ರಾಮಮಂದಿರ ದೇಣಿಗೆ ವಿವಾದ | ₹1 ಲಕ್ಷಕ್ಕಿಂತಲೂ ಕಡಿಮೆಯಾದ ದಿನದ ಸಂಗ್ರಹ

Date:

ಅಯೋಧ್ಯೆಯ ರಾಮಮಂದಿರದ ಕಾಣಿಕೆ ಹುಂಡಿಯ ದೇಣಿಗೆ ಸಂಗ್ರಹದ ವಿವಾದದ ಬಳಿಕ ದೇವಸ್ಥಾನದ ಕಾಣಿಕೆ ಹುಂಡಿಗೆ ಬರುವ ದೇಣಿಗೆಯಲ್ಲಿ ಭಾರೀ ಕುಸಿತ ಕಂಡುಬಂದಿದೆ. ಹಿಂದೆ ದಿನವೊಂದಕ್ಕೆ 8 ರಿಂದ 12 ಲಕ್ಷ ರೂಪಾಯಿ ಸಂಗ್ರಹವಾಗುತ್ತಿದ್ದು, ಅದು ಈಗ ಕೇವಲ 1 ಲಕ್ಷ ರೂಪಾಯಿಗೆ ಇಳಿಕೆಯಾಗಿದೆ. ಏಪ್ರಿಲ್ 2025 ರಿಂದ ಫೆಬ್ರವರಿ 2026 ರ ಅವಧಿಯಲ್ಲಿ ಸುಮಾರು 82 ಕೋಟಿ ರೂ. ದೇಣಿಗೆ ಸ್ವೀಕರಿಸಲಾಗಿತ್ತು, ಅಂದರೆ ಮಾಸಿಕ ಸರಾಸರಿ 7.45 ಕೋಟಿ ರೂ.ಗಳಷ್ಟು ಆದಾಯವಿತ್ತು. ಈಗಿನ ಅಕ್ರಮಗಳು ಮತ್ತು ಅವ್ಯವಸ್ಥೆಯನ್ನು ಸರಿಪಡಿಸಲು, ಕಾಶಿ ವಿಶ್ವನಾಥ ದೇವಾಲಯದ ಮಾದರಿಯಲ್ಲೇ ರಾಮ ಮಂದಿರಕ್ಕೂ ಓರ್ವ ಸಮರ್ಥ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು (CEO) ನೇಮಿಸಬೇಕು ಮತ್ತು ಆಡಳಿತ ವ್ಯವಸ್ಥೆಯನ್ನು ವೃತ್ತಿಪರರ ಕೈಗೆ ಹಸ್ತಾಂತರಿಸಬೇಕು ಎಂದು SIT ತನ್ನ ವರದಿಯಲ್ಲಿ ಪ್ರಮುಖವಾಗಿ ಶಿಫಾರಸು ಮಾಡಲಿದೆ ಎಂದು ಮೂಲಗಳು ತಿಳಿಸಿವೆ. ತನಿಖೆ ಮುಗಿಯುವವರೆಗೆ ಸಂಬಂಧಪಟ್ಟವರು ಅಯೋಧ್ಯೆಯನ್ನು ಬಿಟ್ಟು ಹೋಗದಂತೆ ನಿರ್ಬಂಧ ವಿಧಿಸಲಾಗಿದೆ.

