ರಾಜಸ್ಥಾನ| ಬಿಸಿಲಿನ ತಾಪಕ್ಕೆ ಮತ್ತೆ ಮೂವರು ಬಲಿ; ರೋಗಿಗಳ ಸಂಖ್ಯೆ 3,965ಕ್ಕೆ ಏರಿಕೆ

Date:

ರಾಜಸ್ಥಾನದಲ್ಲಿ ಬಿಸಿಲಿನ ತಾಪಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಜೈಪುರದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇನ್ನು ಬಿಸಿಲಿನ ತಾಪದಿಂದ ಅನಾರೋಗ್ಯಕ್ಕೆ ಒಳಗಾದ ರೋಗಿಗಳ ಸಂಖ್ಯೆ 3965ಕ್ಕೆ ಏರಿದೆ.

- Advertisement -

ಮೃತಪಟ್ಟವರು ಆಗ್ರಾ ಮತ್ತು ದೆಹಲಿಯವರು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಝಲಾವರ್ ಜಿಲ್ಲೆಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದ ಎರಡು ನವಜಾತ ಶಿಶುಗಳು ಮಂಗಳವಾರ ಸಾವನ್ನಪ್ಪಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಆಸ್ಪತ್ರೆಯಲ್ಲಿ ಕೂಲರ್ ಅಥವಾ ವೈದ್ಯರಿಲ್ಲದ ಕಾರಣ ಈ ಸಾವಾಗಿದ್ದು ಇದಕ್ಕೆ ಆಸ್ಪತ್ರೆ ಆಡಳಿತದ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ?  ದಾವಣಗೆರೆ | ವಿಪರೀತ ಸುಡುವ ಬಿಸಿಲು; ಸಾಂಕ್ರಾಮಿಕ ರೋಗಗಳ ಬಗ್ಗೆ ವೈದ್ಯರ ಎಚ್ಚರಿಕೆ

ಬ್ಲಾಕ್ ಮೆಡಿಕಲ್ ಆಫೀಸರ್ ರಯೀಸ್ ಖಾನ್ ಆಸ್ಪತ್ರೆಗೆ ಆಗಮಿಸಿ ವಾರ್ಡ್‌ನಲ್ಲಿ ನಾಲ್ಕು ಕೂಲರ್‌ಗಳನ್ನು ಅಳವಡಿಸಲು ಮತ್ತು ಆಸ್ಪತ್ರೆಯಲ್ಲಿ 24 ಗಂಟೆಗಳ ಕರ್ತವ್ಯಕ್ಕೆ ವೈದ್ಯರನ್ನು ನೇಮಿಸಲು ಸೂಚನೆ ನೀಡಿದರು.

ಈ ನವಜಾತ ಶಿಶುಗಳು ತೀವ್ರವಾದ ಶಾಖದಿಂದ ಸಾವನ್ನಪ್ಪಿವೆಯೇ ಎಂದು ಪರೀಕ್ಷಿಸಲಾಗುವುದು ಎಂದು ಎಂದು ರಯೀಸ್ ಖಾನ್ ತಿಳಿಸಿದ್ದಾರೆ.

ಏರುತ್ತಿರುವ ತಾಪಮಾನದಿಂದಾಗಿ ಈ ಹಿಂದೆ ರಾಜಸ್ಥಾನದಲ್ಲಿ ಆರು ಸಾವುಗಳು ಸಂಭವಿಸಿವೆ ಎಂದು ರಾಜಸ್ಥಾನದ ಸಚಿವರು ಮಂಗಳವಾರ ಹೇಳಿದ್ದಾರೆ.

ರಾಜಸ್ಥಾನದ ಬಹುತೇಕ ಎಲ್ಲಾ ನಗರಗಳಲ್ಲಿ ಮಂಗಳವಾರ 45 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವನ್ನು ದಾಖಲಾಗಿದೆ. ಬಾರ್ಮರ್‌ನಲ್ಲಿ ಅತೀ ಅಧಿಕ ತಾಪಮಾನ ದಾಖಲಾಗಿದೆ.

ಇದನ್ನು ಓದಿದ್ದೀರಾ?  ಮುಂದಿನ ಎರಡು ವಾರಗಳ ಕಾಲ ಬಿಸಿಲು – ಒಣ ಹವೆ; ಹವಾಮಾನ ಇಲಾಖೆ ವರದಿ

ಅಜ್ಮೀರ್‌ನಲ್ಲಿ ಗರಿಷ್ಠ ತಾಪಮಾನ 46.3 ಡಿಗ್ರಿ ಸೆಲ್ಸಿಯಸ್, ಭಿಲ್ವಾರ (47.4), ಭರತ್‌ಪುರ (48.2), ಅಲ್ವಾರ್ (46.2), ಪಿಲಾನಿ (48.5), ಚಿತ್ತೋರ್‌ಗಢ (47), ಬಾರ್ಮರ್ (49.3), ಜೈಸಲ್ಮೇರ್ (48.7), ಜೋಧ್‌ಪುರ (47.4), ಬಿಕಾನೇರ್ (48.2), ಚುರು (48), ಶ್ರೀ ಗಂಗಾನಗರ (48.3), ಮತ್ತು ಧೋಲ್‌ಪುರದಲ್ಲಿ 48.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ಈ ಬಿಸಿ ವಾತಾವರಣವು ಮುಂದಿನ 2-3 ದಿನಗಳವರೆಗೆ ಇರುವ ಸಾಧ್ಯತೆಯಿದೆ. ಮೇ 29ರಿಂದ ತಾಪಮಾನ ಕಡಿಮೆಯಾಗಲು ಆರಂಭವಾಗಲಿದ್ದು, ಜೂನ್ ಮೊದಲ ವಾರದಲ್ಲಿ ತಾಪಮಾನ ಸಾಮಾನ್ಯ ಸ್ಥಿತಿಗೆ ಮರಳಲಿದೆ ಎಂದು ಜೈಪುರದ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಆರ್.ಎಸ್. ಶರ್ಮಾ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...