ಬಾಯಲ್ಲಿ ರಾಮನಾಮ, ಬಗಲಲ್ಲಿ ಚೂರಿ: ಆರ್‌ಎಸ್‌ಎಸ್ ನಿಲುವನ್ನು ಜರೆದ ಕಾಂಗ್ರೆಸ್

Date:

ರಾಮಮಂದಿರ ದೇಣಿಗೆ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ನಿಲುವನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದ್ದು, “ಬಾಯಲ್ಲಿ ರಾಮನಾಮ, ಬಗಲಲ್ಲಿ ಚೂರಿ” ಎಂದು ಜರೆದಿದೆ. ರಾಮಮಂದಿರದ ದೇಣಿಗೆ ಹಣ ದುರುಪಯೋಗವಾಗಿರುವ ವಿಷಯದಲ್ಲಿ ಆರ್‌ಎಸ್‌ಎಸ್‌ನ ನಿಜವಾದ ಮುಖವಾಡ ಕಳಚಿಬಿದ್ದಿದೆ ಎಂದು ಕಾಂಗ್ರೆಸ್ ಹೇಳಿದೆ.

- Advertisement -

ರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣವು ಬಹಿರಂಗವಾಗಿ ಹಲವು ದಿನಗಳ ನಂತರ ಆರ್‌ಎಸ್‌ಎಸ್‌ ಮೌನ ಮುರಿದಿದೆ. ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಈ ಘಟನೆಗೆ ತೀವ್ರ ಅಸಮಾಧಾನ ಮತ್ತು ಆಕ್ರೋಶ ವ್ಯಕ್ತಪಡಿಸಿ ಪ್ರಕಟಣೆ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನೂ ಓದಿ: ರಾಮಮಂದಿರ ಕಾಣಿಕೆ ಕಳವು ಪ್ರಕರಣ: ತೀವ್ರ ನೋವು ತಂದಿದೆ ಎಂದ ಆರೆಸ್ಸೆಸ್

“ಆದರೆ, ಈ ಹೇಳಿಕೆಯು ಸತ್ಯವನ್ನು ಹೊರತರುವುದಕ್ಕಲ್ಲ, ಬದಲಿಗೆ ಕೋಟ್ಯಂತರ ರೂಪಾಯಿ ದೇಣಿಗೆ ಲೂಟಿಯ ಸತ್ಯವನ್ನು ಮುಚ್ಚಿಹಾಕಲು ಮತ್ತು ಸಂಘದ ಇಮೇಜ್ ಅನ್ನು ರಕ್ಷಿಸಲು ಮಾಡಿದ ಕುತಂತ್ರದ ಪ್ರಯತ್ನ” ಎಂದು ಕಾಂಗ್ರೆಸ್ ದೂರಿದೆ

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಕಾಂಗ್ರೆಸ್ ರಾಜ್ಯಸಭೆ ಸದಸ್ಯ ಪವನ್ ಖೇರಾ, “ಆರ್‌ಎಸ್‌ಎಸ್ ಕುರಿವೇಷದಲ್ಲಿರುವ ತೋಳ. ದತ್ತಾತ್ರೇಯ ಹೊಸಬಾಳೆ ಅವರ ಪ್ರದರ್ಶನಾತ್ಮಕ ಖಂಡನೆ ರಾಮ ಮಂದಿರ ನಿಧಿಯ ಲೂಟಿಯನ್ನು ಬಹಿರಂಗಪಡಿಸುವುದರ ನಿಟ್ಟಿನಲ್ಲಿ ನೀಡಿರುವುದಲ್ಲ. ಬದಲಾಗಿ ತಮ್ಮ ಘನತೆ ಉಳಿಸಿಕೊಳ್ಳುವ ಹತಾಶ ಪ್ರಯತ್ನವಾಗಿದೆ” ಎಂದು ಹೇಳಿದ್ದಾರೆ.

ಹಾಗೆಯೇ, “ವಿಡಿಯೋ ಮಾಡಿದ ನಿಜವಾದ ಉದ್ದೇಶ ಯುಪಿ ಸರ್ಕಾರದ ಎಸ್‌ಐಟಿಯನ್ನು ಸಮರ್ಥಿಸುವುದಾಗಿದೆ. ಈ ಎಸ್‌ಐಟಿ ಎಫ್‌ಐಆರ್ ದಾಖಲಾಗುವ ಮೊದಲೇ ರಚಿಸಲಾಗಿದೆ. ಈವರೆಗೆ ಸಾರ್ವಜನಿಕ ವರದಿ ನೀಡಿಲ್ಲ. ಮೊಸಳೆಯನ್ನು ರಕ್ಷಿಸಲು ಕೆಲವು ಕಾಲಾಳುಗಳನ್ನು ಬಲಿಕೊಡಲಾಗುತ್ತಿದೆ” ಎಂದು ಟೀಕಿಸಿದ್ದಾರೆ.

“ರಾಮಮಂದಿರ ನಿಧಿಯ ಲೂಟಿ ದೇಶಾದ್ಯಂತ ಹಿಂದೂಗಳ ನಂಬಿಕೆಯನ್ನು ತೀವ್ರವಾಗಿ ಘಾಸಿಗೊಳಿಸಿದೆ. ಆದರೆ ರಾಮ ಮಂದಿರ ದೇಣಿಗೆಗಳ ಕಳ್ಳತನದ ಆರೋಪದ ಬಗ್ಗೆ ಆರ್‌ಎಸ್‌ಎಸ್‌ನ ಹಠಾತ್ ಆಕ್ರೋಶ ಈ ಗಾಯಕ್ಕೆ ಉಪ್ಪು ಸವರಿದೆ. ಭಕ್ತರ ದೇಣಿಗೆಗಳನ್ನು ಕಾಪಾಡುವ ವಿಚಾರದಲ್ಲಿ ಆರ್‌ಎಸ್‌ಎಸ್ ಪ್ರಾಮಾಣಿಕವಾಗಿ ಬದ್ಧವಾಗಿದ್ದರೆ, ತನ್ನದೇ ಕಣ್ಗಾವಲಿನಲ್ಲಿ ಇರುವ ದೇವಾಲಯದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ದುರುಪಯೋಗ ಎಂದಿಗೂ ನಡೆಯುತ್ತಿರಲಿಲ್ಲ. ಇದು ಆರ್‌ಎಸ್‌ಎಸ್‌ನ ನಿಜವಾದ ಮುಖ. ಧರ್ಮನಿಷ್ಠೆ ಒಂದು ಪ್ರದರ್ಶನ; ಲೂಟಿಯೇ ವೃತ್ತಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಕಾಂಗ್ರೆಸ್ ವಕ್ತಾರ ಜೈರಾಮ್‌ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಆರ್‌ಎಸ್‌ಎಸ್ ನೀಡಿದ ಕ್ಲೀನ್ ಚಿಟ್ ಅವಮಾನಕರ ಮತ್ತು ನಾಚಿಕೆಗೇಡಿನ ಸಂಗತಿ. ವಾಸ್ತವವೆಂದರೆ ಅದರ ಜಾಲದ ಬಹುಪಾಲು ಜನರು ದೊಡ್ಡ ಪ್ರಮಾಣದಲ್ಲಿ ದೇಣಿಗೆ ಕಳ್ಳತನ ನಡೆಸುತ್ತಿದ್ದಾರೆ. ಅದು ಕಪಟ ಸಂಘಟನೆ” ಎಂದು ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ ಶಾಪವೇ?‌ – ಭಾಗ 2

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...