ರಾಜಸ್ಥಾನ | ಕ್ರಿಕೆಟ್‌ ಬ್ಯಾಟ್‌ನಿಂದ ಹಲ್ಲೆ; ವ್ಯಾಪಾರಿಯ ಕೊಲೆಗೈದ ಸಬ್ ಇನ್ಸ್‌ಪೆಕ್ಟರ್ ಮಗ!

Date:

ತರಕಾರಿ ವ್ಯಾಪಾರಿಯೋರ್ವನನ್ನು ಸಬ್ ಇನ್ಸ್‌ಪೆಕ್ಟರ್‌ನ ಮಗನೊಬ್ಬ ಮನಬಂದಂತೆ ಕ್ರಿಕೆಟ್ ಬ್ಯಾಟ್‌ನಿಂದ ಥಳಿಸಿ ಕೊಂದ ಅಘಾತಕಾರಿ ಘಟನೆ ರಾಜಸ್ಥಾನದ ಜೈಪುರದ ಕರಣಿ ವಿಹಾರ್ ಪ್ರದೇಶದಲ್ಲಿ ನಡೆದಿದೆ.

- Advertisement -

ಕೊಲೆಗೈದ ಯುವಕನನ್ನು 23 ವರ್ಷದ ಕ್ಷಿತಿಜ್ ಶರ್ಮಾ ಎಂದು ಗುರುತಿಸಲಾಗಿದ್ದು, ಮೋಹನ್ ಲಾಲ್ ಸಿಂಧಿ (35) ಕೊಲೆಗೀಡಾದ ತರಕಾರಿ ವ್ಯಾಪಾರಿಯಾಗಿದ್ದಾನೆ. ಕೊಲೆ ಆರೋಪಿ ಕ್ಷಿತಿಜ್, ರಾಜಸ್ಥಾನದ ಪೊಲೀಸ್ ಇನ್ಸ್‌ಪೆಕ್ಟರ್ ಆಗಿರುವ ಪ್ರಶಾಂತ್ ಶರ್ಮಾ ಎಂಬವರ ಮಗನಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕರಣಿ ವಿಹಾರ್ ಪ್ರದೇಶದಲ್ಲಿನ ರಜನಿ ಬಿಹಾರ್ ಕಾಲೋನಿಯಲ್ಲಿರುವ ಆರೋಪಿಯ ಮನೆಯ ಹೊರಗೆ ಈ ಘಟನೆ ನಡೆದಿದ್ದು, ಆತನ ತಂದೆ ಪ್ರಶಾಂತ್ ಶರ್ಮಾ ಮನೆಯೊಳಗಿದ್ದಾಗ ಈ ಘಟನೆ ನಡೆದಿದೆ ಎಂದು ರಾಜಸ್ಥಾನ ಪೊಲೀಸರು ಮಾಹಿತಿ ನೀಡಿದ್ದಾರೆ. ಹಲ್ಲೆಗೈಯ್ಯುತ್ತಿರುವ ದೃಶ್ಯವು ಸ್ಥಳೀಯ ಮನೆಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಮಂಗಳವಾರ ರಾತ್ರಿ ಮನೆಯ ಹೊರಗೆ ಈ ಘಟನೆ ನಡೆದಿದ್ದು, ಆ ಪ್ರದೇಶವನ್ನು ದಾಟುತ್ತಿದ್ದ ಮೋಹನ್ ಲಾಲ್ ಸಿಂಧಿಯ ಜತೆ ಕ್ಷಿತಿಜ್ ವಾಗ್ವಾದಕ್ಕೆ ಇಳಿದಿದ್ದಾನೆ. ವಾದವು ಉಲ್ಬಣಗೊಳ್ಳುತ್ತಿದ್ದಂತೆ, ಕ್ಷಿತಿಜ್ ಬ್ಯಾಟ್ ತರಲು ಮನೆಯೊಳಗೆ ಹೋದರು ಮತ್ತು ಸಿಂಧಿಯ ತಲೆಗೆ ಪದೇ ಪದೇ ಹೊಡೆದರು. ಅದು ಅವನ ಸಾವಿಗೆ ಕಾರಣವಾಯಿತು ಎಂದು ಘಟನೆಯ ಸಿಸಿಟಿವಿ ವೀಡಿಯೊವನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.

“ಆರೋಪಿ ಕ್ಷಿತಿಜ್‌ನ ತಂದೆ ಯಾವುದೋ ಶಬ್ದ ಕೇಳಿ ಮನೆಯಿಂದ ಹೊರಗೆ ಬಂದು ನೋಡಿದಾಗ ಸಿಂಧಿಯ ರಸ್ತೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು, ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯ ವೈದ್ಯರು ಪರಿಶೀಲನೆ ಮಾಡಿದ ಬಳಿಕ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಸದ್ಯ, ಆರೋಪಿ, ಸಬ್ ಇನ್ಸ್‌ಪೆಕ್ಟರ್ ಮಗ ಕ್ಷಿತಿಜ್ ಶರ್ಮಾನ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದೇವೆ. ವಿಚಾರಣೆ ನಡೆಸಲಾಗುತ್ತಿದೆ” ಎಂದು ಡಿಸಿಪಿ ಅಮಿತ್ ಬುಧಾನಿಯಾ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...