ರಾಮಮಂದಿರ ದೇಣಿಗೆ ದುರ್ಬಳಕೆ ಪ್ರಕರಣ: ಅಧ್ಯಕ್ಷ ಚಂಪತ್ ರಾಯ್‌ ರಾಜೀನಾಮೆ

Date:

ಅಯೋಧ್ಯೆಯ ರಾಮಮಂದಿರ ದೇಣಿಗೆ ದುರ್ಬಳಕೆ ಪ್ರಕರಣವು ರಾಷ್ಟ್ರವ್ಯಾಪಿ ಭಾರಿ ಸಂಚಲನ ಮೂಡಿಸಿದ ಬೆನ್ನಲ್ಲೇ, ‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್‌ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರು ನೈತಿಕ ಹೊಣೆಹೊತ್ತು ಶುಕ್ರವಾರ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭಕ್ತರು ನೀಡಿದ್ದ ದೇಣಿಗೆಯ ನಿರ್ವಹಣೆ ಮತ್ತು ಉಸ್ತುವಾರಿಯಲ್ಲಿ ಗಂಭೀರ ಲೋಪಗಳಾಗಿವೆ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಿದ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ.

- Advertisement -

ವಿಶೇಷ ತನಿಖಾ ತಂಡದ ಶಿಫಾರಸಿನ ಮೇರೆಗೆ ಪ್ರಕರಣದ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ಮಾಜಿ ಟ್ರಸ್ಟಿ ಕಾಮೇಶ್ವರ ಚೌಪಾಲ್ ಅವರ ನಿಧನದ ನಂತರ, 2025ರ ಸೆಪ್ಟೆಂಬರ್‌ನಲ್ಲಿ ಟ್ರಸ್ಟ್ ಸೇರಿದ್ದ ಸದಸ್ಯ ಕೃಷ್ಣ ಮೋಹನ್ ಅವರು ಈ ದೂರು ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ, ಪ್ರಕರಣದಲ್ಲಿ ಹೆಸರಿಸಲಾದ ಎಲ್ಲಾ ಎಂಟು ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರು ಗುರುವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...

ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಲವಕುಶ್ ಮಿಶ್ರಾ, ಮನೀಶ್ ಕುಮಾರ್ ಯಾದವ್, ಕರುಣೇಶ್ ಪಾಂಡೆ, ರಮಾಶಂಕರ್ ಮಿಶ್ರಾ, ಸುಭಾಷ್ ಶ್ರೀವಾಸ್ತವ ಮತ್ತು ರಾಮ್ ಶಂಕರ್ ಯಾದವ್ ಅಲಿಯಾಸ್ ಟಿನ್ನು ಬಂಧಿತ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಕಳ್ಳತನ, ನಂಬಿಕೆ ದ್ರೋಹ, ಕದ್ದ ಮಾಲು ಬಚ್ಚಿಡುವುದು ಹಾಗೂ ಕ್ರಿಮಿನಲ್ ಪಿತೂರಿ ಆರೋಪಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ಜಗತ್ತೇ ಸಂಭ್ರಮಿಸುವ ಫಿಫಾ ವಿಶ್ವಕಪ್: ಭಾರತದ ತಂಡ ಯಾಕೆ ಆಡುತ್ತಿಲ್ಲ?

