ರಾಜಸ್ಥಾನ | ಗುಜರಿ ಗೋದಾಮಿನಲ್ಲಿ ಭೀಕರ ಅಗ್ನಿ ದುರಂತ; ಇಬ್ಬರು ಬಾಲಕಿಯರು ಸೇರಿ ನಾಲ್ವರ ಸಜೀವ ದಹನ

Date:

ರಾಜಸ್ಥಾನದ ಕೋಟಪುತ್ಲಿ-ಬೆಹ್ರೋರ್ ಜಿಲ್ಲೆಯ ನೀಮ್ರಾನಾ ಎಂಬಲ್ಲಿ ನಿನ್ನೆ (ಏ.24) ರಾತ್ರಿ ಗುಜರಿ ಗೋದಾಮೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಸೇರಿದಂತೆ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಶುಕ್ರವಾರ ತಡರಾತ್ರಿ ಗೋದಾಮಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ, ನಾಲ್ಕು ಮೃತದೇಹಗಳು ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸತ್ಬೀರ್ ಸಿಂಗ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಕವಿತಾ (15), 7 ವರ್ಷದ ಬಾಲಕಿ (ಸಂಬಂಧಿ), ರವೀಂದ್ರದತ್ ಯಾದವ್ (ಚಾಲಕ) ಹಾಗೂ ಜಾನಿ (ಗೋದಾಮಿನ ಕಾರ್ಮಿಕ) ಮೃತರು.

ಪ್ರಾಥಮಿಕ ತನಿಖೆಯ ಪ್ರಕಾರ, ಹರಿಯಾಣದಿಂದ ಪ್ಲಾಸ್ಟಿಕ್ ಖರೀದಿಸಲು ಬಂದಿದ್ದ ಚಾಲಕ ಸೇದಿದ ಬೀಡಿಯನ್ನು ಎಸೆದಿದ್ದೇ ಈ ಅನಾಹುತಕ್ಕೆ ಕಾರಣ ಎನ್ನಲಾಗಿದೆ. ಘಟನೆಯ ಸಮಯದಲ್ಲಿ ಬಾಲಕಿಯರು ಸುಗಂಧ ದ್ರವ್ಯದ (Perfume) ಖಾಲಿ ಬಾಟಲಿಗಳನ್ನು ಬೇರ್ಪಡಿಸುತ್ತಿದ್ದರು. ಚಾಲಕ ಎಸೆದ ಬೀಡಿಯ ಕಿಡಿಯು ಬಾಟಲಿಗಳಲ್ಲಿದ್ದ ಸ್ಪಿರಿಟ್ ಅಂಶಕ್ಕೆ ತಗುಲಿ ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಇದನ್ನೂ ಓದಿ: ಮೀಡಿಯಾ ತೋರಿಸುತ್ತಿರುವುದೊಂದು, FIR ನಲ್ಲಿರುವುದು ಇನ್ನೊಂದು: ನಾಸಿಕ್‌ TCS ಕೇಸ್‌ನ ಅಸಲಿಯತ್ತೇನು?

ಬೆಂಕಿ ವೇಗವಾಗಿ ಹರಡಿದಾಗ, ಗಾಬರಿಗೊಂಡ ನಾಲ್ವರು ಪ್ರಾಣ ಉಳಿಸಿಕೊಳ್ಳಲು ಗೋದಾಮಿನ ಒಂದು ಮೂಲೆಗೆ ಓಡಿದ್ದಾರೆ. ಆದರೆ ಅಲ್ಲಿ ದೊಡ್ಡ ಗೋಡೆಯಿದ್ದ ಕಾರಣ ಹೊರಬರಲಾರದೆ ಸಿಲುಕಿಕೊಂಡಿದ್ದಾರೆ. ದಟ್ಟವಾದ ಹೊಗೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಕಾಲಿಗೆ ಗಾಯವಾಗಿದೆ. ಸದ್ಯ ಗೋದಾಮಿನ ಮಾಲೀಕ ಕರಣ್ ಸಿಂಗ್ ತಲೆಮರೆಸಿಕೊಂಡಿದ್ದು, ಆತನ ಸಹಚರನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...