ರಾಮಮಂದಿರ ಲೂಟಿ ಪ್ರಕರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿಗಳ ವಜಾಗೊಳಿಸಿದ ಸುಪ್ರೀಂ ಕೋರ್ಟ್

Date:

ಅಯೋಧ್ಯೆಯ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಕಾಣಿಕೆ ಕಳವು ಮತ್ತು ಹಣಕಾಸು ಅಕ್ರಮಗಳ ಕುರಿತು ಸಿಬಿಐ ಅಥವಾ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಉತ್ತರ ಪ್ರದೇಶ ಸರ್ಕಾರದ ವಿಶೇಷ ತನಿಖಾ ತಂಡ (SIT) ಈ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿ ಈಗಾಗಲೇ ಸಂಬಂಧಪಟ್ಟ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿರುವುದನ್ನು ಪರಿಗಣಿಸಿ ನ್ಯಾಯಪೀಠವು ಈ ನಿರ್ಧಾರ ತಳೆದಿದೆ.

- Advertisement -

ಸಿಬಿಐ ತನಿಖೆಗಾಗಿ ಕೋರಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರವು ಸ್ಥಿತಿ ವರದಿ ಸಲ್ಲಿಕೆ ಮಾಡಿದ್ದು, ತನಿಖೆ ಪೂರ್ಣಗೊಂಡು ಚಾರ್ಜ್‌ಶೀಟ್ ಸಲ್ಲಿಕೆಯಾಗಿರುವುದರಿಂದ ಈ ಅರ್ಜಿಯನ್ನು ವಜಾ ಮಾಡಲಾಗುತ್ತಿದೆ ಎಂದು ಪೀಠ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗೆಲ್ಲಬಹುದಾಗಿದ್ದ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಲ್ಟಿ ಹೊಡೆದದ್ದು...

ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆದ ನಾಲ್ಕು ಎಮ್ಮೆಲ್ಸಿ ಸ್ಥಾನಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಒಂದೇ ಒಂದು ಸೀಟನ್ನೂ ಪಡೆಯಲಾಗದೆ ಮುಗ್ಗರಿಸಿರುವುದು ರಾಜಕೀಯ ಪಡಸಾಲೆಯಲ್ಲಿ ನಾನಾ ನಮೂನೆಯ ವ್ಯಾಖ್ಯಾನ-ವಿಶ್ಲೇಷಣೆ ಹುಟ್ಟುಹಾಕಿದೆ....

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ಕಾನೂನಿನ ಪ್ರಕಾರ ಮುಂದಿನ ಕ್ರಮಗಳನ್ನು ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದುವರಿಸಲಿದೆ. ಇದೇ ವೇಳೆ, ಈ ಪ್ರಕರಣದಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಗಿರುವುದರಿಂದ, ಅಪರಾಧದ ಸಂತ್ರಸ್ತರಿಗೆ ನೀಡಲಾಗುವ ಕಾನೂನುಬದ್ಧ ಅವಕಾಶದಂತೆಯೇ ಅರ್ಜಿದಾರರಿಗೂ ವಿಚಾರಣೆ ವೇಳೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ನೆರವಾಗಲು ಸುಪ್ರೀಂ ಕೋರ್ಟ್ ಸ್ವಾತಂತ್ರ್ಯ ನೀಡಿದೆ.

ವಿಚಾರಣೆ ವೇಳೆ, ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಮುಖ್ಯವಾಗಿ ದೇಣಿಗೆ ಹಣವನ್ನು ಎಣಿಕೆ ಮಾಡುವ ಹಂತದಲ್ಲೇ ಈ ಕಳವು ನಡೆದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ” ಎಂದು ವಿವರಿಸಿದ್ದಾರೆ.

ಎಣಿಕೆ ಕಾರ್ಯದಲ್ಲಿ ತೊಡಗಿದ್ದ ಸಿಬ್ಬಂದಿಯೇ ಹಣವನ್ನು ಕದ್ದು ಬೇರೆಡೆ ಹೂಡಿಕೆ ಮಾಡಿದ್ದಾರೆ. ಉದಾಹರಣೆಗೆ, ಆಸ್ತಿ ಖರೀದಿ ಮತ್ತು ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.

