ರಾಮಮಂದಿರ | ಕಳ್ಳತನ ಮಾಡಿರೋರು ನೀವು, ಸಾಕ್ಷ್ಯ ನಮ್ಮಲ್ಲಿ ಕೇಳ್ತೀರಾ: ಪವನ್ ಖೇಡಾ ವಾಗ್ದಾಳಿ

Date:

ಅಯೋಧ್ಯೆ ರಾಮಮಂದಿರದಲ್ಲಿ ನಡೆದಿರುವ ದೇಣಿಗೆ ದುರುಪಯೋಗವು ಸದ್ಯ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಹಗರಣದ ಸಾಕ್ಷ್ಯವನ್ನು ಕೇಳುತ್ತಿರುವ ಬಿಜೆಪಿಗರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭೆ ಸದಸ್ಯ ಪವನ್ ಖೇಡಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕಳ್ಳತನ ಮಾಡಿರೋರು ನೀವು, ಸಾಕ್ಷ್ಯ ನಮ್ಮಲ್ಲಿ ಕೇಳ್ತೀರಾ” ಎಂಬರ್ಥದಲ್ಲಿ ಪ್ರಶ್ನಿಸಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಅಯೋಧ್ಯೆ ರಾಮಮಂದಿರದಲ್ಲಿ ಕಾಣಿಕೆಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಹೊಸ ಆರೋಪಗಳು ಹೊರಬೀಳುತ್ತಿವೆ ಮತ್ತು ಪ್ರತಿದಿನ ಹೊಸ ಪುರಾವೆಗಳು ಬೆಳಕಿಗೆ ಬರುತ್ತಿವೆ. ಇಂದು, ವಿಶ್ವ ಹಿಂದೂ ಪರಿಷತ್‌ನ ಅಲೋಕ್ ಕುಮಾರ್ ತನಿಖಾ ಅಧಿಕಾರಿಗೆ ಪತ್ರ ಬರೆದು, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ಮತ್ತು ರಾಮ್ ಗೋಪಾಲ್ ಯಾದವ್ ಅವರಿಂದ ಕಳ್ಳತನದ ಪುರಾವೆಗಳನ್ನು ಪಡೆಯಬೇಕೆಂದು ಕೇಳಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಇದನ್ನೂ ಓದಿ: ಬಾಯಲ್ಲಿ ರಾಮನಾಮ, ಬಗಲಲ್ಲಿ ಚೂರಿ: ಆರ್‌ಎಸ್‌ಎಸ್ ನಿಲುವನ್ನು ಜರೆದ ಕಾಂಗ್ರೆಸ್

“ಅಂದರೆ ಒಂದು ಪಕ್ಷವು ಕಳ್ಳತನವನ್ನು ಮಾಡಿದರೆ, ಇನ್ನೊಂದು ಪಕ್ಷವು ಪುರಾವೆಗಳನ್ನು ಒದಗಿಸಬೇಕು ಎಂಬ ಅರ್ಥವೇ? ಸತ್ಯವೆಂದರೆ ಅವರಿಗೆ ಕಳ್ಳರನ್ನು ಹಿಡಿಯುವ ಉದ್ದೇಶವೇನಿಲ್ಲ. ಅಧಿಕಾರದಲ್ಲಿರುವವರು ತಾವೇ ತಪ್ಪು ಎಸಗಿ, ಪ್ರಶ್ನಿಸುವ ವಿರೋಧ ಪಕ್ಷಗಳನ್ನೇ ಅಪರಾಧಿಗಳ ಸ್ಥಾನದಲ್ಲಿ ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಸಾಕ್ಷ್ಯಗಳನ್ನು ಸೃಷ್ಟಿಸುವ ಕೆಲಸ ನಡೆಯುತ್ತಿದೆಯೇ ವಿನಃ ಸತ್ಯದ ಹುಡುಕಾಟವಲ್ಲ” ಎಂದು ದೂರಿದ್ದಾರೆ.

ದೇಶದ ಪ್ರಮುಖ ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಿಕೊಂಡು ಕೇಂದ್ರ ತನಿಖಾ ಸಂಸ್ಥೆಗಳಾದ ಇಡಿ ಮತ್ತು ಸಿಬಿಐ ದಾಳಿ ನಡೆಸುತ್ತಿರುವುದನ್ನು ಖೇಡಾ ಬಲವಾಗಿ ಖಂಡಿಸಿದ್ದಾರೆ. ಹಾಗೆಯೇ ಚುನಾವಣಾ ಸಮಯದಲ್ಲಿ ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಮತ್ತು ಸಾರ್ವಜನಿಕರ ಗಮನವನ್ನು ನಿಜವಾದ ಸಮಸ್ಯೆಗಳಿಂದ (ನಿರುದ್ಯೋಗ, ಬೆಲೆ ಏರಿಕೆ) ಬೇರೆಡೆ ಸೆಳೆಯಲು ಇಂತಹ ತಂತ್ರಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...

ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ...

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....