ದೇಣಿಗೆ ನಿರ್ವಹಣೆಯಲ್ಲಿ ಅಕ್ರಮಗಳಾಗಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಜೂನ್ 13 ರಂದು ಉತ್ತರ ಪ್ರದೇಶ ಸರ್ಕಾರವು ತ್ರಿ-ಸದಸ್ಯ ಎಸ್‌ಐಟಿ ರಚಿಸಿತ್ತು. ಸಿಬ್ಬಂದಿಯ ಹಿನ್ನೆಲೆ ಪರಿಶೀಲನೆ, ಸಿಸಿಟಿವಿ ಕಣ್ಗಾವಲು, ದೇಣಿಗೆ ಎಣಿಕೆ ಪ್ರಕ್ರಿಯೆ ಮತ್ತು ದೇಣಿಗೆಯನ್ನು ಬ್ಯಾಂಕಿಗೆ ಜಮಾ ಮಾಡುವ ಹಂತಗಳಲ್ಲಿ ಭಾರಿ ಲೋಪಗಳಾಗಿವೆ ಎಂದು ಎಸ್‌ಐಟಿ ಪತ್ತೆಹಚ್ಚಿದೆ. ಹೊರಗುತ್ತಿಗೆ ಸಿಬ್ಬಂದಿಯನ್ನು ಎಣಿಕೆ ಕಾರ್ಯಕ್ಕೆ ಬಳಸಿಕೊಂಡಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಲ್ಲದೆ, ಭಕ್ತರು ನೀಡಿದ್ದ ಚಿನ್ನ, ಬೆಳ್ಳಿ ಮತ್ತು ಆಭರಣಗಳ ದಾಸ್ತಾನು ದಾಖಲಾತಿಗಳಲ್ಲೂ ವ್ಯತ್ಯಾಸಗಳಾಗಿರುವುದನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಕೇವಲ ರಾಜೀನಾಮೆಯಿಂದ ಈ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದ ಬಿಜೆಪಿ ಕಾರ್ಯಕರ್ತ ಡಾ. ರಜನೀಶ್ ಸಿಂಗ್ ಹೇಳಿದ್ದಾರೆ. ರಾಜೀನಾಮೆ ನೀಡಿದವರ ಪಾತ್ರ ಮತ್ತು ಅವರ ಆಸ್ತಿಯ ಬಗ್ಗೆಯೂ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ. ದೇಣಿಗೆಯಲ್ಲಿ 7 ರಿಂದ 7.5 ಕೋಟಿ ರೂಪಾಯಿಗಳಷ್ಟು ದುರ್ಬಳಕೆಯಾಗಿದೆ ಎಂದು ಈ ಹಿಂದೆ ಆರೋಪಿಸಿದ್ದ ಅವರು, ಈ ಬಗ್ಗೆ ಸಿಬಿಐ ಅಥವಾ ಇಡಿ ತನಿಖೆಗೆ ಒತ್ತಾಯಿಸಿದ್ದರು. ಜೂನ್ 12 ರಂದು ಪ್ರಧಾನಿಗೆ ಪತ್ರ ಬರೆದು ಟ್ರಸ್ಟ್‌ನ ಆದಾಯ, ವೆಚ್ಚ, ಬ್ಯಾಂಕ್ ಖಾತೆಗಳು ಮತ್ತು ಆಸ್ತಿಯ ದಾಖಲೆಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಅವರು ಮನವಿ ಮಾಡಿದ್ದರು.

ಈ ವಿಚಾರವು ಇದೀಗ ರಾಜಕೀಯ ಸ್ವರೂಪವನ್ನೂ ಪಡೆದುಕೊಂಡಿದ್ದು, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ. ಕೇವಲ ಕೆಳಹಂತದ ಸಿಬ್ಬಂದಿ ಮಾತ್ರ ಶಿಕ್ಷೆ ಅನುಭವಿಸುತ್ತಾರೆಯೇ ಅಥವಾ ಹಿರಿಯ ಅಧಿಕಾರಿಗಳೂ ಹೊಣೆಗಾರರಾಗುತ್ತಾರೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ಇದರ ನಡುವೆ ರಾಮಮಂದಿರ ಹೋರಾಟದ ಪ್ರಮುಖ ನಾಯಕರು ಸಹ ಪ್ರಕರಣದ ಪಾರದರ್ಶಕ ತನಿಖೆಗೆ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಗರಹೊಳೆ: ಜೇನುಕುರುಬ ಕುಟುಂಬಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ; ಸರ್ಕಾರದ ಕ್ರಮಕ್ಕೆ ಆದಿವಾಸಿಗಳ ಆಕ್ರೋಶ

ಕೊಡಗು ಮತ್ತು ಮೈಸೂರು ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ‘ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ’ದಲ್ಲಿ...

ಹಾವೇರಿ | ನ.14ರಂದು ಜಿಲ್ಲಾ ಮಟ್ಟದ ಯುವ ಸಂಸತ್ತು ಅಧಿವೇಶನ

ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...

ಕರ್ನಾಟಕದ ಜೈನ ಪರಂಪರೆಗೆ ಹಾವೇರಿಯ ಕೊಡುಗೆ ಅಪಾರ: ಡಾ. ಶಿವಯೋಗಿ ಆರ್ ಕೋರಿಶೆಟ್ಟರ್‌

ಕರ್ನಾಟಕದಲ್ಲಿ ಪ್ರತಿ ಐದು ಗ್ರಾಮಗಳಿಗೆ ಒಂದು ಜೈನಧರ್ಮಕ್ಕೆ ಸಂಬಂಧಿದ ಕುರುಹುಗಳು ದೊರೆಯುತ್ತವೆ....

ಸೌದಿ ಅರೇಬಿಯಾ: ವಿವಾಹೇತರ ಗರ್ಭಧಾರಣೆಗೆ ಕೀನ್ಯಾ ಮಹಿಳೆಗೆ 100 ಛಡಿಯೇಟಿನ ಶಿಕ್ಷೆ

ಸೌದಿ ಅರೇಬಿಯಾದಲ್ಲಿ ವಿವಾಹೇತರ ಸಂಬಂಧದಿಂದ ಮಗುವಿಗೆ ಜನ್ಮ ನೀಡಿದ ಕೀನ್ಯಾದ ಗೃಹ...