ಎಸ್‌ಸಿ ಎಸ್‌ಟಿ ಕಾಯ್ದೆ ಎಂದರೆ ʼಗೂಂಡಾಗಿರಿʼ ಎಂದ ಬಿಜೆಪಿ ಶಾಸಕ: ಐಪಿಎಸ್ ಅಧಿಕಾರಿ ಸಮ್ಮುಖದಲ್ಲೇ ವಿವಾದಾತ್ಮಕ ಹೇಳಿಕೆ

Date:

ಎಸ್‌ಸಿ ಎಸ್‌ಟಿ ಕಾಯ್ದೆ ಎಂದರೆ ʼಗೂಂಡಾಗಿರಿʼ ಎಂದು ಹೇಳುವ ಮೂಲಕ ರಾಜಸ್ಥಾನದ ಭರತ್‌ಪುರ ಜಿಲ್ಲೆಯ ವೀರ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಹದ್ದೂರ್‌ ಸಿಂಗ್‌ ಕೋಲಿ ವಿವಾದವನ್ನು ಸೃಷ್ಟಿಸಿದ್ದಾರೆ.

- Advertisement -

ಖೇಡ್ಲಿ ಮಾಡ್ ಪೊಲೀಸ್ ಠಾಣೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ಬಹದ್ದೂರ್‌ ಸಿಂಗ್‌ ಕೋಲಿ ಭರತ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಮೃದುಲ್ ಕಚವಾ ಅವರ ಸಮ್ಮುಖದಲ್ಲೇ ಈ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹೆಚ್ಚಿನ ಸುಳ್ಳು ಪ್ರಕರಣಗಳು ಎಸ್‌ಸಿ ಎಸ್‌ಟಿ ಕಾಯ್ದೆಯಡಿ ದಾಖಲಿಸಲಾಗಿದೆ. ಅಂತಹ ಪ್ರಕರಣಗಳನ್ನು ಎಚ್ಚರಿಕೆಯಿಂದ ಪರಿಶೀಲಿಸುವ ಅಗತ್ಯವಿದೆ. ಜನರು ಸಾಮಾನ್ಯವಾಗಿ ಮದುವೆ ಅಥವಾ ಇತರ ಕಾರ್ಯಕ್ರಮಗಳಿಗೆ ಸಾಲ ಪಡೆಯುತ್ತಾರೆ. ಸಾಲ ಕೊಟ್ಟವರು ವಾಪಾಸ್ಸು ಕೇಳಿದಾಗ ಈ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತದೆ. ಸಾಲ ಕೊಟ್ಟವನಿಗೆ ಕೊಟ್ಟ ಹಣ ಬಿಟ್ಟು ಬಿಡುವುದು ಮಾತ್ರವಲ್ಲ, ಪ್ರಕರಣದ ಇತ್ಯರ್ಥಕ್ಕೆ 5 ಲಕ್ಷದವರೆಗೆ ಕೊಡುವಂತೆ ಆಗ್ರಹಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ಜನಗಣತಿ ಎತ್ತುವ ಹಲವು ಪ್ರಶ್ನೆಗಳು

ಗೂಂಡಾಗಿರಿ ಏನಾದರು ಇದ್ದರೆ ಅದು ಎಸ್‌ಸಿ ಎಸ್‌ಟಿ ಕಾಯ್ದೆಯಡಿಯಾಗಿದೆ. ಈ ಕಾಯ್ದೆಯ ದುರುಪಯೋಗ ಕೊನೆಗೊಳ್ಳಬೇಕು ಎಂದು ಅವರು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶಾಸಕ ಬಹದ್ದೂರ್ ಸಿಂಗ್ ಕೋಲಿ ವಿವಾದಾತ್ಮಕ ಹೇಳಿಕೆ ನೀಡುವುದು ಇದು ಮೊದಲಲ್ಲ. ಈ ಹಿಂದೆ ಪಕ್ಷದ ಸಭೆಯೊಂದರಲ್ಲಿ ಬಿಜೆಪಿ ಮಹಿಳಾ ನಾಯಕಿಯೊಬ್ಬರನ್ನು ‘ಕಳ್ಳಿ’ ಎಂದು ಕರೆದು ತಮ್ಮದೇ ಪಕ್ಷದೊಳಗೆ ಸಂಚಲನ ಮೂಡಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...