನ್ಯಾಯಾಂಗವು ಮತ್ತೊಮ್ಮೆ ಗಟ್ಟಿಯಾಗಿ ಸಾರಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...

ತಿಹಾರ್ ಜೈಲಿನಲ್ಲಿ ಸಿಜೆಪಿ ನಾಯಕರಿಗೆ ಹೈ ಸೆಕ್ಯುರಿಟಿ; ಇತರ ಕೈದಿಗಳಿಂದ ಪ್ರತ್ಯೇಕ ವಾಸ

ಅನುಮತಿಯಿಲ್ಲದೆ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ...

ಬೀದರ್‌ | ಮರಣಾನಂತರ ದೇಹದಾನಕ್ಕೆ ಮುಂದಾದ ಮೂವರು ಶಿಕ್ಷಕರು, ಸಾಹಿತಿ

ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನ ಮತ್ತು ಸಂಶೋಧನೆಗೆ ನೆರವಾಗುವ ಉದ್ದೇಶದಿಂದ ಮರಣಾನಂತರ ತಮ್ಮ...

ಒಂದೇ ಕುಟುಂಬದ ಐವರು ಶವವಾಗಿ ಪತ್ತೆ; ವಿಷಾಹಾರ ಸೇವಿಸಿದ ಶಂಕೆ

ಒಂದೇ ಕುಟುಂಬದ ಐವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ದಾರುಣ ಘಟನೆ ಉತ್ತರ...