ಲಂಚ ಪಡೆಯುತ್ತಿದ್ದ ಬೆಂಗಳೂರಿನ ಮೂವರು ಪೋಲಿಸರ ಬಂಧಿಸಿದ ರಾಜಸ್ಥಾನ ಪೊಲೀಸ್

Date:

ಬೆಂಗಳೂರಿನಲ್ಲಿ ದಾಖಲಾಗಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವೊಂದರ ತನಿಖೆಗೆಂದು ಜೈಪುರಕ್ಕೆ ತೆರಳಿ, ಅಲ್ಲಿ ಆರೋಪಿಗಳ ಪರವಾಗಿ ಕೇಸ್ ತಿರುಗುವಂತೆ ಮಾಡಲು ಲಂಚ ಪಡೆಯುತ್ತಿದ್ದ ಕರ್ನಾಟಕದ ಮೂವರು ಪೊಲೀಸರನ್ನು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ACB) ರೆಡ್‌ಹ್ಯಾಂಡ್ ಆಗಿ ಬಂಧಿಸಿದೆ.

- Advertisement -

ಬಂಧಿತ ಮೂವರೂ ಬೆಂಗಳೂರಿನ ಎಚ್‌ಎಎಲ್ ಪೊಲೀಸ್ ಠಾಣೆಗೆ ಸೇರಿದವರಾಗಿದ್ದಾರೆ. ಲಂಚ ಪಡೆಯುವಾಗ ಹೆಡ್ ಕಾನ್‌ಸ್ಟೆಬಲ್ ಉಳ್ವಪ್ಪರನ್ನು ಬಂಧಿಸಲಾಗಿದೆ. ಅದಾದ ಬಳಿಕ ಮಹಿಳಾ ಸಬ್‌ ಇನ್‌ಸ್ಪೆಕ್ಟರ್ (PSI) ಅನಿತಾ ಕೆ, ಹೆಡ್ ಕಾನ್‌ಸ್ಟೆಬಲ್ ಯತೀಶ್ ಕುಮಾರ್ ಬಂಧನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಇದನ್ನು ಓದಿದ್ದೀರಾ? ಪೊಲೀಸ್‌ ಕಸ್ಟಡಿಯಲ್ಲಿ ಆರೋಪಿ ಸಾವು; ಐವರು ಪೊಲೀಸರ ಬಂಧನ

ಬೆಂಗಳೂರಿನ ನಿವಾಸಿಯೊಬ್ಬರು ಜೈಪುರ ಮೂಲದ ವ್ಯಕ್ತಿಯನ್ನು 2025ರ ಮೇನಲ್ಲಿ ವಿವಾಹವಾಗಿದ್ದರು. ಆದರೆ, ವರದಕ್ಷಿಣೆ ಕಿರುಕುಳದ ಹಿನ್ನೆಲೆಯಲ್ಲಿ ಆಕೆ 2026ರ ಫೆಬ್ರವರಿಯಲ್ಲಿ ಬೆಂಗಳೂರಿನ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪತಿ ಮತ್ತು ಆತನ ಕುಟುಂಬದವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ಪ್ರಕರಣದ ತನಿಖೆಗಾಗಿ ಬೆಂಗಳೂರಿನ ಎಚ್ಎಎಲ್ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದರು.

ತನಿಖೆಗೆ ಹೋದ ಪೊಲೀಸರು ವರದಕ್ಷಿಣೆ ಕೇಸಿನಲ್ಲಿ ಪರಿಹಾರ ನೀಡುವುದಾಗಿ ಮತ್ತು ಕೇಸ್ ದುರ್ಬಲಗೊಳಿಸುವುದಾಗಿ ಆರೋಪಿ ಕುಟುಂಬದವರ ಬಳಿ ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪದೇ ಪದೇ ಹಣಕ್ಕಾಗಿ ಒತ್ತಾಯಿಸುತ್ತಿದ್ದರಿಂದ ಬೇಸತ್ತ ಆರೋಪಿ ಪತಿಯ ತಂದೆ ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ACB) ದೂರು ನೀಡಿದ್ದರು.

ಈ ದೂರಿನ ಸತ್ಯಾಸತ್ಯತೆಯನ್ನು ಪರಿಶೀಲಿಸಿದ ರಾಜಸ್ಥಾನ ಎಸಿಬಿ ಅಧಿಕಾರಿಗಳು, ಜೈಪುರದ ವಿಧಾಯಕಪುರಿ ಪ್ರದೇಶದ ಹೋಟೆಲ್ ಗಂಗೌರ್‌ನಲ್ಲಿ ಬಲೆ ಹೆಣೆದಿದ್ದರು. ಲಂಚದ ಹಣದ ಮೊದಲ ಕಂತಾಗಿ ₹40,000 ಸ್ವೀಕರಿಸುತ್ತಿದ್ದ ವೇಳೆ ಹೆಡ್ ಕಾನ್‌ಸ್ಟೇಬಲ್ ಬಂಧನ ಮಾಡಲಾಗಿದೆ. ಅದಾದ ಬಳಿಕ ತನಿಖೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಲಾಗಿದೆ.

ರಾಜಸ್ಥಾನದ ಎಸಿಬಿ ಹೆಚ್ಚುವರಿ ಎಸ್‌ಪಿ ಭೂಪೇಂದ್ರ ಚೌಧರಿ ಅವರ ನೇತೃತ್ವದಲ್ಲಿ ಹಾಗೂ ಡಿಐಜಿ ಓಂ ಪ್ರಕಾಶ್ ಮೀನಾ ಮತ್ತು ಡಿಜಿ ಗೋವಿಂದ್ ಗುಪ್ತಾ ಅವರ ಮಾರ್ಗದರ್ಶನದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಬಂಧಿತರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ತನಿಖೆಯ ವೇಳೆ ಪಿಎಸ್‌ಐ ಅನಿತಾ ಅವರ ರಕ್ತದೊತ್ತಡ ಹೆಚ್ಚಾದ ಕಾರಣ ಅವರಿಗೆ ವೈದ್ಯಕೀಯ ನೆರವು ಕೂಡ ನೀಡಲಾಗಿತ್ತು ಎಂದು ಎಸಿಬಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ಔರಾದ್ ಪಟ್ಟಣ ಸೇರಿದಂತೆ ತಾಲೂಕು ವ್ಯಾಪ್ತಿಯ ಅಂಗಡಿ...

ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆ ಕಾಮಗಾರಿ ಹಾಗೂ ರಾಜ್ಯ ಹೆದ್ದಾರಿ–122ರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥರನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ಗೆ ದೂರು

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುತ್ತಿರುವ...

ಡಿಜಿಟಲ್ ವಂಚನೆಗೆ ಒಳಗಾದ ಸಂತ್ರಸ್ತರಿಗೆ ಬ್ಯಾಂಕುಗಳೇ ಪರಿಹಾರ ನೀಡಬೇಕು: ಸುಪ್ರೀಂ ಕೋರ್ಟ್‌!

"ಡಿಜಿಟಲ್ ವಂಚನೆ ಮತ್ತು "ಡಿಜಿಟಲ್ ಅರೆಸ್ಟ್" ನಂತಹ ಸೈಬರ್ ಅಪರಾಧಗಳಿಗೆ ಒಳಗಾಗುವ...