ರಾಜಸ್ಥಾನ | ತೆರವು ಕಾರ್ಯಾಚರಣೆಗೆ ಬಂದ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಮಹಿಳೆ

Date:

ತಮ್ಮ ಆಸ್ತಿಯೆಂದು ರೈತ ಕುಟುಂಬವೊಂದು ಕೃಷಿ ಮಾಡುತ್ತಿದ್ದ ಭೂಮಿಯನ್ನು ತೆರವುಗೊಳಿಸಲು ಬಂದಿದ್ದ ಮಹಿಳಾ ಅಧಿಕಾರಿಯೊಬ್ಬರ ಕೂದಲನ್ನು ಹಿಡಿದು ಗ್ರಾಮದ ಮಹಿಳೆಯೊಬ್ಬರು ಎಳೆದಾಡಿರುವ ಘಟನೆ ರಾಜಸ್ಥಾನದ ತೋಡಭೀಮ್‌ ಜಿಲ್ಲೆಯ ಗಂಗಾಪುರ ನಗರದಲ್ಲಿ ನಡೆದಿದೆ.

- Advertisement -

ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ತೋಡಭೀಮ್‌ನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸುನೀತಾ ಮೀನಾ ಮತ್ತು ಗಂಗಾಪುರ ನಗರದ ಸ್ಥಳೀಯರ ನಡುವೆ ತೀವ್ರ ಸಂಘರ್ಷ ನಡೆದಿದೆ. ಘಟನೆಯು ಗುರುವಾರ ಸಂಜೆ ನಡೆಸಿದ್ದು, ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ರೈತರೊಬ್ಬರು ಕೃಷಿ ಮಾಡುತ್ತಿರುವ ತಮ್ಮ ಜಮೀನಿಗೆ ಸಂಬಂಧಿಸಿದಂತೆ ಹಕ್ಕು ಹೊಂದಿದ್ದೇವೆಂದು ವಾದಿಸಿದ್ದಾರೆ. ಆದರೂ, ಆ ಭೂಮಿಯನ್ನು ತೆರವುಗೊಳಿಸಲು ಎಸ್‌ಡಿಎಂ ಸುನೀತಾ ಮೀನಾ ಬುಲ್ಡೋಜರ್‌ಗಳ ಮೂಲಕ ಸ್ಥಳಕ್ಕೆ ಬಂದಿದ್ದರು. ಈ ವೇಳೆ, ಮಹಿಳೆಯೊಬ್ಬರು ಸುನೀತಾ ಮೀನಾ ಅವರ ಕೂದಲು ಹಿಡಿದು ಎಳೆದಾಡಿ, ಹಲ್ಲೆ ನಡೆಸಿದ್ದಾರೆ.

ಘಟನೆಗೆ ಸ್ಥಳೀಯ ಪೊಲೀಸರ ನಿರ್ಲಕ್ಷ್ಯವೂ ಕಾರಣವೆಂದು ಆರೋಪಿಸಲಾಗಿದೆ. ಹೀಗಾಗಿ, ತೋಡಭೀಮ್‌ ಪೊಲೀಸ್‌ ಠಾಣೆಯ ಪ್ರಭಾರಿ ಅಧಿಕಾರಿ ದಿಲೀಪ್ ವರ್ಮಾ ಹಾಗೂ 17 ಸಿಬ್ಬಂದಿಗಳಿಗೆ ಗಂಗಾಪುರ ನಗರ ಎಸ್‌ಪಿ ಸುಜೀತ್ ಶಂಕರ್ ನೋಟಿಸ್‌ ಜಾರಿ ಮಾಡಿದ್ದಾರೆ. ಅಲ್ಲದೆ, ಘಟನೆಯ ಸಮಯದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದ್ದಾರೆ.

ವರದಿಗಳ ಪ್ರಕಾರ, ಸುನೀತಾ ಮೀನಾ ಅವರನ್ನು ತೋಡಭೀಮ್‌ನಿಂದ ಬೇರೆ ಸ್ಥಳಕ್ಕೆ ಕೆಲ ದಿನಗಳ ಹಿಂದೆಯೇ ವರ್ಗಾವಣೆ ಮಾಡಲಾಗಿದೆ. ತೋಡಭೀಮ್‌ಗೆ ಪೂಜಾ ಮೀನಾ ಎಂಬವರನ್ನು ನಿಯೋಜಿಸಲಾಗಿದೆ. ಆದರೂ, ಪೂಜಾ ಅವರಿಗೆ ಅಧಿಕಾರ ಹಸ್ತಾಂತರಿಸದ ಸುನೀತಾ ಅವರು ಇನ್ನೂ ತೋಡಭೀಮ್‌ನಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...