ರಾಜೀವ್ ಗಾಂಧಿ ಹತ್ಯೆ ಪ್ರಕರಣ | ಮೂವರು ಆರೋಪಿಗಳು ಶ್ರೀಲಂಕಾಗೆ ಗಡಿಪಾರು

Date:

ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಅಪರಾಧಿಗಳಾದ ಮುರುಗನ್ ಅಲಿಯಾಸ್ ಶ್ರೀಹರನ್, ಜಯಕುಮಾರ್ ಹಾಗೂ ರಾಬರ್ಟ್ ಪಯಸ್ ಅವರನ್ನು ಬುಧವಾರ (ಏಪ್ರಿಲ್‌ 03) ಚೆನ್ನೈ ವಿಮಾನ ನಿಲ್ದಾಣದಿಂದ ಶ್ರೀಲಂಕಾಕ್ಕೆ ಗಡಿಪಾರು ಮಾಡಲಾಯಿತು ಎಂದು ವರದಿ ತಿಳಿಸಿದೆ.

- Advertisement -

ಜೈಲಿನಲ್ಲಿ ಅಪರಾಧಿಗಳ ಉತ್ತಮ ನಡವಳಿಕೆಯನ್ನು ಪರಿಗಣಿಸಿ ಮೂವರನ್ನು ಬಿಡುಗಡೆಗೊಳಿಸಲು ತಮಿಳುನಾಡು ಸರ್ಕಾರ ಶಿಫಾರಸ್ಸು ಮಾಡಿತ್ತು. ಅದರಂತೆ, 2022ರ ನವೆಂಬರ್‌ನಲ್ಲಿ ಸುಪ್ರೀಂಕೋರ್ಟ್‌ ರಾಜೀವ್‌ ಗಾಂಧಿ ಹಂತಕರಾದ ಮುರುಗನ್‌, ರಾಬರ್ಟ್‌ ಪಾಯಸ್‌, ಜಯಕುಮಾರ್‌ ಸೇರಿದಂತೆ ಆರು ಮಂದಿಯನ್ನು ಬಿಡುಗಡೆಗೊಳಿಸಲು ಆದೇಶ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ನವೆಂಬರ್ 2022ರಲ್ಲಿ ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿದ ಪ್ರಕರಣದ ಏಳು ಅಪರಾಧಿಗಳಲ್ಲಿ ಈ ಮೂವರೂ ಸೇರಿದ್ದಾರೆ. ಬಿಡುಗಡೆಯಾದ ನಂತರ, ಶ್ರೀಲಂಕಾ ಪ್ರಜೆಗಳಾದ ಮೂವರನ್ನು ತಿರುಚಿರಾಪಲ್ಲಿಯ ವಿಶೇಷ ಶಿಬಿರದಲ್ಲಿ ಬಿಗಿ ಬಂದೋಬಸ್ತ್‌ನಲ್ಲಿ ಇರಿಸಲಾಗಿತ್ತು. ಪೊಲೀಸ್‌ ಅಧಿಕಾರಿಗಳ ತಂಡ ಮೂವರನ್ನ ಏಪ್ರಿಲ್ 2ರಂದು ರಾತ್ರಿ ಚೆನ್ನೈಗೆ ಕರೆತಂದು, ಏಪ್ರಿಲ್ 3ರಂದು ಕೊಲಂಬೊ (ಶ್ರೀಲಂಕಾ)ಗೆ ಗಡಿಪಾರು ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ಗಡಿಪಾರು ಆದೇಶ ಹೊರಡಿಸಿದ ನಂತರ ಅವರು ಮನೆಗೆ ಹಿಂತಿರುಗಬಹುದು ಎಂದು ತಮಿಳುನಾಡು ಸರ್ಕಾರ ಮದ್ರಾಸ್ ಹೈಕೋರ್ಟ್‌ಗೆ ಈ ಹಿಂದೆ ತಿಳಿಸಿತ್ತು. ಇಲ್ಲಿನ ಶ್ರೀಲಂಕಾ ಹೈಕಮಿಷನ್ ಈ ಹಿಂದೆ ಅವರಿಗೆ ಸ್ವದೇಶಕ್ಕೆ ಮರಳಲು ಪ್ರಯಾಣ ದಾಖಲೆಗಳನ್ನು ನೀಡಿತ್ತು.

