ರಾಮಮಂದಿರ ದೇಣಿಗೆ ಲೂಟಿ ಪ್ರಕರಣ: ನ್ಯಾಯಾಲಯ ವಿಚಾರಣೆಗೆ ಸುಪ್ರೀಂ ಅಸ್ತು; ಕಳುವಾಗಿದ್ದು ಬರೀ 2.7 ಕೋಟಿ ಎಂದ SIT

Date:

ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ್ದ ದೇಣಿಗೆ ಹಣದಲ್ಲಿ ಸುಮಾರು 2.7 ಕೋಟಿ ರೂ. ದುರುಪಯೋಗವಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ವಿರುದ್ಧ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

- Advertisement -

ದೇಣಿಗೆ ಹಣದ ಅವ್ಯವಹಾರದ ಕುರಿತು ವಿಶೇಷ ತನಿಖಾ ತಂಡ (SIT) ಸಲ್ಲಿಸಿರುವ ಆರೋಪಪಟ್ಟಿಯ ಆಧಾರದ ಮೇಲೆ ವಿಚಾರಣೆ ಮುಂದುವರಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಅಲ್ಲದೆ, ಪ್ರಕರಣದ ತನಿಖೆಗೆ ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರರಿಗೆ ಸಂತ್ರಸ್ತರ ಸ್ಥಾನಮಾನ ನೀಡಿ, ವಿಚಾರಣೆಯ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ ಮತ್ತು ನ್ಯಾಯಾಲಯಕ್ಕೆ ನೆರವಾಗಲು ಅವಕಾಶ ಕಲ್ಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾಲು, ಮೊಸರು, ದಿನಸಿ ದರ ಏರಿಕೆ ಬೆನ್ನಲ್ಲೇ ಬಸ್...

ಹಾಲು, ಮೊಸರು, ದಿನಸಿ ವಸ್ತುಗಳ ದರ ಹೆಚ್ಚಳದ ಹೊರೆಯ ನಡುವೆ, ಬಸ್ ಪ್ರಯಾಣವೂ ದುಬಾರಿಯಾದರೆ ಬದುಕು ಮತ್ತಷ್ಟು ದುಸ್ತರವಾಗಲಿದೆ. ಕರ್ನಾಟಕದಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಸಾರ್ವಜನಿಕರಲ್ಲಿ ಅಸಮಾಧಾನದ ಹೊಗೆಯಾಡಿದ್ದು,...

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.

Advertisements

ಎಸ್‌ಐಟಿ ಸಲ್ಲಿಸಿರುವ ವರದಿಯ ಪ್ರಕಾರ, ಆರೋಪಿಗಳು ಸುಮಾರು 2.7 ಕೋಟಿ ರೂ. ದೇಣಿಗೆ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಶಂಕೆಯಿದೆ. ಈ ಸಂಬಂಧ ಬ್ಯಾಂಕ್ ಖಾತೆಗಳಲ್ಲಿನ ಹಣಕಾಸು ವಹಿವಾಟುಗಳು, ಆಸ್ತಿ ಖರೀದಿ, ಕಟ್ಟಡ ನಿರ್ಮಾಣ ವೆಚ್ಚ, ವಾಹನಗಳು, ಚಿನ್ನಾಭರಣ ಹಾಗೂ ಇತರ ಆಸ್ತಿಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಲಾಗಿದೆ.

ಸೋಮವಾರ ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ತನಿಖೆಯ ವಿವರಗಳನ್ನು ನ್ಯಾಯಪೀಠಕ್ಕೆ ವಿವರಿಸಿದರು. ಆರೋಪಿಗಳ ಬ್ಯಾಂಕ್ ಖಾತೆಗಳು, ಸ್ಥಿರಾಸ್ತಿ ಖರೀದಿ ದಾಖಲೆಗಳು ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಸೆಪ್ಟೆಂಬರ್ 23ರಂದು ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಪ್ರಕರಣದ ವಿಚಾರಣೆಯನ್ನು ಕಾನೂನಿನ ಪ್ರಕಾರ ಮುಂದುವರಿಸುವಂತೆ ಸುಪ್ರೀಂ ಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ಇದೇ ವೇಳೆ, 2019ರ ನವೆಂಬರ್ 9ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನಂತೆ ರಾಮಮಂದಿರ ನಿರ್ಮಾಣಕ್ಕೆ ಹಂಚಿಕೆ ಮಾಡಲಾದ ಭೂಮಿಯ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ಸಮೀಕ್ಷೆ ನಡೆಸುವಂತೆ ಅರ್ಜಿದಾರರೊಬ್ಬರು ಮನವಿ ಮಾಡಿದ್ದರು.

