ರಾಮ ಮಂದಿರಕ್ಕೆ ಶಿವಸೇನೆ ನೀಡಿದ್ದ 4 ಕೆಜಿ ಬೆಳ್ಳಿ ಇಟ್ಟಿಗೆ ನಾಪತ್ತೆ? ಬಿಜೆಪಿ ಕಡೆ ಬೊಟ್ಟು ಮಾಡಿದ ಸಂಜಯ್ ರಾವತ್

Date:

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದ ಸಂದರ್ಭದಲ್ಲಿ ಶಿವಸೇನೆ (ಯುಬಿಟಿ) ದಾನವಾಗಿ ನೀಡಿದ್ದ 4 ಕೆಜಿ ಬೆಳ್ಳಿ ಇಟ್ಟಿಗೆಯ ಕುರಿತು ಗಂಭೀರ ಪ್ರಶ್ನೆ ಎದ್ದಿದೆ. ಈ ಬೆಳ್ಳಿ ಇಟ್ಟಿಗೆ ಕಾಣೆಯಾಗಿದೆ ಎಂದು ಆರೋಪಿಸಿರುವ ಶಿವಸೇನೆ ಸಂಸದ ಸಂಜಯ್ ರಾವತ್, ಈ ವಿಚಾರದಲ್ಲಿ ಪಾರದರ್ಶಕ ತನಿಖೆಗೆ ಆಗ್ರಹಿಸಿದ್ದಾರೆ. ಜೊತೆಗೆ ಬಿಜೆಪಿಯೇ ಕಾರಣವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

- Advertisement -

ಸಂಜಯ್ ರಾವತ್ ಅವರು ತಮ್ಮ ಅಧಿಕೃತ ಎಕ್ಸ್ (ಟ್ವಿಟ್ಟರ್) ಖಾತೆ ಮೂಲಕ ಈ ವಿಷಯವನ್ನು ಪ್ರಸ್ತಾಪಿಸಿ, “ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸಾವಿರಾರು ಶಿವಸೈನಿಕರು ಹಾಗೂ ಸಾಧು-ಸಂತರ ಸಮ್ಮುಖದಲ್ಲಿ 1 ಕೋಟಿ ರೂ.ಗಳ ಚೆಕ್ ಮತ್ತು 4 ಕೆಜಿ ತೂಕದ ಬೆಳ್ಳಿ ಇಟ್ಟಿಗೆಯನ್ನು ಭಕ್ತಿಯಿಂದ ಸಮರ್ಪಿಸಿದ್ದರು. ಆದರೆ, ಇಂದಿನವರೆಗೂ ಟ್ರಸ್ಟ್‌ನಿಂದ ನಮಗೆ ಯಾವುದೇ ಅಧಿಕೃತ ಸ್ವೀಕೃತಿ (ರಶೀದಿ) ಬಂದಿಲ್ಲ. ಆ ಪವಿತ್ರ ಕಾಣಿಕೆ ಈಗ ಎಲ್ಲಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

ರಾಮ ಮಂದಿರ ದೇಣಿಗೆ ಹಗರಣದ ಬಗ್ಗೆ ತೀವ್ರ ವಾಗ್ದಾಳಿ ನಡೆಸಿರುವ ರಾವತ್, ಈ ಪ್ರಕರಣದಲ್ಲಿ ಬಿಜೆಪಿ ನಾಯಕರ ಶಾಮೀಲಾತಿ ಇದೆ ಎಂದು ದೂರಿದ್ದಾರೆ. “ಈ ಹಗರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗುವುದಿಲ್ಲ, ಏಕೆಂದರೆ ಇದರ ಹಿಂದೆ ಬಿಜೆಪಿಯವರೇ ಇದ್ದಾರೆ” ಎಂದು ಆಪಾದಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರದ ನಿರ್ದೇಶನದ ಮೇರೆಗೆ, ಭಾರತೀಯ ನ್ಯಾಯ ಸಂಹಿತೆ (BNS)ಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯ ಕೃಷ್ಣಮೋಹನ್ ನೀಡಿದ ದೂರಿನ ಮೇರೆಗೆ, ಎಸ್‌ಐಟಿ ವರದಿಯ ಶಿಫಾರಸುಗಳನ್ನು ಆಧರಿಸಿ ಪ್ರಕರಣ ಸಂಬಂಧ ಈಗಾಗಲೇ 8 ಜನರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಬಿಡದಿ ಟೌನ್‌ಶಿಪ್ ವಿವಾದ: ರೈತರ ಒಪ್ಪಿಗೆ ಇಲ್ಲದೆ ಯೋಜನೆ ಜಾರಿ ಇಲ್ಲ: ಡಿಸಿಎಂ ಪರಮೇಶ್ವರ್ ಭರವಸೆ

ಅಯೋಧ್ಯೆ ಮಂದಿರದ ದೇಣಿಗೆಯ ವಿಷಯದಲ್ಲಿನ ಕಾನೂನು ಪ್ರಕ್ರಿಯೆ ಚುರುಕಾಗಿ ನಡೆಯುತ್ತಿದ್ದರೂ, ಸಂಜಯ್ ರಾವತ್ ಅವರ ಈ ಆರೋಪಗಳು ಪ್ರಕರಣಕ್ಕೆ ಹೊಸ ತಿರುವು ನೀಡಿದ್ದು, ಟ್ರಸ್ಟ್ ಮತ್ತು ಬಿಜೆಪಿ ಈ ಬಗ್ಗೆ ಹೇಗೆ ಪ್ರತಿಕ್ರಿಯಿಸಲಿದೆ ಎಂಬುದು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಏಷ್ಯನ್ ಗೇಮ್ಸ್ ಕಬಡ್ಡಿ: ಇರಾನ್‌ ಮಣಿಸಿ ಪುರುಷ, ಮಹಿಳಾ ವಿಭಾಗಗಳಲ್ಲಿ ಭಾರತಕ್ಕೆ ಜೋಡಿ ಚಿನ್ನದ ಸಂಭ್ರಮ

ಜಪಾನ್‌ನ ಐಚಿ–ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಕ್ರೀಡಾಕೂಟದ ಕಬಡ್ಡಿ ಅಂಕಣದಲ್ಲಿ...