- Advertisement -

ಅಕ್ರಮಗಳು ಮತ್ತು ಹಣದ ದುರುಪಯೋಗದ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT), ತನ್ನ ಸುಮಾರು 150 ಪುಟಗಳ ಸಮಗ್ರ ಮಧ್ಯಂತರ ವರದಿಯನ್ನು ಇಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಚೇರಿಗೆ ಸಲ್ಲಿಸಲಿದೆ. ಜೂನ್ 13 ರಂದು ರಚನೆಯಾದ ಮೂವರು ಸದಸ್ಯರ ತಂಡವು, ಕಳೆದ 6 ದಿನಗಳಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಬ್ಯಾಂಕ್ ಅಧಿಕಾರಿಗಳು, ಹಣ ಎಣಿಕೆ ಮಾಡುವ ಸಿಬ್ಬಂದಿ ಸೇರಿದಂತೆ ಸುಮಾರು 150ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಿದೆ. ಈ ಅವಧಿಯಲ್ಲಿ ನಡೆದ ತನಿಖೆಯು ದೇಣಿಗೆ ಹಣದ ಸೋರಿಕೆ, ದಾಖಲೆಗಳ ನಿರ್ವಹಣೆಯಲ್ಲಿನ ಲೋಪದೋಷಗಳು ಮತ್ತು ಅಕ್ರಮಗಳ ಜಾಲವನ್ನು ಬಯಲಿಗೆಳೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಇದನ್ನೂ ಓದಿ: KPCC ಹುದ್ದೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ತನಿಖೆಯ ವೇಳೆ ದೇಣಿಗೆ ಹಣವನ್ನು ಎಣಿಕೆ ಮಾಡುವ ಸಂದರ್ಭದಲ್ಲಿ ಸಿಬ್ಬಂದಿಗಳು ಹಣವನ್ನು ಜೇಬಿಗೆ ಹಾಕಿಕೊಳ್ಳುತ್ತಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ತಂಡವು ವಶಪಡಿಸಿಕೊಂಡಿದ್ದು, ಕೆಲವು ದೃಶ್ಯಗಳನ್ನು ಉದ್ದೇಶಪೂರ್ವಕವಾಗಿ ಅಳಿಸಿ ಹಾಕಿರುವ ಶಂಕೆಯೂ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರ ಆಪ್ತ ಸಹಾಯಕ ‘ಟಿನ್ನು ಯಾದವ್’ (ರಾಮಶಂಕರ್), ಟ್ರಸ್ಟಿ ಡಾ. ಅನಿಲ್ ಮಿಶ್ರಾ ಮತ್ತು ನಿರ್ಮಾಣ ಸಹಾಯಕ ಗೋಪಾಲ್ ರಾವ್ ಅವರ ಪಾತ್ರದ ಕುರಿತು SIT ತೀವ್ರ ವಿಚಾರಣೆ ನಡೆಸಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಐವರು ಪ್ರಮುಖ ಆರೋಪಿಗಳ ಮಾಹಿತಿ ಮೇರೆಗೆ ಸುಮಾರು 2 ಕೋಟಿ ರೂಪಾಯಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣದಲ್ಲಿ ಶಾಮೀಲಾದ ಸುಮಾರು 20 ರಿಂದ 25 ಮಂದಿ ಮ್ಯಾನೇಜ್‌ಮೆಂಟ್ ಸಿಬ್ಬಂದಿ ಹಾಗೂ ಟ್ರಸ್ಟ್‌ನ ಪದಾಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಾರಂ-7 ದುರುಪಯೋಗ, ಮತಗಳ್ಳತನದ ವಿರುದ್ಧ ಪೊಲೀಸ್ ತನಿಖೆ: ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...

ಶ್ವೇತಭವನ ಗೆಲ್ಲಲು 2028ರ ತನಕ ಕಾಯಬೇಕು ಡೆಮಾಕ್ರಟ್ಸ್!

ನವೆಂಬರ್ 3ರ ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟರು ಭರ್ಜರಿ ಗೆಲುವು ಸಾಧಿಸಿದ್ದಾರೆ....

3 ತಿಂಗಳ ಬಳಿಕ ಐಟಿ ವಿಭಾಗದ ಮೇಲುಸ್ತುವಾರಿ ಹಿಂಪಡೆದ ಚು. ಆಯೋಗ!

ಕೇಂದ್ರ ಚುನಾವಣಾ ಆಯೋಗದಲ್ಲಿ (ECI) ಕಾರ್ಯ ಹಂಚಿಕೆ ಆದೇಶಕ್ಕೆ ಸಂಬಂಧಿಸಿದಂತೆ ಮುಖ್ಯ...

‘ಚಾಯ್ ಪೇ ಚರ್ಚಾ’ – ಕಾಂಗ್ರೆಸ್‌ನ ಹಿರಿಯ ನಾಯಕರಿಗೆ ರಾಹುಲ್ ಗಾಂಧಿ ಆಹ್ವಾನ

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ನ ಪ್ರಮುಖ ಹಿರಿಯ...