ರಾಮಮಂದಿರ ಲೂಟಿ | ಕಳ್ಳರೆಲ್ಲರೂ ಬಿಜೆಪಿಯಲ್ಲೇ ಇದ್ದಾರೆ

Date:

ಅಯೋಧ್ಯೆಯ ರಾಮಮಂದಿರದಲ್ಲಿ ಭಕ್ತರು ನೀಡಿದ ದೇಣಿಗೆ ಮತ್ತು ಕಾಣಿಕೆಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ‘ಎಲ್ಲ ಚಂದಾ ಚೋರರೂ (ಕಳ್ಳರು) ಬಿಜೆಪಿಯಲ್ಲೇ ಇದ್ದಾರೆ’ ಎಂದು ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭೆ ಸಂಸದ ಪ್ರಮೋದ್ ತಿವಾರಿ ಆರೋಪಿಸಿದ್ದಾರೆ.

- Advertisement -

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಮೋದ್ ತಿವಾರಿ, “ಬಿಜೆಪಿಯಲ್ಲಿರುವ ಪ್ರತಿಯೊಬ್ಬರೂ ‘ಚಂದಾ ಚೋರರು’ ಅಲ್ಲದಿರಬಹುದು. ಆದರೆ, ಎಲ್ಲ ‘ಚಂದಾ ಚೋರರು’ ಬಿಜೆಪಿಯಲ್ಲೇ ಇದ್ದಾರೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ರಾಮ ಜನ್ಮಭೂಮಿ ಚಳವಳಿಯನ್ನು ಹತ್ತಿರದಿಂದ ಕಂಡಿರುವುದಾಗಿ ತಿಳಿಸಿದ ತಿವಾರಿ, “ಬಿಜೆಪಿ ಎಂದಿಗೂ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದನ್ನು ಬಯಸಿರಲಿಲ್ಲ. ಕೇವಲ ಆ ವಿಷಯವನ್ನು ಜೀವಂತವಾಗಿಡಲು ಬಯಸಿತ್ತು. ಮಂದಿರ ನಿರ್ಮಾಣವು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಆಧಾರದ ಮೇಲೆ ನಡೆದಿದೆಯೇ ಹೊರತು ಬಿಜೆಪಿ ಸರ್ಕಾರದಿಂದ ಅಲ್ಲ” ಎಂದಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅಪೂರ್ಣ ಮಂದಿರದ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದರು. ಈ ಪ್ರಕ್ರಿಯೆಯಿಂದ ಶಂಕರಾಚಾರ್ಯರನ್ನು ಹೊರಗಿಡಲಾಗಿತ್ತು. ಟ್ರಸ್ಟ್‌ನ ಎಲ್ಲ ಸದಸ್ಯರನ್ನು ಪ್ರಧಾನಿಯವರ ಇಷ್ಟದಂತೆಯೇ ನೇಮಕ ಮಾಡಲಾಗಿರುವುದರಿಂದ, ಅಲ್ಲಿ ನಡೆದಿರುವ ಅಕ್ರಮ ಮತ್ತು ದೇಣಿಗೆ ಕಳವಿನ ಹೊಣೆಯಿಂದ ಪ್ರಧಾನಿ ಮೋದಿ ಅವರು ನುಣುಚಿಕೊಳ್ಳಲು ಸಾಧ್ಯವಿಲ್ಲ” ಎಂದು ಪ್ರತಿಪಾದಿಸಿದ್ದಾರೆ.

“ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಅವಧಿಯಲ್ಲಿ ಕೋಟ್ಯಂತರ ರೂಪಾಯಿ ದೇಣಿಗೆ ಹಣದ ದುರುಪಯೋಗವಾಗಿದೆ. ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ಎಸ್‌ಐಟಿ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ...

ಸೌದಿ ಅರಾಮ್ಕೋ ತೈಲ ಘಟಕ, ವಾಯುನೆಲೆ ಮೇಲೆ ಕ್ಷಿಪಣಿ ದಾಳಿ: ಹೌತಿಗಳ ಪ್ರತಿಪಾದನೆ

ಸೌದಿ ಅರೇಬಿಯಾದ ಪ್ರಮುಖ ತೈಲ ಸಂಸ್ಥೆ ಸೌದಿ ಅರಾಮ್ಕೋ (Saudi Aramco)...

ಛತ್ತೀಸ್‌ಗಢ | 29 ಜನರ ಹತ್ಯೆಗೆ ಕಾರಣವಾದ 2013ರ ದಾಳಿ; 13 ವರ್ಷಗಳ ನಂತರ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಘೋಷಣೆ!

ದೇಶವನ್ನೇ ಬೆಚ್ಚಿಬೀಳಿಸಿದ್ದ ಛತ್ತೀಸ್‌ಗಢದ 2013ರ ಝೀರಂ ಕಣಿವೆ ನಕ್ಸಲ್‌ ದಾಳಿ ಪ್ರಕರಣಕ್ಕೆ...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...