ಪ್ರಧಾನಿ ಭಾಗವಹಿಸದಿದ್ದರೆ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಬೇಡಿ: ರಾಜಕೀಯ ಪಕ್ಷಗಳಿಗೆ ಕಪಿಲ್ ಸಿಬಲ್ ಮನವಿ

Date:

ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟಿದೆ ಎಂಬ ಘೋಷಣೆಯ ಬೆನ್ನಿಗೇ, ಸರ್ವಪಕ್ಷ ಸಭೆಯನ್ನು ಕರೆಯಬೇಕು ಎಂದು ಆಗ್ರಹಿಸಿರುವ ರಾಜ್ಯಸಭಾ ಸಂಸದ ಕಪಿಲ್ ಸಿಬಲ್, ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ ಎಂದು ಸರ್ಕಾರ ಭರವಸೆ ನೀಡುವವರೆಗೂ ಯಾವುದೇ ರಾಜಕೀಯ ಪಕ್ಷಗಳು ಆ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಳ್ಳಬಾರದು ಎಂದೂ ಮನವಿ ಮಾಡಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರಧಾನಿಯು ತಾನು ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುತ್ತೇನೆ ಎಂದು ಭರವಸೆ ನೀಡುವವರೆಗೂ ಯಾವ ರಾಜಕೀಯ ಪಕ್ಷಗಳು ಆ ಭಾಗವಹಿಸಬಾರದು ಎಂದು ನಾನು ಮನವಿ ಮಾಡುತ್ತೇನೆ. ಒಂದು ವೇಳೆ ಈಗೇನಾದರೂ ಡಾ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿರುತ್ತಿದ್ದರೆ, ಅವರು ಇಂತಹ ಸಭೆಗೆ ಹಾಜರಾಗಿರುತ್ತಿದ್ದರು ಹಾಗೂ ವಿಶೇಷ ಸಂಸತ್ ಅಧಿವೇಶನ ಕರೆದಿರುತ್ತಿದ್ದರು ಎಂಬ ಬಗ್ಗೆ ನನಗೆ ವಿಶ್ವಾಸವಿದೆ” ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಭಾರತ ಮತ್ತು ಪಾಕಿಸ್ತಾನದ ನಡುವಿನ ಈ ಚಾರಿತ್ರಿಕ ಒಪ್ಪಂದದಲ್ಲಿ ಅಮೆರಿಕ ಪ್ರಮುಖ ಪಾತ್ರ ವಹಿಸಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಇತ್ತೀಚಿನ ಪೋಸ್ಟ್ ಹಾಗೂ 48 ಗಂಟೆಗಳಿಂದ ಮಾತುಕತೆ ಪ್ರಗತಿಯಲ್ಲಿದೆ ಹಾಗೂ ತಟಸ್ಥ ಮಾತುಕತೆಯ ಸ್ಥಳದ ಕುರಿತು ಚರ್ಚಿಸಲಾಯಿತು ಎಂದು ಅಮೆರಿಕ ರಾಜ್ಯ ಕಾರ್ಯದರ್ಶಿ ಮಾರ್ಕೊ ರುಬಿಯೊ ನೀಡಿರುವ ಹೇಳಿಕೆಯನ್ನೂ ಅವರು ಈ ವೇಳೆ ಉಲ್ಲೇಖಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಮ್ಲಾ ಒಪ್ಪಂದದತ್ತ ಕಣ್ಣು ಹಾಯಿಸಬೇಕಿದೆ ಭಾರತ-ಪಾಕ್

“ಯಾಕೆ, ಹೇಗೆ ಮತ್ತು ಯಾವ ಸನ್ನಿವೇಶದಲ್ಲಿ ಈ ಒಪ್ಪಂದಕ್ಕೆ ತಲುಪಲಾಯಿತು ಎಂಬ ಯಾವುದರ ಕುರಿತೂ ನಮಗೆ ವಿವರಣೆ ನೀಡಿಲ್ಲ. ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಕೂಡಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್‌ರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಮಾತುಕತೆಯ ಬಗ್ಗೆ ತಿಳಿದುಕೊಳ್ಳಲು ದೇಶದ ಜನರು ಕಾಯುತ್ತಿದ್ದಾರೆ” ಎಂದು ಅವರು ಹೇಳಿದರು.

“ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಕೂಡಾ ಭಾಗವಹಿಸಲಿದ್ದಾರೆ ಎಂದು ಸರ್ಕಾರ ಭರವಸೆ ನೀಡುವವರೆಗೂ ಯಾವ ರಾಜಕೀಯ ಪಕ್ಷಗಳೂ ಆ ಸಭೆಯಲ್ಲಿ ಭಾಗವಹಿಸಬಾರದು ಎಂದು ನಾನು ಮನವಿ ಮಾಡಲು ಬಯಸುತ್ತೇನೆ ಎಂದೂ ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...