ಅಪ್ರಾಪ್ತೆ ಮೇಲೆ ಅತ್ಯಾಚಾರ: ಬುರ್ಖಾ ಧರಿಸಿ ಪರಾರಿಯಾಗಲು ಯತ್ನಿಸಿದ ಪೊಲೀಸ್ ಬಂಧನ

Date:

ಅಪ್ರಾಪ್ತ ಬಾಲಕಿ ಮೇಲೆ‌ ಅತ್ಯಾಚಾರ ಎಸಗಿ, ತಲೆ‌ಮರೆಸಿಕೊಂಡಿದ್ದ ಪೊಲೀಸ್ ಪೇದೆಯನ್ನು ಪೊಲೀಸರು ಬಂಧಿಸಿದ್ದಾರೆ. ಆತ ಬುರ್ಖಾ ಧರಿಸಿ, ಮಹಿಳೆಯಂತೆ‌ ನಟಿಸುತ್ತ, ತಪ್ಪಿಸಿಕೊಳ್ಳುತ್ತಿದ್ದ ಆತನನ್ನು ಬಂಧಿಸುವಲ್ಲಿ ಪೊಲೀಸ್ ತಂಡ ಯಶಸ್ವಿಯಾಗಿದೆ ಎಂದು ವರದಿಯಾಗಿದೆ.

- Advertisement -

ರಾಜಸ್ಥಾನದ ಧೋಲ್ಪುರದಲ್ಲಿ ಅಪ್ರಾಪ್ತೆ ಮೇಲೆ ಪೊಲೀಸ್ ಕಾನ್ಸ್‌ಟೇಬಲ್ ರಾಜೇಂದ್ರ ಸಿಸೋಡಿಯಾ ಎಂಬಾತ ಅತ್ಯಾಚಾರ ಎಸಗಿದ್ದರು. ಕೃತ್ಯ ಎಸಗಿ ಪರಾರಿಯಾಗಿದ್ದರು. ಅವರನ್ನು ಉತ್ತರ ಪ್ರದೇಶದ ವೃಂದಾವನದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಆರೋಪಿ ರಾಜೇಂದ್ರ ಸಿಸೋಡಿಯಾ ಬಾಲಕು ಮತ್ತು ಆತನ ಸಹೋದರನಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ, ಮನೆಗೆ ಕರೆಸಿಕೊಂಡಿದ್ದರು. ಸಹೋದರನನ್ನು ಮಾರುಕಟ್ಟೆಗೆ ಕಳಿಸಿ, ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಾಲಕಿ ಕಿರುಚಿಕೊಂಡಾಗ ಸ್ಥಳೀಯರು‌ ಆತನ ಮನೆಗೆ ಧಾವಿಸಿದ್ದಾರೆ. ಆದರೂ, ಆರೋಪಿ‌ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದರು” ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸಂಗ್ವಾನ್ ತಿಳಿಸಿದ್ದಾರೆ.

“ಆತ ಪದೇ ಪದೇ ವೇಷ ಮತ್ತು ಸ್ಥಳವನ್ನು ಬದಲಿಸುತ್ತಿದ್ದರು. ಆತನಿಗಾಗಿ ಆಗ್ರಾ, ಲಕ್ನೋ ಮತ್ತು ಗ್ವಾಲಿಯರ್‌ಯಲ್ಲಿ‌ ಶೋಧ ನಡೆಸಿದ ಪೊಲೀಸರು, ಬೃಂದಾವನದಲ್ಲಿ ಆತನನ್ನು ಬಂಧಿಸಿದ್ದಾರೆ” ಎಂದು‌ ವಿವರಿಸಿದ್ದಾರೆ.

ಆತನನ್ನು‌ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಹಿಂದೆಯೂ ಆತನ ವಿರುದ್ಧ ನಾನಾ ಆರೋಪಗಳಿದ್ದವು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...