ಪ್ರಸ್ತುತ ರಾಮಜನ್ಮಭೂಮಿ ಮಂದಿರ ಸಂಕೀರ್ಣ ಇರುವ ಸ್ಥಳವು ಸುಪ್ರೀಂ ಕೋರ್ಟ್ ಹಂಚಿಕೆ ಮಾಡಿದ್ದ ಭೂಮಿಯಲ್ಲೇ ಇದೆಯೇ ಎಂಬುದನ್ನು ಪರಿಶೀಲಿಸಲು ಕಂದಾಯ ಮತ್ತು ಸಂಬಂಧಿತ ಅಧಿಕಾರಿಗಳ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಮಂಡಿಸುವಂತೆ ನಿರ್ದೇಶನ ನೀಡಬೇಕು ಎಂದೂ ಕೋರಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ತುಷಾರ್ ಮೆಹ್ತಾ, ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ನೀಡಿರುವ ತೀರ್ಪನ್ನು ಪರೋಕ್ಷವಾಗಿ ಮರುಪರಿಶೀಲಿಸುವ ಪ್ರಯತ್ನಕ್ಕೆ ಅವಕಾಶವಿಲ್ಲ ಎಂದು ವಾದಿಸಿದರು.

ಇದನ್ನೂ ಓದಿ: ರಾಮಮಂದಿರ ದೇಣಿಗೆ ಲೂಟಿ; ಹಿಂದೂಗಳಿಗೆ ‘ದ್ರೋಹ’ ಬಗೆದ ಬಿಜೆಪಿ: ಉದ್ಧವ್ ಠಾಕ್ರೆ

ಭೂಮಿಯ ಗಡಿ ಗುರುತಿಸುವಿಕೆ ಅಥವಾ ಹಂಚಿಕೆಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದರೆ ಅರ್ಜಿದಾರರು ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಬಹುದು ಎಂದು ಸುಪ್ರೀಂ ಕೋರ್ಟ್ ತಿಳಿಸಿತು. ರಾಮಮಂದಿರ ದೇಣಿಗೆ ಹಣ ದುರುಪಯೋಗ ಪ್ರಕರಣದಲ್ಲಿ ಎಂಟು ಮಂದಿ ವಿರುದ್ಧ ವಿಚಾರಣೆಗೆ ಹಸಿರು ನಿಶಾನೆ ತೋರಿಸಿರುವ ಸುಪ್ರೀಂ ಕೋರ್ಟ್, ಅರ್ಜಿದಾರರಿಗೂ ವಿಚಾರಣೆಯಲ್ಲಿ ಭಾಗವಹಿಸಲು ಅವಕಾಶ ನೀಡಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಮಾನ್ ಕರಾವಳಿಯಲ್ಲಿ ಭಾರತದ ಹಡಗಿನ ಮೇಲೆ ವೈಮಾನಿಕ ದಾಳಿ: ನಾವಿಕ ಬಲಿ, 13 ಮಂದಿ ರಕ್ಷಣೆ!

ಒಮಾನ್ ಕರಾವಳಿಯ ಸಮುದ್ರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಭಾರತದ ಸರಕು ದೋಣಿಯ ಮೇಲೆ...

ಮೊಸರಿನ ಬೆಲೆ ಕಡಿಮೆ ಮಾಡಲು ಸೂಚನೆ: ಸಿಎಂ ಡಿ ಕೆ ಶಿವಕುಮಾರ್

"ಕೆಎಂಎಫ್ ವತಿಯಿಂದ ಅಭಿನಂದನೆ ಸಲ್ಲಿಸಲು ಬಂದಿದ್ದ ಪದಾಧಿಕಾರಿಗಳಿಗೆ ಮೊಸರಿನ ಬೆಲೆ ಕಡಿಮೆ...

ದೆಹಲಿ ಪೊಲೀಸ್ ಪಡೆಯಲ್ಲಿ ತಾರಕಕ್ಕೇರಿದ ಅಸಮಾಧಾನ; ಪ್ರತಿಭಟಿಸಿದ್ದಕ್ಕೆ ಅಧಿಕಾರಿ ಅಮಾನತು!

ದೆಹಲಿ ಪೊಲೀಸ್ ಇಲಾಖೆಯಲ್ಲಿ ಇತ್ತೀಚೆಗೆ ನಡೆದ ಘಟನಾವಳಿಗಳು ಈಗ ಭಾರೀ ಸಂಚಲನ...