ರಾಮಮಂದಿರ ಹುಂಡಿಗೆ ಕನ್ನ: ಆರೋಪಿಗಳ ಮನೆಗಳ ಮೇಲೆ ದಾಳಿ; ಇನ್ನೂ ಹೊರಬರಬೇಕಿದೆ ಅಸಲಿಯತ್ತು!

Date:

ಅಯೋಧ್ಯೆಯ ರಾಮಮಂದಿರದ ಕಾಣಿಕೆ ಹಣದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಹಣದ ವ್ಯವಹಾರದ ಅಸಲಿ ಜಾಡನ್ನು ಪತ್ತೆಹಚ್ಚಲು ಪ್ರಕರಣದ ಎಂಟೂ ಆರೋಪಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಭಾನುವಾರ ಬೆಳಿಗ್ಗೆ ಆರಂಭವಾದ ಈ ಜಂಟಿ ಕಾರ್ಯಾಚರಣೆಯಲ್ಲಿ ಪೊಲೀಸ್ ತಂಡಗಳು ಮತ್ತು ಸ್ಥಳೀಯ ಮ್ಯಾಜಿಸ್ಟ್ರೇಟ್‌ಗಳು ಭಾಗವಹಿಸಿದ್ದಾರೆ. ಯಾವುದೇ ಅಕ್ರಮ ನಡೆಯದಂತೆ ಸ್ವತಂತ್ರ ಸಾಕ್ಷಿಯಾಗಿ ಕಂದಾಯ ಅಧಿಕಾರಿಗಳೂ ದಾಳಿಯ ಸಮಯದಲ್ಲಿ ಹಾಜರಿದ್ದಾರೆ ಎಂದು ವರದಿಯಾಗಿದೆ.

- Advertisement -

ರಾಮಮಂದಿರದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳ ಆಧಾರದ ಮೇಲೆ ಕಾಣಿಕೆ ಹಣ ದುರುಪಯೋಗಪಡಿಸಿಕೊಂಡ ಆರೋಪಿಗಳನ್ನು ಪತ್ತೆಹಚ್ಚಲಾಗಿದ್ದು, ಕಳೆದ ವಾರ ಈ ಎಂಟು ಜನರನ್ನು ಬಂಧಿಸಲಾಗಿತ್ತು. ಬಂಧಿತರನ್ನು ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಲವಕುಶ್ ಮಿಶ್ರಾ, ಮನೀಶ್ ಕುಮಾರ್ ಯಾದವ್, ಕರುಣೇಶ್ ಪಾಂಡೆ, ರಾಮ್ ಶಂಕರ್ ಮಿಶ್ರಾ, ಸುಭಾಷ್ ಶ್ರೀವಾಸ್ತವ ಹಾಗೂ ರಮಾಶಂಕರ್ ಅಲಿಯಾಸ್ ತಿನ್ನು ಯಾದವ್ ಎಂದು ಗುರುತಿಸಲಾಗಿದೆ. ಈ ಎಲ್ಲರೂ ಮಂದಿರದ ಹುಂಡಿಗಳಲ್ಲಿ ಭಕ್ತರು ಸಲ್ಲಿಸಿದ್ದ ನಗದು ಹಣವನ್ನು ಎಣಿಕೆ ಮಾಡುವ ಸಿಬ್ಬಂದಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಎರಡು ದಿನಗಳ ಹಿಂದೆ ಸ್ಥಳೀಯ ನ್ಯಾಯಾಲಯವು ಆರೋಪಿಗಳನ್ನು ಸೋಮವಾರದವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಸೋಮವಾರ, ಅವರನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಪೊಲೀಸರು ವಿಚಾರಣೆಗಾಗಿ ಕಸ್ಟಡಿ ಅವಧಿಯನ್ನು ಮತ್ತಷ್ಟು ವಿಸ್ತರಿಸುವಂತೆ ಕೋರುವ ಸಾಧ್ಯತೆಯಿದೆ.

