ರಾಜಸ್ಥಾನ | ಮರಳು ಮಾಫಿಯಾ ಗೂಂಡಾಗಿರಿ: ವ್ಯಕ್ತಿಯನ್ನು JCBಗೆ ತಲೆಕೆಳಗಾಗಿ ಕಟ್ಟಿ ಹಲ್ಲೆ

Date:

ರಾಜಸ್ಥಾನದಲ್ಲಿ ಅಕ್ರಮ ಗಣಿಗಾರಿಕೆ ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದ್ದು, ಮಾಫಿಯಾ ನಡೆಸುತ್ತಿರುವವರ ಗೂಂಡಾಗಿರಿಯೂ ಹೆಚ್ಚುತ್ತಿದೆ. ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಬಿಜೆಪಿ ಸರ್ಕಾರ ಯಾವಾಗ ಎಚ್ಚೆತ್ತುಕೊಳ್ಳುತ್ತದೆ ಎಂಬ ಪ್ರಶ್ನೆಗಳು ರಾಜ್ಯದ್ಯಾಂತ ಕೇಳಿಬರುತ್ತಿವೆ. ಇದೇ ಹೊತ್ತಿನಲ್ಲಿ, ಮರಳು ಮಾಫಿಯಾದ ಗೂಂಡಾಗಳು ತಮ್ಮಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನನ್ನು ಜೆಸಿಬಿಗೆ ತಲೆಕೆಳಗಾಗಿ ಕಟ್ಟಿ, ಅಮಾನುಷವಾಗಿ ಥಳಿಸಿದ್ದಾರೆ.

- Advertisement -

ರಾಜಸ್ಥಾನದ ಬೀವಾಡ್ ಜಿಲ್ಲೆಯ ರಾಯ್‌ಪುರ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಅಮಾನುಷ, ಕ್ರೂರ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ರಾಯ್‌ಪುರ್ ಬಳಿಯ ಗುಡಿಯಾ ಗ್ರಾಮದಲ್ಲಿ, ಮರಳು ಮಾಫಿಯಾ ನಡೆಸುವ ತೇಜ್‌ಪಾಲ್ ಸಿಂಗ್‌ಉದಾವತ್ ಎಂಬಾತ ಡೀಸೆಲ್ ಕಳ್ಳತನದ ಶಂಕೆಯ ಮೇಲೆ ಜೆಸಿಬಿ ಚಾಲಕನ ಮೇಲೆ ಕ್ರೌರ್ಯ ಎಸಗಿದ್ದಾನೆ. ಚಾಲಕನನ್ನು ಸರಪಳಿಯಿಂದ ಜೆಸಿಬಿಗೆ ತಲೆಕೆಳಗಾಗಿ ಕಟ್ಟಿಹಾಕಿ, ಸುಮಾರು ಎರಡು/ಮೂರು ಗಂಟೆ ನಿರಂತರವಾಗಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ರಾಜಸ್ಥಾನದಲ್ಲಿ ಮಾಫಿಯಾ ಆಳ್ವಿಕೆ ಎಷ್ಟು ಕಾಲ ಮುಂದುವರಿಯುತ್ತದೆ? ಪೊಲೀಸರು ಮತ್ತು ಆಡಳಿತದ ಜೊತೆಗೂಡಿ ಆಡುತ್ತಿರುವ ಈ ಭಯಾನಕ ಆಟ ಯಾವಾಗ ನಿಲ್ಲುತ್ತದೆ. ಈ ಬಗ್ಗೆ ಸಾರ್ವಜನಿಕರು ಕೇಳುತ್ತಿದ್ದಾರೆ” ಎಂದು ಗೆಹ್ಲೋಟ್ ಹೇಳಿದ್ದಾರೆ.

ಈ ಲೇಖನ ಓದಿದ್ಧೀರಾ?: ಪಹಲ್ಗಾಮ್‌ ದಾಳಿಗೆ ಒಂದು ತಿಂಗಳು; ಸಿಂಧೂರ ಅಳಿಸಿದ ಹಂತಕರನ್ನು ಹಿಡಿದರೇ ಮೋದಿ?

ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ದೋಟಸಾರ ಕೂಡ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ರಾಜಸ್ಥಾನದಲ್ಲಿ ಮಾಫಿಯಾದ ಗೂಂಡಾಗಿರಿ ಮಿತಿಮೀರಿದೆ. ದುರ್ಬಲ ಬಿಜೆಪಿ ಸರ್ಕಾರದಲ್ಲಿ ಮಾಫಿಯಾಗೆ ಕಾನೂನಿನ ಭಯವಿಲ್ಲ. ಈ ಕ್ರೂರ ಘಟನೆಯು ಬಿಜೆಪಿ ಆಡಳಿತದ ರಾಜ್ಯದಲ್ಲಿ ಅಪರಾಧಿಗಳಿಗೆ ನೀಡಲಾಗುತ್ತಿರುವ ರಾಜಕೀಯ ರಕ್ಷಣೆ, ಕಾನೂನು ಮತ್ತು ಸುವ್ಯವಸ್ಥೆಯ ವೈಫಲ್ಯ, ಪೊಲೀಸ್ ನಿಷ್ಕ್ರಿಯತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ” ಎಂದು ಹೇಳಿದ್ದಾರೆ.

“ಘಟನೆಯು ಕೇವಲ ಒಬ್ಬ ವ್ಯಕ್ತಿಯ ಮೇಲಿನ ದೌರ್ಜನ್ಯವಲ್ಲ, ಬದಲಾಗಿ ಅಪರಾಧಿಗಳಿಗೆ ರಕ್ಷಣೆ ನೀಡುವ ಮೂಲಕ ಸಾಮಾನ್ಯ ಜನರ ಹಕ್ಕುಗಳನ್ನು ಹತ್ತಿಕ್ಕುತ್ತಿರುವ ಇಡೀ ವ್ಯವಸ್ಥೆಯ ಮೇಲಿನ ಕಳಂಕವಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮಾಫಿಯಾಗೆ ನೀಡಲಾಗುತ್ತಿರುವ ರಾಜಕೀಯ ಪ್ರೋತ್ಸಾಹವನ್ನು ಬಹಿರಂಗಪಡಿಸಬೇಕು. ಘಟನೆಯಲ್ಲಿ ನಿರ್ಲಕ್ಷ್ಯ ವಹಿಸಿದ ಸ್ಥಳೀಯ ಪೊಲೀಸರ ಪಾತ್ರದ ಬಗ್ಗೆಯೂ ನಿಷ್ಪಕ್ಷಪಾತ ತನಿಖೆ ನಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...