ಸಾಲಿಸಿಟರ್ ಜನರಲ್ ಅವರು ನೀಡಿರುವ ಮಾಹಿತಿಯಂತೆ, ಆಸ್ತಿ ನೋಂದಣಿ ಪತ್ರದಲ್ಲಿ 15 ಲಕ್ಷ ರೂಪಾಯಿ ಎಂದು ತೋರಿಸಿ, ಉಳಿದ 35 ಲಕ್ಷ ರೂಪಾಯಿ ನಗದನ್ನು ಅಕ್ರಮವಾಗಿ ಕದ್ದ ಹಣದಿಂದ ನೀಡಲಾಗಿದೆ. ಆದರೆ, ದೇವಸ್ಥಾನಕ್ಕೆ ಬಂದಿದ್ದ ಎಲ್ಲ ಆಭರಣಗಳು ಮತ್ತು ಕಾಣಿಕೆ ವಸ್ತುಗಳು ಸುಸ್ಥಿತಿಯಲ್ಲಿವೆ ಮತ್ತು ಸುರಕ್ಷಿತವಾಗಿವೆ ಎಂದು ಆಡಿಟ್ ವರದಿಯನ್ನು ಉಲ್ಲೇಖಿಸಿ ವಿವರಿಸಿದ್ದಾರೆ.

ದೇವಸ್ಥಾನದ ಸಂಕೀರ್ಣದಲ್ಲಿರುವ ಯಾತ್ರಿಕರ ಸೌಲಭ್ಯ ಕೇಂದ್ರ (PFC) ಕಟ್ಟಡದ ಎಣಿಕೆ ಕೊಠಡಿಯಿಂದ ಸುಮಾರು 105 ಬಾರಿ ಹಣವನ್ನು ಅನಧಿಕೃತವಾಗಿ ತೆಗೆದುಕೊಂಡು ಹೋಗಿರುವುದು ಎಸ್‌ಐಟಿ ತನಿಖೆಯಲ್ಲಿ ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಒಟ್ಟು 8 ಜನರನ್ನು ಆರೋಪಿಗಳೆಂದು ಗುರುತಿಸಿದ್ದು, ಅವರ ಬ್ಯಾಂಕ್ ಖಾತೆಗಳು, ಹಣಕಾಸು ವಹಿವಾಟುಗಳು ಮತ್ತು ಆಸ್ತಿಪಾಸ್ತಿಗಳನ್ನು ಪರಿಶೀಲಿಸಿದೆ. ಅಯೋಧ್ಯೆಯ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 23 ರಂದೇ ಈ ಎಲ್ಲ 8 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಅಪಪ್ರಚಾರದ ಬಲೂನ್ ಪಂಕ್ಚರ್; ದೆಹಲಿ ಮಾರುಕಟ್ಟೆಗಳಲ್ಲಿ ಖರೀದಿ ಜೋರು ಎಂದ ಕಾಂಗ್ರೆಸ್

ಇಂಡಿಯಾ ಒಕ್ಕೂಟದ ಬೃಹತ್ ರ್‍ಯಾಲಿಯಿಂದಾಗಿ ದೆಹಲಿಯ ಮಾರುಕಟ್ಟೆಗಳಲ್ಲಿ ವ್ಯಾಪಾರಕ್ಕೆ ತೊಂದರೆ ಉಂಟಾಗಲಿದೆ...

ಅತ್ಯಂತ ಕಳಪೆ ಮಟ್ಟಕ್ಕೆ ಕುಸಿದ ಗಾಳಿಯ ಗುಣಮಟ್ಟ; ದೆಹಲಿಯಲ್ಲಿ ಉಸಿರಾಟಕ್ಕೂ ಸಂಕಷ್ಟ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚಾಗಿದ್ದು, ಸೋಮವಾರ (ನ.2)...

ರಾಜ್ಯಕ್ಕೆ ಪ್ರತ್ಯೇಕ ಧ್ವಜ, ಶಾಲೆಗಳಲ್ಲಿ ತಮಿಳು ಕಡ್ಡಾಯ: ಸಚಿವ ಆಧವ್ ಅರ್ಜುನ ಹೇಳಿಕೆಗೆ ಭಾರಿ ವಿರೋಧ

ತಮಿಳುನಾಡಿಗೆ ಪ್ರತ್ಯೇಕ ರಾಜ್ಯ ಧ್ವಜವನ್ನು ಪರಿಚಯಿಸಲಾಗುವುದು ಹಾಗೂ ಶಾಲಾ ದಿನಗಳಿಂದಲೇ ಮಾತೃಭಾಷೆ...

1,322 ಕೋಟಿ ರೂ. ವಂಚನೆ: ಉದ್ಯಮಿ ಸುಭಾಷ್ ಚಂದ್ರ ವಿರುದ್ಧ ಇ.ಡಿ ಪ್ರಕರಣ ದಾಖಲು

ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್‌ಗೆ (LICHFL) 1,322 ಕೋಟಿ ರೂ. ನಷ್ಟ...