3,000 ಮದರಸಾಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್‌ ಸೂಚನೆ

Date:

ರಾಜಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 3,000 ಮದರಸಾಗಳ ಪರಿಣಾಮಕಾರಿ ನಿರ್ವಹಣೆ, ಮೇಲ್ವಿಚಾರಣೆ ಹಾಗೂ ನಿಯಂತ್ರಣಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅಲ್ಲಿನ ರಾಜ್ಯ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್‌ ನಿರ್ದೇಶನ ನೀಡಿದೆ. ಅಲ್ಲದೆ, ಈ ಸಂಬಂಧ ವಿವರವಾದ ಪ್ರಮಾಣಪತ್ರ ಸಲ್ಲಿಸುವಂತೆಯೆ ಸೂಚಿಸಿದೆ.

- Advertisement -

ರಾಜಸ್ಥಾನದ ಮದರಸಾಗಳ ನಿರ್ವಹಣೆ ಮತ್ತು ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಾವಳಿಗಳನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ಮದರಸಾಗಳ ಕಾರ್ಯವೈಖರಿ ಮತ್ತು ನೀಡಲಾಗುವ ಶಿಕ್ಷಣದ ಗುಣಮಟ್ಟ ಪರಿಶೀಲನೆ ಹಾಗೂ ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಲು ಸರ್ಕಾರದ ನಿಯಂತ್ರಣ ಅಥವಾ ವ್ಯವಸ್ಥೆ ಇಲ್ಲ ಎಂದು ಅರ್ಜಿದಾರರು ವಾದಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ವಿನೀತ್ ಕುಮಾರ್ ಮಾಥುರ್ ಮತ್ತು ಚಂದ್ರಶೇಖರ್ ಶರ್ಮಾ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ. “ರಾಜ್ಯದಲ್ಲಿರುವ ಮದರಸಾಗಳ ಕಾರ್ಯನಿರ್ವಹಣೆಯ ಮೇಲೆ ಸರ್ಕಾರವಾಗಲಿ ಅಥವಾ ಶಿಕ್ಷಣ ಕ್ಷೇತ್ರದ ತಜ್ಞ ಸಂಸ್ಥೆಗಳಾಗಲಿ ಸೂಕ್ತ ನಿಯಂತ್ರಣ, ಮೇಲ್ವಿಚಾರಣೆ ಹಾಗೂ ಮಾರ್ಗದರ್ಶನ ನೀಡದಿರುವುದು ಗಂಭೀರವಾದ ಪ್ರಶ್ನೆಯನ್ನು ಹುಟ್ಟುಹಾಕಿದೆ” ಎಂದು ಹೇಳಿದೆ.

“ಪ್ರಾಥಮಿಕ ಮತ್ತು ಪ್ರೌಢ ಹಂತದ ಶಿಕ್ಷಣ ನೀಡುವ ಮದರಸಾಗಳಿಗೆ ರಾಜ್ಯ ಸರ್ಕಾರವೇ ಏಕರೂಪದ ಪಠ್ಯಕ್ರಮವನ್ನು ಸಿದ್ಧಪಡಿಸಬೇಕು. ಜಿಲ್ಲಾ ಮಟ್ಟದ ಶಿಕ್ಷಣಾಧಿಕಾರಿಗಳ ಉಸ್ತುವಾರಿಯಲ್ಲಿ ಸಾರ್ವಜನಿಕ ಪರೀಕ್ಷೆಗಳನ್ನು ನಡೆಸಬೇಕು. ಮಾಧ್ಯಮಿಕ ಮತ್ತು ಉನ್ನತ ಮಾಧ್ಯಮಿಕ ಮಟ್ಟದ ಶಿಕ್ಷಣ ನೀಡುತ್ತಿರುವ ಮದರಸಾಗಳ ಕುರಿತು ವರದಿ ತಯಾರಿಸಬೇಕು. ಮದರಸಾ ಮಂಡಳಿಯಲ್ಲಿ ನೋಂದಾಯಿಸಿಕೊಂಡು ಸಾಮಾನ್ಯ ಶಾಲೆಗಳಂತೆ ಕಾರ್ಯಾಚರಿಸುತ್ತಿರುವ ಸಂಸ್ಥೆಗಳಿಗೆ ನೀಡಲಾಗುವ ಆರ್ಥಿಕ ಅನುದಾನ ಮತ್ತು ಅವುಗಳ ಮಾನ್ಯತೆಯನ್ನು ಮರುಪರಿಶೀಲಿಸಬೇಕು” ಎಂದು ಕೋರ್ಟ್‌ ಹೇಳಿದೆ.

ಈ ಲೇಖನ ಓದಿದ್ದೀರಾ?: ಬಂಗಾಳದ 252 ಮದರಸಾಗಳು ಬಂದ್; ಭಯೋತ್ಪಾದಕರ ಆಶ್ರಯತಾಣ ಎಂದ ಸಚಿವ: ಬಿಜೆಪಿ ಸರ್ಕಾರಕ್ಕೆ ಮುಸ್ಲಿಮರೇ ಗುರಿಯೇ?

“ಮದರಸಾಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಿಕ್ಷಣ ಹಕ್ಕು ಕಾಯಿದೆ-2009 (ಆರ್‌ಟಿಇ) ಅಡಿಯಲ್ಲಿ ಅಗತ್ಯ ಶೈಕ್ಷಣಿಕ ಸೌಲಭ್ಯಗಳು ತಲುಪುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಅರ್ಹ ಶಿಕ್ಷಕರಿಂದಲೇ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳಬೇಕು. ನೋಂದಾಯಿತ ಮತ್ತು ನೋಂದಾಯಿತವಲ್ಲದ ಮದರಸಾಗಳು ನಿಗದಿಪಡಿಸಿದ ಶೈಕ್ಷಣಿಕ ಮಾನದಂಡಗಳನ್ನು ಪಾಲಿಸುತ್ತಿವೆಯೇ ಎಂದು ಪರಿಶೀಲಿಸಿ, ಮಾನದಂಡ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು” ಎಂದು ನಿರ್ದೇಶನ ನೀಡಿದೆ.

ಮುಂದುವರೆದು, “ಮದರಸಾಗಳ ಸೂಕ್ತ ನಿರ್ವಹಣೆ ಮತ್ತು ಸುಧಾರಣೆಗೆ ಸರ್ಕಾರ ಕೈಗೊಳ್ಳಬಹುದಾದ ಪರಿಣಾಮಕಾರಿ ಕ್ರಮಗಳ ಕುರಿತು ಸಮಗ್ರ ವರದಿ ಮತ್ತು ಪ್ರಮಾಣಪತ್ರವನ್ನು ಸಲ್ಲಿಸಬೇಕು” ಎಂದು ಸರ್ಕಾರದ ಪರ ವಕೀಲರಿಗೆ ಹೈಕೋರ್ಟ್‌ ಸೂಚಿಸಿದೆ.

ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ಮುಂದೂಡಿದೆ.

ಮದರಸಾಗಳಲ್ಲಿ ಕಂಪ್ಯೂಟರ್, ವಿಜ್ಞಾನ ಮತ್ತು ಗಣಿತ ಶಿಕ್ಷಣ ತರುವುದನ್ನು ಮದರಸಾಗಳ ನೇತಾರರು ಸ್ವಾಗತಿಸಿದ್ದಾರೆ. ಆದರೆ, ಸಂವಿಧಾನದ 30ನೇ ವಿಧಿಯಡಿ ಅಲ್ಪಸಂಖ್ಯಾತರಿಗೆ ನೀಡಲಾಗಿರುವ ತಮ್ಮದೇ ಆದ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ನಿರ್ವಹಿಸುವ ಸ್ವಾಯತ್ತ ಹಕ್ಕಿಗೆ ಯಾವುದೇ ರೀತಿಯ ಧಕ್ಕೆಯಾಗಬಾರದು. ಪಠ್ಯಕ್ರಮ ಮತ್ತು ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸರ್ಕಾರವೇ ವಶಕ್ಕೆ ಪಡೆದುಕೊಂಡರೆ, ಮದರಸಾಗಳ ಮೂಲ ಉದ್ದೇಶವಾದ ಧಾರ್ಮಿಕ ಮತ್ತು ಇಸ್ಲಾಮಿಕ್ ಅಧ್ಯಯನದ ಮೇಲಿನ ಗಮನ ಕಡಿತಗೊಳ್ಳಬಹುದು. ಸುಧಾರಣೆಯ ಹೆಸರಿನಲ್ಲಿ ಮದರಸಾಗಳ ಸ್ವಾಯತ್ತತೆಯನ್ನು ಕಸಿದುಕೊಳ್ಳಬಾರದು ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೋಂದಣಿಯೇ ಆಗದ RSSನಿಂದ ಪೌರತ್ವ ನೋಂದಣಿ ಜಾರಿಗೆ ಆಗ್ರಹ: ಜನಗಣತಿ, SIR ನಡುವೆ ಹೊಸ ವಿವಾದ

ದೇಶದಲ್ಲಿ ಮುಂಬರುವ ಜನಗಣತಿ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...

ತನಿಖೆಯ ನೆಪ, ನನೆಗುದಿಗೆ ಬಿಲ್: ₹38,000 ಕೋಟಿ ಪಾವತಿಗೆ ಗಡುವು ನೀಡಿದ ಗುತ್ತಿಗೆದಾರರು

ರಾಜ್ಯದಲ್ಲಿ ಮೂಲಸೌಕರ್ಯ ಅಭಿವೃದ್ಧಿಯ ಬೆನ್ನೆಲುಬಾಗಿರುವ ಸರ್ಕಾರಿ ಗುತ್ತಿಗೆದಾರರು ಸದ್ಯ ಸರ್ಕಾರದ ವಿರುದ್ಧ...

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...

SIR ಮುಕ್ತಾಯದ ಬೆನ್ನಲ್ಲೇ ಒಡಿಶಾ ಸಿಇಒ ಸ್ವಯಂ ನಿವೃತ್ತಿಗೆ ಅರ್ಜಿ

ಒಡಿಶಾದ ಮುಖ್ಯ ಚುನಾವಣಾಧಿಕಾರಿ (ಸಿಇಒ) ಹಾಗೂ ಹಿರಿಯ ಐಎಎಸ್ ಅಧಿಕಾರಿ ಆರ್.ಎಸ್....