ರಾಜಸ್ಥಾನ | ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಆರೋಪಿಗಳಿಗೆ ಬಿಜೆಪಿಯೊಂದಿಗೆ ನಂಟು; ಸಿಎಂ ಗೆಹ್ಲೋಟ್

Date:

ಉದಯಪುರದ ಟೈಲರ್ ಕನ್ಹಯ್ಯಾ ಲಾಲ್ ತೇಲಿ ಅವರನ್ನು ಹತ್ಯೆಗೈದ ಹಂತಕರು ಬಿಜೆಪಿಯೊಂದಿಗೆ ನಂಟು ಹೊಂದಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭಾನುವಾರ ಆರೋಪಿಸಿದ್ದಾರೆ. ರಾಜಸ್ಥಾನದಲ್ಲಿ ನವೆಂಬರ್ 25ರಂದು ವಿಧಾನಸಭೆಗೆ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನ ರಾಜ್ಯದಲ್ಲಿ ಕೋಮು ಉದ್ವಿಗ್ನತೆ ಉಂಟುಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

- Advertisement -

ಜೋಧ್‌ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಸ್ಥಾನ ಗೆಹ್ಲೋಟ್, “ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬದಲಿಗೆ ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ನಡೆಸಿದ್ದರೆ, ತನಿಖೆ ತಾರ್ಕಿಕವಾಗಿ ಸಾಗುತ್ತಿತ್ತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

2022ರ ಜೂನ್‌ 28ರಂದು ಕನ್ಹಯ್ಯಾ ಲಾಲ್ ಅವರನ್ನು ಇಬ್ಬರು ದುಷ್ಕರ್ಮಿಗಳು ಹತ್ಯೆಗೈದಿದ್ದರು. ಪ್ರವಾದಿ ವಿರುದ್ಧ ವಾಗ್ದಾಳಿ ನಡೆಸಿದ್ದ ಆರೋಪದ ಮೇಲೆ ಬಿಜೆಪಿಯಿಂದ ಅಮಾನತುಕಗೊಂಡಿರುವ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಕನ್ಹಯ್ಯಾ ಲಾಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದರು. ಆ ಕಾರಣಕ್ಕೆ ಅವರನ್ನು ಹತ್ಯೆ ಮಾಡಲಾಗಿತ್ತು ಎಂದು ಹೇಳಲಾಗಿದೆ. ಅವರ ಹತ್ಯೆ ದೇಶಾದ್ಯಂತ ಆಕ್ರೋಶಕ್ಕೆ ಕಾಋಣವಾಗಿತ್ತು.

ಪ್ರಕರಣವನ್ನು ಆರಂಭದಲ್ಲಿ ಉದಯಪುರದ ಧನ್ಮಂಡಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಬಳಿಕ, ಒಂದೇ ದಿನದಲ್ಲಿ (2022ರ ಜೂನ್ 29ರಂದು) ಎನ್‌ಐಎಗೆ ವರ್ಗಾಯಿಸಲಾಗಿತ್ತು.

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ದಾಳಿಕೋರರು ವಿಡಿಯೋದಲ್ಲಿ ತಮ್ಮನ್ನು ರಿಯಾಜ್ ಅಖ್ತರಿ ಮತ್ತು ಘೌಸ್ ಮೊಹಮ್ಮದ್ ಎಂದು ಗುರುತಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ದಿನವೇ ಎನ್‌ಐಎ ಪ್ರಕರಣವನ್ನು ಕೈಗೆತ್ತಿಕೊಂಡಿದೆ. ತನಿಖೆಗೆ ರಾಜ್ಯ ಸರ್ಕಾರ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದು ಗೆಹ್ಲೋಟ್ ಹೇಳಿದ್ದಾರೆ.

“ಎನ್‌ಐಎ ಏನು ಕ್ರಮ ಕೈಗೊಂಡಿದೆ ಎಂಬುದು ಯಾರಿಗೂ ತಿಳಿದಿಲ್ಲ. ನಮ್ಮ ಎಸ್‌ಒಜಿ ಪ್ರಕರಣವನ್ನು ಮುಂದುವರಿಸಿದ್ದರೆ, ಅಪರಾಧಿಗಳಿಗೆ ಈ ಹೊತ್ತಿಗೆ ಶಿಕ್ಷೆ ವಿಧಿಸಲಾಗುತ್ತಿತ್ತು” ಎಂದು ಅವರು ಭಾನುವಾರ ಹೇಳಿದ್ದಾರೆ.

“ಅಪರಾಧಿಗಳಿಗೆ ಬಿಜೆಪಿಯೊಂದಿಗೆ ಸಂಪರ್ಕವಿದೆ. ಹತ್ಯೆ ಘಟನೆಗೆ ಕೆಲವು ದಿನಗಳ ಮೊದಲು, ಬೇರೊಂದು ಪ್ರಕರಣದಲ್ಲಿ ಆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ, ಅವರನ್ನು ಬಿಡುಗಡೆ ಮಾಡಿಸಲು ಬಿಜೆಪಿ ನಾಯಕರು ಪೊಲೀಸ್ ಠಾಣೆಗೆ ಬಂದಿದ್ದರು” ಎಂದು ರಾಜಸ್ಥಾನ ಮುಖ್ಯಮಂತ್ರಿ ಆರೋಪಿಸಿದ್ದಾರೆ.

“ಬಿಜೆಪಿಯು ಚುನಾವಣೆಯಲ್ಲಿ ಸೋಲು ಭೀತಿಯಲ್ಲಿದೆ. ಆದ್ದರಿಂದ, ವಿಲಕ್ಷಣವಾದ ಹೇಳಿಕೆಗಳನ್ನು ನೀಡುತ್ತಿದೆ. ಅವರು ನಾವು ಪ್ರಾರಂಭಿಸಿದ ಯೋಜನೆಗಳು ಮತ್ತು ನಾವು ತಂದ ಕಾನೂನುಗಳ ಬಗ್ಗೆ ಒಂದು ಮಾತನ್ನೂ ಮಾತನಾಡುವುದಿಲ್ಲ. ಅವರು, ಮುಂದೆ ತೊಂದರೆಯನ್ನುಂಟುಮಾಡಲು ಬಯಸುತ್ತಾರೆ. ಅವರಿಗೆ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ” ಎಂದು ಗೆಹ್ಲೋಟ್ ಹೇಳಿದ್ದಾರೆ.

ರಾಜಸ್ಥಾನದಲ್ಲಿ ನವೆಂಬರ್ 25 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇರಳ ಸರ್ಕಾರದಲ್ಲಿ ಭಿನ್ನಮತ ಸ್ಫೋಟ; ಮುಖ್ಯಮಂತ್ರಿ ವಿರುದ್ಧವೇ ತಿರುಗಿಬಿದ್ದ ಯುಡಿಎಫ್ ಸಂಚಾಲಕ

ಕೇರಳದಲ್ಲಿ ವಿ.ಡಿ. ಸತೀಶನ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ...

ಸಾಮಾನ್ಯರಿಗೆ ಮತ್ತೆ ‘ಇಎಂಐ’ ಬರೆ: ರೆಪೊ ದರ ಶೇ. 0.25ರಷ್ಟು ಹೆಚ್ಚಳಕ್ಕೆ ಆರ್‌ಬಿಐ ಒಲವು

ದೇಶದಲ್ಲಿ ಏರಿಕೆಯಾಗುತ್ತಿರುವ ಹಣದುಬ್ಬರವನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...