ಅಧಿಕೃತ ಮೂಲಗಳ ಪ್ರಕಾರ, ಕಳೆದ ನಾಲ್ಕು ವರ್ಷಗಳಲ್ಲಿ ಈ ಕುಟುಂಬಗಳು ಗಳಿಸಿದ ಜಮೀನು, ಆಭರಣಗಳು ಹಾಗೂ ಬ್ಯಾಂಕ್ ಉಳಿತಾಯ ಸೇರಿದಂತೆ ಒಟ್ಟಾರೆ ಆಸ್ತಿಪಾಸ್ತಿಗಳ ನಿಖರವಾದ ಪಟ್ಟಿಯನ್ನು ಸಿದ್ಧಪಡಿಸಲು ಪೊಲೀಸರು ಈಗ ಆರೋಪಿಗಳ ಕುಟುಂಬ ಸದಸ್ಯರನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಈ ಕಳ್ಳತನದ ಪ್ರಕರಣದಲ್ಲಿ ಒಟ್ಟು ಎಷ್ಟು ಮೊತ್ತದ ಹಗರಣ ನಡೆದಿದೆ. ಅವರು ಎಲ್ಲೆಲ್ಲಿ ಹೂಡಿಕೆ ಮಾಡಿದ್ದಾರೆ ಹಾಗೂ ಇನ್ನೂ ಯಾರೆಲ್ಲ ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬೃಹತ್ ಹಗರಣದ ಹಿಂದೆ ಇರುವ ದೊಡ್ಡ ಕೈಗಳು ಯಾವುವು, ಕಳ್ಳತನದ ಒಟ್ಟು ಮೊತ್ತವೆಷ್ಟು ಎಂಬುದು ಇನ್ನೂ ಹೊರಬರಬೇಕಿದೆ.

ಈ ಲೇಖನ ಓದಿದ್ದೀರಾ?: ಇಂದಿರಾ ತಿವಿದರೆ ನೋವೇ? ಮೋದಿ ತಿವಿದರದು ಹೂವೆ?

ತನಿಖೆಯ ವೇಳೆ ಆರೋಪಿಗಳಾದ ತಿನ್ನು ಮತ್ತು ಮನೀಶ್ ಯಾದವ್ ಅವರ ಕುಟುಂಬಗಳು ಪೊಲೀಸರೊಂದಿಗೆ ಸರಿಯಾಗಿ ಸಹಕರಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಮತ್ತೊಬ್ಬ ಆರೋಪಿ ಅನುಕಲ್ಪ್ ಮಿಶ್ರಾ ಅವರ ಚಿಕ್ಕಮ್ಮ ನೇಹಾ ಮಿಶ್ರಾ ಅವರು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ, ತಮ್ಮ ಕುಟುಂಬದ ಆರ್ಥಿಕ ಪರಿಸ್ಥಿತಿ ಮೊದಲು ಅತ್ಯಂತ ಸಾಧಾರಣವಾಗಿತ್ತು. ಆದರೆ, ಅನುಕಲ್ಪ್ ರಾಮಮಂದಿರ ಟ್ರಸ್ಟ್‌ನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ ನಂತರ ತಮ್ಮ ಜೀವನಶೈಲಿಯಲ್ಲಿ ಬದಲಾವಣೆ ಕಂಡುಬಂದಿದೆ ಎಂಬುದಾಗಿ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಮಂದಿರದ ಲೆಕ್ಕಪುಸ್ತಕಗಳಿಂದ ಸರಿಸುಮಾರು 7 ರಿಂದ 7.5 ಕೋಟಿ ರೂಪಾಯಿ ನಗದು ನಾಪತ್ತೆಯಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಆದರೂ, ಕಳ್ಳತನವಾದ ನಿಖರವಾದ ಮೊತ್ತ ಇನ್ನೂ ಸಂಪೂರ್ಣವಾಗಿ ದೃಢಪಟ್ಟಿಲ್ಲ. ಪೊಲೀಸರು ಇದುವರೆಗೆ ಆರೋಪಿಗಳಿಂದ 79.85 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ. ದಿನ ದಾಳಿಯಲ್ಲಿ ಹೆಚ್ಚುವರಿ ನಗದು ಅಥವಾ ಚಿನ್ನಾಭರಣಗಳು ಪತ್ತೆಯಾಗಿದೆಯೇ ಎಂಬ ವಿವರಗಳು ಇನ್ನೂ ಹೊರಬರಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾವಿನ ಕದ ತಟ್ಟಿ ಬಂದ ರೈತನ ಮಗನಿಗೆ 12 ಚಿನ್ನದ ಪದಕ

ಬದುಕು ಮುಗಿಯಿತು ಎಂದುಕೊಂಡಿದ್ದ ಕ್ಷಣದಿಂದಲೇ ಹೊಸ ಬದುಕಿನತ್ತ ಹೆಜ್ಜೆ ಇಟ್ಟರು. ಸಾವಿನ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ ʼನೀರೋʼ; ಭಾರತ ಉರಿಯುತ್ತಿರುವಾಗ ಭಜನೆ ಮಾಡಿದ ʼಮೋದಿʼ!

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ,...