ಈ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮತ್ತೊಬ್ಬ ಶ್ರೀಲಂಕಾ ಪ್ರಜೆ ಸಂತಾನ್ ಇತ್ತೀಚೆಗೆ ಮೃತಪಟ್ಟಿದ್ದರು. ಪ್ರಕರಣದಲ್ಲಿ ಅಪರಾಧಿಗಳೆಂದು ಘೋಷಿಸಲ್ಪಟ್ಟ ಮತ್ತು ಬಿಡುಗಡೆಗೊಂಡಿರುವ ಇತರರೆಂದರೆ ಪೆರಾರಿವಾಲನ್, ರವಿಚಂದ್ರನ್ ಮತ್ತು ನಳಿನಿ ಎಲ್ಲ ಭಾರತೀಯರು. ಈ ಎಲ್ಲ ಏಳು ಮಂದಿ 30 ವರ್ಷಗಳ ಕಾಲ ಜೈಲಿನಲ್ಲಿದ್ದರು.

 ಸುದ್ದಿ ಓದಿದ್ದೀರಾ? ಏಪ್ರಿಲ್ 3ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು; ಮತ್ತೆ ಯಾವಾಗಾ? ಇಲ್ಲಿದೆ ಮಾಹಿತಿ

ಶ್ರೀಲಂಕಾ ಪ್ರಜೆಯಾದ ಆರೋಪಿ ಮುರುಗನ್‌, ಆರೋಪಿ ನಳಿನಿಯನ್ನು ವಿವಾಹವಾಗಿದ್ದನು. ಈ ಪ್ರಕರಣದಲ್ಲಿ ದಿ.ರಾಜೀವ್‌ ಗಾಂಧಿ ಪತ್ನಿ ಸೋನಿಯಾ ಗಾಂಧಿ ಮಧ್ಯಪ್ರವೇಶಿಸಿ, ಗರ್ಭಿಣಿಯಾಗಿದ್ದ ನಳಿನಿಯ ಗಲ್ಲುಶಿಕ್ಷೆಯನ್ನು ರದ್ದುಪಡಿಸಿ ಜೀವಾವಧಿ ಶಿಕ್ಷೆ ಕೊಡುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ, ಜೀವದಾನ ಪಡೆದ ನಳಿನಿ, ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈಗ ನಳಿನಿ ಪುತ್ರಿ ಯುನೈಟೆಡ್‌ ಕಿಂಗ್‌ ಡಮ್‌ನಲ್ಲಿ ವೈದ್ಯೆಯಾಗಿದ್ದಾಳೆ.

1991ರ ಮೇ 21ರಂದು ತಮಿಳುನಾಡಿನ ಶ್ರೀಪೆರಂಬುದೂರ್‌ನಲ್ಲಿ ರಾಹುಲ್ ಗಾಂಧಿ ಅವರ ಹತ್ಯೆ ನಡೆದಿತ್ತು. ನೆರೆಯ ಶ್ರೀಲಂಕಾದಲ್ಲಿ ಸಕ್ರಿಯವಾಗಿದ್ದ ಲಿಬರೇಷನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್‌ಟಿಟಿಇ) ಗುಂಪಿನ ಮಹಿಳಾ ಆತ್ಮಾಹುತಿ ಬಾಂಬರ್ ಈ ಕೃತ್ಯ ಎಸಗಿದ್ದಳು. ಮಹಿಳಾ ಆತ್ಮಹತ್ಯಾ ಬಾಂಬರ್‌ ತನ್ನನ್ನು ತಾನು ಸ್ಫೋಟಿಸಿಕೊಳ್ಳುವ ಮೂಲಕ ರಾಜೀವ್‌ ಗಾಂಧಿಯನ್ನು ಹತ್ಯೆಗೈದಿದ್ದರು. ಹತ್ಯೆ ಪ್ರಕರಣದಲ್ಲಿ ಏಳು ಮಂದಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಬಳಿಕ ಅವರ ಶಿಕ್ಷೆಯನ್ನು ಜೀವಾವಧಿಗೆ ಇಳಿಕೆ ಮಾಡಿ ಸುಪ್ರೀಂಕೋರ್ಟ್‌ ಆದೇಶ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...