ರಾಜ್‌ಕೋಟ್‌ ಗೇಮ್‌ ಝೋನ್‌ ಅಗ್ನಿ ಅವಘಡ: ಇಬ್ಬರು ಪೊಲೀಸರು ಸೇರಿ ಐವರು ಅಧಿಕಾರಿಗಳ ಅಮಾನತು

Date:

ಸುಮಾರು 25ಕ್ಕೂ ಅಧಿಕ ಜನರ ಸಾವಿಗೆ ಕಾರಣವಾದ ರಾಜ್‌ಕೋಟ್ ಗೇಮ್‌ ಝೋನ್‌ ಬೆಂಕಿ ಅವಘಡದಲ್ಲಿ ನಿರ್ಲಕ್ಷ್ಯ ತೋರಿದ ಕಾರಣ ತಕ್ಷಣದಿಂದ ಜಾರಿಗೆ ಬರುವಂತೆ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಸೇರಿ ಒಟ್ಟು ಐವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಗುಜರಾತ್ ಸರ್ಕಾರ ಸೋಮವಾರ ಆದೇಶಿಸಿದೆ.

“ಅಗತ್ಯವಾದ ಅನುಮೋದನೆಗಳಿಲ್ಲದೆ ಆ ಗೇಮ್ ಝೋನ್ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಸಂಪೂರ್ಣ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಈ ಪ್ರಕರಣದಲ್ಲಿ ಹೊಣೆಗಾರರು ಎಂದು ಪರಿಗಣಿಸಲಾಗುತ್ತದೆ” ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

“ಗೇಮ್ ಝೋನ್ ರಸ್ತೆ ಮತ್ತು ಕಟ್ಟಡಕ್ಕೆ ಸಂಬಂಧಿಸಿ ಆಯಾ ಇಲಾಖೆಗಳಿಂದ ಅನುಮತಿಯನ್ನು ಪಡೆದುಕೊಂಡಿದೆ. ಅಗ್ನಿಶಾಮಕ ಎನ್‌ಒಸಿ ಪಡೆಯಲು ಅಗ್ನಿಶಾಮಕ ಸುರಕ್ಷತಾ ಸಲಕರಣೆಗಳ ಪುರಾವೆಯನ್ನು ಸಹ ಸಲ್ಲಿಸಿದೆ. ಆದರೆ ಈ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ” ಎಂದು ಭಾನುವಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ರಾಜ್‌ಕೋಟ್ ಪೊಲೀಸ್ ಕಮಿಷನರ್ ರಾಜು ಭಾರ್ಗವ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ಗುಜರಾತ್ | ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಭಾರೀ ಬೆಂಕಿ ಅವಘಡ; 20 ಮಂದಿ ಮೃತ್ಯು

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶನಿವಾರ ಬೆಂಕಿ ಅವಘಡ ಸಂಭವಿಸಿದ ಸ್ಥಳವನ್ನು ಪರಿಶೀಲಿಸಿದರು. ಹಾಗೆಯೇ ಈ ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಮತ್ತು ಶಿಕ್ಷಾರ್ಹ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಇದಾದ ಬೆನ್ನಲ್ಲೇ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್‌ನ ನಗರ ಯೋಜನಾ ವಿಭಾಗದ ಸಹಾಯಕ ಎಂಜಿನಿಯರ್ ಜೈದೀಪ್ ಚೌಧರಿ, ಆರ್‌ಎಂಸಿ ಸಹಾಯಕ ನಗರ ಯೋಜಕ ಗೌತಮ್ ಜೋಷಿ, ರಾಜ್‌ಕೋಟ್ ರಸ್ತೆಗಳು ಮತ್ತು ಕಟ್ಟಡಗಳ ಇಲಾಖೆಯ ಉಪ ಕಾರ್ಯನಿರ್ವಾಹಕ ಎಂಜಿನಿಯರ್ ಎಂಆರ್ ಸುಮಾ, ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ವಿಆರ್ ಪಟೇಲ್ ಮತ್ತು ಎನ್‌ಐ ರಾಥೋಡ್‌ರನ್ನು ಅಮಾನತುಗೊಳಿಸಲಾಗಿದೆ. ಆಯಾ ಇಲಾಖೆಗಳು ಈ ಅಮಾನತು ಆದೇಶವನ್ನು ಹೊರಡಿಸಿದೆ.

ರಾಜ್‌ಕೋಟ್‌ನ ನಾನಾ-ಮಾವಾ ಪ್ರದೇಶದ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಶನಿವಾರ ಸಂಜೆ ಅಗ್ನಿ ಅವಘಡ ಸಂಭವಿಸಿದ್ದು ಮಕ್ಕಳು, ನವವಿವಾಹಿತ ದಂಪತಿಗಳು ಸೇರಿದಂತೆ 25ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರು ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದು, ಗೇಮ್ ಝೋನ್‌ನ ಆರು ಪಾಲುದಾರರು ಮತ್ತು ಇನ್ನೊಬ್ಬ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಗುಜರಾತ್ ಹೈಕೋರ್ಟ್ ಭಾನುವಾರ ಅಗ್ನಿ ದುರಂತವನ್ನು ಸ್ವಯಂಪ್ರೇರಿತವಾಗಿ ಉಲ್ಲೇಖಿಸಿದೆ. ಇದು ಪ್ರಾಥಮಿಕವಾಗಿ “ಮಾನವ ನಿರ್ಮಿತ ದುರಂತ” ಎಂದು ಬಣ್ಣಿಸಿದೆ.


ಈ ಅಗ್ನಿ ಅವಘಡದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡವನ್ನು ರಚಿಸಿದ್ದು ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಕೇಂದ್ರ ಸರ್ಕಾರವು ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಷೇರು ಮಾರುಕಟ್ಟೆಯ ಅಕ್ರಮದ ತನಿಖೆಗಾಗಿ ಟಿಎಂಸಿ ನಿಯೋಗದಿಂದ ಸೆಬಿ ಅಧಿಕಾರಿಗಳ ಭೇಟಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದರ ನಿಯೋಗ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ(ಸೆಬಿ)...

ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತ: ಬಕ್ರೀದ್ ಸಂಭ್ರಮಾಚರಣೆ ಮರೆತು ಪ್ರಯಾಣಿಕರ ರಕ್ಷಣೆಗಿಳಿದ ಮುಸ್ಲಿಮರು

ಪಶ್ಚಿಮ ಬಂಗಾಳದ ಐಕಾನಿಕ್ ಗಿರಿಧಾಮ ಡಾರ್ಜಿಲಿಂಗ್ ಬಳಿ ನಡೆದ ಕಾಂಚನಜುಂಗಾ ಎಕ್ಸ್‌ಪ್ರೆಸ್...

ಪಿಎಂ ಕಿಸಾನ್ | ರೈತರಿಗೆ ನೀಡುವ ‘ಪ್ರಸಾದ’ವಲ್ಲ ಕಾನೂನುಬದ್ಧ ಹಕ್ಕು: ಕಾಂಗ್ರೆಸ್

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆ (ಪಿಎಂ ಕಿಸಾನ್) 17ನೇ ಕಂತಿನ...

ಫಲಿತಾಂಶದ ನಂತರ ಸರ್ಕಾರ ಉಳಿಸಲು ಹೆಣಗಾಡುತ್ತಿರುವ ಮೋದಿ : ರಾಹುಲ್ ಗಾಂಧಿ

ಲೋಕಸಭೆ ಚುನಾವಣೆಯ ನಂತರ ನರೇಂದ್ರ ಮೋದಿ 3.0 ಸರ್ಕಾರ ಬಹುಮತ ಪಡೆಯಲು...