ಜಾತಿ ದೌರ್ಜನ್ಯ | ನೀರಿನ ಚೆಂಬು ಮುಟ್ಟಿದ್ದಕ್ಕೆ ದಲಿತ ಯುವಕನ ಮೇಲೆ ಅಮಾನುಷ ಹಲ್ಲೆ

Date:

ನೀರು ಕುಡಿಯುವ ತಂಬಿಗೆಯನ್ನು ಮಟ್ಟಿದ್ದಕ್ಕಾಗಿ ದಲಿತ ಸಮುದಾಯದ ಟ್ರ್ಯಾಕ್ಟರ್ ಚಾಲಕನ ಮೇಲೆ ಅಮಾನುಷವಾಗಿ ಹಲ್ಲೆ ಎಸಗಿರುವ ಘಟನೆ ರಾಜಸ್ಥಾನದ ಝುಂಜು ಜಿಲ್ಲೆಯಲ್ಲಿ ನಡೆದಿದೆ. ದಲಿತ ಯುವಕನ ಮೇಲೆ ಇಟ್ಟಿಗೆ ಭಟ್ಟಿಯ ಮಾಲೀಕ ಹಲ್ಲೆ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

- Advertisement -

ಆರೋಪಿ ವಿನೋದ್ ಯಾದವ್‌ ನಡೆಸುತ್ತಿದ್ದ ಇಟ್ಟಿಗೆ ಭಟ್ಟಿಯಲ್ಲಿ ದಲಿತ ಯುವಕ ಮೇಘವಾಲ್‌ ಟ್ರ್ಯಾಕ್ಟರ್ ಓಡಿಸುವ ಕೆಲಸ ಮಾಡುತ್ತಿದ್ದರು. ಮಂಗಳವಾರ ರಾತ್ರಿ, ನೀರು ಕುಡಿಯುವುದಕ್ಕಾಗಿ ನೀರಿನ ತಂಬಿಗೆಯ ಬಳಿ ಹೋಗಿದ್ದಾರೆ. ಆ ಕಾರಣಕ್ಕೆ ಮೇಘವಾಲ್ ಮೇಲೆ ವಿನೋದ್ ಯಾದವ್ ಹಲ್ಲೆ ಎಸಗಿದ್ದು, ಕಾಲಿನಿಂದ ಒದ್ದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಾತ್ರವಲ್ಲದೆ, ಮೇಘವಾಲ್ ಅವರನ್ನು ಹರಿಯಾಣಕ್ಕೆ ಎಳೆದೊಯ್ದ ಆರೋಪಿ ವಿನೋದ್‌, ತಾನು ನೀಡಿದ್ದ ಹಣವನ್ನು ವಾಪಸ್‌ ಕೊಡುವಂತೆ ಮೇಘವಾಲ್ ಅವರ ಕುಟುಂಬಸ್ಥರಿಗೆ ಬೆದರಿಕೆ ಹಾಕಿದ್ದಾನೆ. ಕುಟುಂಬಸ್ಥರಿಂದ ಹಣ ಪಡೆದು, ಮೇಘವಾಲ್ ಮೇಲೆ ಮತ್ತೆ ಬೆಲ್ಟ್‌ನಿಂದ ಹಲ್ಲೆ ನಡೆಸಿದ್ದಾರೆ. ಆತನನ್ನು ಅಲ್ಲಿಯೇ ಬಿಟ್ಟು ಬಂದಿದ್ದಾರೆ ಎಂದು ವರದಿಯಾಗಿದೆ.

ಮೇಘವಾಲ್ ಅವರು ರಾಜಸ್ಥಾನಕ್ಕೆ ಬಂದಿದ್ದು, ಪಚೇರಿ ಕಲನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ “ನಾನು ಗಡಿಗೆಯಿಂದ ನೀರು ಕುಡಿಯಲು ತೆರಳಿದ್ದಕ್ಕೆ, ತನ್ನ ಮೇಲೆ ಹಲ್ಲೆ ನಡೆಸಿ, ಥಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...