ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ರಾಜಧಾನಿ ಎಕ್ಸ್‌ಪ್ರೆಸ್‌; 7 ಆನೆಗಳು ಸಾವು

Date:

ರೈಲ್ವೇ ಹಳಿ ದಾಟುತ್ತಿದ್ದ ಆನೆಗಳ ಹಿಂಡಿಗೆ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದು 7 ಆನೆಗಳು ಮೃತಪಟ್ಟಿರುವ ಘಟನೆ ಅಸ್ಸಾಂನ ಎನ್.ಎಫ್. ರೈಲ್ವೆಯ ಲುಮ್ಡಿಂಗ್ ವಿಭಾಗದಲ್ಲಿ ಶನಿವಾರ ಮುಂಜಾನೆ ನಡೆದಿದೆ. ಜಮುನಾಮುಖ್-ಕಂಪುರ ರೈಲ್ವೇ ಮಾರ್ಗದಲ್ಲಿ ದುರ್ಘಟನೆ ಸಂಭವಿಸಿದೆ. ರೈಲಿನ ಎಂಜಿನ್ ಮತ್ತು ಐದು ಬೋಗಿಗಳು ಹಳಿತಪ್ಪಿವೆ. ಪ್ರಯಾಣಿಕರಲ್ಲಿ ಯಾವುದೇ ಪ್ರಾಣಾಪಾಯಗಳಾಗಿಲ್ಲ.

- Advertisement -

ಜಮುನಾಮುಖ್-ಕಂಪುರ ರೈಲ್ವೇ ಮಾರ್ಗದಲ್ಲಿ ಮುಂಜಾನೆ 6:11ರ ಸುಮಾರಿಗೆ ಸೈರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ತೆರಳುತ್ತಿತ್ತು. ಇದೇ ಸಮಯದಲ್ಲಿ, ಆನೆಗಳು ಹಿಂಡು ಹಳಿ ದಾಟುತ್ತಿತ್ತು. ಈ ವೇಳೆ, ಆನೆಗಳಿಗೆ ರೈಲು ಡಿಕ್ಕಿ ಹೊಡೆದಿದೆ. 7 ಆನೆಗಳು ಮೃತಪಟ್ಟಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈವರೆಗೆ ಯಾವುದೇ ಪ್ರಾಣಿಕರ ಸಾವು-ನೋವು ಸಂಭವಿಸಿಲ್ಲ. ಎನ್.ಎಫ್ ರೈಲ್ವೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಅಪಘಾತ ಪರಿಹಾರ ರೈಲುಗಳು ಕೂಡ ಸ್ಥಳಕ್ಕೆ ತಲುಪಿವೆ. ಗುವಾಹಟಿ ರೈಲ್ವೆ ನಿಲ್ದಾಣದಲ್ಲಿ ಸಹಾಯವಾಣಿ ಸಂಖ್ಯೆಗಳನ್ನು ಈಗಾಗಲೇ ಸಕ್ರಿಯಗೊಳಿಸಲಾಗಿದೆ: 0361-2731621 / 2731622 / 2731623.

ಈ ಲೇಖನ ಓದಿದ್ದೀರಾ?: ದೇಶದ ಮುಸ್ಲಿಮರ ಮೇಲೆ ಇಲ್ಲದ ಪ್ರೀತಿ, ವಿದೇಶಿ ಮುಸ್ಲಿಮರ ಮೇಲ್ಯಾಕೆ ಮೋದೀಜಿ?

ಹಳಿತಪ್ಪಿದ ರೈಲು ಗುವಾಹಟಿಗೆ ತೆರಳಿದೆ. ಘಟನೆಯಲ್ಲಿ ಹಾನಿಗೊಳಗಾಗಿದ್ದ ಬೋಗಿಗಳನ್ನು ತೆರವುಗೊಳಿಸಿ, ಹೊಸ ಬೋಗಿಗಳನ್ನು ಸೇರಿಸಲಾಗಿದೆ. ರೈಲು ತನ್ನ ಪ್ರಯಾಣವನ್ನು ಪುನರಾರಂಭಿಸಲಿದೆ.

“ಘಟನೆಯು ‘ಆನೆ ಕಾರಿಡಾರ್ ಎಂದು ಘೋಷಿಸಲಾಗದ ಸ್ಥಳದಲ್ಲಿ ನಡೆದಿದೆ. ಆನೆಗಳ ಹಿಂಡನ್ನು ಗಮನಿಸಿದ ಲೋಕೋ ಪೈಲಟ್ ತುರ್ತು ಬ್ರೇಕ್‌ ಹಾಕಿದ್ದಾರೆ. ಆದಾಗ್ಯೂ, ಆನೆಗಳಿಗೆ ರೈಲು ಡಿಕ್ಕಿ ಹೊಡೆದಿದೆ” ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಇಂತಹ ಘಟನೆ ಇದೇ ಮೊದಲಲ್ಲ. ರೈಲು ಡಿಕ್ಕಿ ಹೊಡೆದು ಆನೆಗಳು ಸಾವನ್ನಪ್ಪಿದ ಹಲವಾರು ಘಟನೆಗಳು ನಡೆದಿವೆ. ಕಳೆದ ಕೆಲವು ವರ್ಷಗಳಲ್ಲಿ, ದೇಶಾದ್ಯಂತ 81ಕ್ಕೂ ಹೆಚ್ಚು ಆನೆಗಳು ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...