ರಾಜಸ್ಥಾನದ ಶಿವರಾತ್ರಿ ಮೆರವಣಿಗೆಯಲ್ಲಿ ದುರಂತ: 14 ಮಕ್ಕಳಿಗೆ ವಿದ್ಯುತ್ ಸ್ಪರ್ಶ

Date:

ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ನಡೆಯುತ್ತಿದ್ದ ಶಿವರಾತ್ರಿ ಮೆರವಣಿಗೆಯಲ್ಲಿ ವಿದ್ಯುತ್ ಸ್ಪರ್ಷ ಉಂಟಾಗಿ 14 ಮಕ್ಕಳು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಸಚಿವ ಹೀರಾಲಾಲ್ ನಗರ್ ತಿಳಿಸಿದ್ದಾರೆ.

ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸುದ್ದಿಸಂಸ್ಥೆಗಳ ವಿಡಿಯೋದಲ್ಲಿರುವಂತೆ ಪೋಷಕರು ತಮ್ಮ ಮಕ್ಕಳನ್ನು ಚಿಕಿತ್ಸೆಗಾಗಿ ತುರ್ತು ನಿಗಾ ಘಟಕಕ್ಕೆ ಕರೆದೊಯ್ಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೋರ್ಡ್ ಪರೀಕ್ಷೆ ರದ್ದು ಸ್ವಾಗತಾರ್ಹ; ಮೇಲ್ಮನವಿಗೆ ಹೋಗದಿರಲಿ ಸರ್ಕಾರ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇದು ದುಃಖದ ಘಟನೆಯಾಗಿದೆ.ಇಬ್ಬರು ಮಕ್ಕಳಿಗೆ ಗಂಭಿರ ಗಾಯಗಳಾಗಿವೆ ಒಂದು ಮಗುವಿಗೆ ಶೇ.100 ರಷ್ಟು ಗಾಯವಾಗಿದೆ. ಎಲ್ಲ ಸಾಧ್ಯತೆಯ ಚಿಕಿತ್ಸೆ ನೀಡಲು ಒಂದು ವಿಶೇಷ ತಂಡವನ್ನು ನಿಯೋಜಿಸಲಾಗಿದೆ. ಯಾವ ರೀತಿಯ ನಿರ್ಲಕ್ಷ್ಯ ಸಂಭವಿಸಿದೆ ಎಂಬುದನ್ನು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ” ಎಂದು ಸಚಿವರು ತಿಳಿಸಿದರು.

ಸುದ್ದಿಸಂಸ್ಥೆಗಳ ಪ್ರಕಾರ ಹೈಟೆನ್ಷನ್‌ ತಂತಿಯಿಂದ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಇಬ್ಬರು ಮಕ್ಕಳಿಗೆ ಶೇ.50 ರಿಂದ ಶೇ.100ರವರೆಗೆ ಸುಟ್ಟ ಗಾಯಗಳಾಗಿವೆ. ಉಳಿದ ಮಕ್ಕಳಿಗೆ ಶೇ.50ಕ್ಕಿಂತ ಒಳಗೆ ಗಾಯವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ನಾಪತ್ತೆ; ಅಪಹರಣ ಪ್ರಕರಣ ದಾಖಲು

ಅತ್ಯಂತ ಜನಪ್ರಿಯ ಭಾರತೀಯ ಟಿವಿ ಶೋ ಆದ 'ತಾರಕ್ ಮೆಹ್ತಾ ಕಾ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...