ರಾಜಸ್ಥಾನ | ಮಕ್ಕಳು ತನ್ನವಲ್ಲವೆಂದು ಶಂಕಿಸಿ ಕೊಲೆ; ವಿಕೃತ ತಂದೆಯ ಬಂಧನ

Date:

ಮಕ್ಕಳು ತನ್ನವಲ್ಲ ಎಂದು ಶಂಕಿಸಿದ ತಂದೆಯೊಬ್ಬ ಇಬ್ಬರು ಮಕ್ಕಳನ್ನು ಹಾಗೂ ತನ್ನ ಅಜ್ಜಿಯನ್ನು ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ವರದಿಯಾಗಿದೆ. ಆರೋಪಿ ವಿಕೃತ ತಂದೆಯನ್ನು ಬಂಧಿಸಿರುವುದಾಗಿ ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

- Advertisement -

“ಬಂಧಿತ ಆರೋಪಿ ಭೂಪ್‌ ಸಿಂಗ್‌ (32) ಎಂಬಾತ ಭೈನ್ಸಿ ಗ್ರಾಮದಲ್ಲಿ ತನ್ನ ಅಜ್ಜಿಯನ್ನು ಜನವರಿ 31ರಂದು ಹಾಗೂ ಮಕ್ಕಳಾದ ಗರ್ವಿತ್‌ (4) ಹಾಗೂ ಅನುರಾಗ್‌ (8) ಅವರನ್ನು ಫೆಬ್ರವರಿ 13ರಂದು ವಿಷ ಹಾಕಿ ಕೊಲೆ ಮಾಡಿದ್ದಾನೆ” ಎಂದು ಚುರು ಪೊಲೀಸ್‌ ಸೂಪರಿಂಟೆಂಡೆಂಟ್‌ ಜೈ ಯಾದವ್‌ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ತಿಂಗಳ ಅವಧಿಯಲ್ಲಿ ಮೂವರು ಮೃತಪಟ್ಟಿದ್ದರಿಂದ ಅನುಮಾನ ಮೂಡಿತ್ತು. ಹೀಗಾಗಿ, ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು” ಎಂದಿದ್ದಾರೆ.

“ಮಕ್ಕಳ ಶವಗಳನ್ನು ಸಮಾಧಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಗರ್ವಿತ್‌ ದೇಹದಲ್ಲಿ ವಿಷದ ಅಂಶ ಪತ್ತೆಯಾದ ಕಾರಣ, ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಯಿತು. ಬಳಿಕ ಆತ ʼಮಕ್ಕಳು ತನ್ನವಲ್ಲ ಎಂಬ ಅನುಮಾನ ಮೂಡಿತ್ತು. ಹಾಗಾಗಿ ಕೊಲೆ ಮಾಡಲು ನಿರ್ಧರಿಸಿದೆʼ ಎಂದು ವಿಚಾರಣೆ ವೇಳೆ ಒಪ್ಪಿಕೊಂಡಿರುವ ಆರೋಪಿ, ಅನುಮಾನ ಬರದಂತೆ ನೋಡಿಕೊಳ್ಳುವ ಸಲುವಾಗಿ, ಮೊದಲು ತನ್ನ ಅಜ್ಜಿಯನ್ನು ನಂತರ ಮಕ್ಕಳನ್ನು ಕೊಲೆ ಮಾಡಿದ್ದಾನೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಮೆರಿಕದ ಗಾಜಾ ನಡೆ ವಿರೋಧಿಸಿ ಪಿ.ಹೆಚ್‌ಡಿ, ಎಂಎಸ್‌ಸಿ ಪದವಿಗಳನ್ನು ಮರಳಿಸಿದ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ

“ಆರೋಪಿಯು ನರ್ಸಿಂಗ್ ಓದಿದ್ದು, ಮೆಡಿಕಲ್‌ ಸ್ಟೋರ್‌ ಹೊಂದಿದ್ದಾನೆಂಬುದೂ ವಿಚಾರಣೆ ವೇಳೆ ಗೊತ್ತಾಗಿದೆ” ಎಂದು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...