ರಾಮಮಂದಿರ ಲೂಟಿ: ಎಸ್‌ಬಿಐ ನಿರ್ಲಕ್ಷ್ಯ, ನಾನೇಕೆ ರಾಜೀನಾಮೆ ನೀಡಲಿ: ಹೊಣೆಗಾರಿಕೆಯಿಂದ ನುಣುಚಿಕೊಂಡ ಕೋಶಾಧ್ಯಕ್ಷ

Date:

ಅಯೋಧ್ಯೆಯ ರಾಮಮಂದಿರ ದೇಣಿಗೆ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ರಾಜೀನಾಮೆ ನೀಡುವ ಸಾಧ್ಯತೆಯನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಕೋಶಾಧ್ಯಕ್ಷ ಸ್ವಾಮಿ ಗೋವಿಂದ ದೇವಗಿರಿ ಮಹಾರಾಜ್ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. “ಇದಕ್ಕೆ ಎಸ್‌ಬಿಐ ನಿರ್ಲಕ್ಷ್ಯವೇ ಕಾರಣ, ನಾನೇಕೆ ರಾಜೀನಾಮೆ ನೀಡಲಿ” ಎಂದು ಪ್ರಶ್ನಿಸಿದ್ದಾರೆ. ಕೋಶಾಧ್ಯಕ್ಷರಾಗಿ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಈ ಹೇಳಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

- Advertisement -

ಈ ಬಗ್ಗೆ ಮಂಗಳವಾರ ಪುಣೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸ್ವಾಮೀಜಿ, “ನಾನು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ನಾನು ಟ್ರಸ್ಟ್‌ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನನ್ನ ಪ್ರಾಯಶ್ಚಿತ್ತ ಏನಿದ್ದರೂ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳುವುದೇ ಹೊರತು, ರಾಜೀನಾಮೆ ನೀಡುವುದಲ್ಲ” ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ: ರಾಮಮಂದಿರ ಲೂಟಿ | ನಮಗೆ ಅವಮಾನ, ನಿರಾಶೆಯಾಗಿದೆ: ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ

ಇನ್ನು “ಕಾಣಿಕೆ ಪೆಟ್ಟಿಗೆಯಿಂದ ನಗದು ಎಣಿಕೆ ಮಾಡುವ ಜವಾಬ್ದಾರಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊಂದಿತ್ತು. ಈ ಪ್ರಕ್ರಿಯೆಯಲ್ಲಿ ಬ್ಯಾಂಕ್ ಮತ್ತಷ್ಟು ಜಾಗರೂಕತೆ ವಹಿಸಬೇಕಿತ್ತು. ಈ ಪ್ರಕರಣದಲ್ಲಿ ಇದುವರೆಗೆ ಬಂಧಿತರಾಗಿರುವ ಎಲ್ಲಾ ಎಂಟು ಮಂದಿ ಆರೋಪಿಗಳೂ ಕೂಡ ಎಸ್‌ಬಿಐ ನಿಯೋಜಿಸಿದ್ದ ಸಿಬ್ಬಂದಿಗಳಾಗಿದ್ದಾರೆ. ಅವರು ಬ್ಯಾಂಕಿನ ಉದ್ಯೋಗಿಗಳೇ ಹೊರತು, ರಾಮಮಂದಿರ ಟ್ರಸ್ಟ್‌ನವರಲ್ಲ. ಹೀಗಾಗಿ ಬ್ಯಾಂಕ್ ತನ್ನ ಕಡೆಯಿಂದ ಭದ್ರತೆ ಮತ್ತು ಮೇಲ್ವಿಚಾರಣೆಯಲ್ಲಿ ಸಂಪೂರ್ಣ ಎಚ್ಚರಿಕೆ ವಹಿಸಬೇಕಿತ್ತು” ಎಂದು ಲೂಟಿಯ ಹೊಣೆಗಾರಿಕೆಯನ್ನು ಎಸ್‌ಬಿಐ ಮೇಲೆ ಹಾಕಿದ್ದಾರೆ.

“ನಾನೇಕೆ ರಾಜೀನಾಮೆ ನೀಡಲಿ?” ಎಂಬ ಅವರ ಪ್ರಶ್ನೆ ಹಾಗೂ ಇಡೀ ಘಟನೆಗೆ ಎಸ್‌ಬಿಐ (SBI) ಬ್ಯಾಂಕ್ ಮಾತ್ರ ಕಾರಣ ಎಂಬ ಹೇಳಿಕೆಯನ್ನು ನೆಟ್ಟಿಗರು ತೀವ್ರವಾಗಿ ಟೀಕಿಸಿದ್ದಾರೆ. ಎಕ್ಸ್ (ಟ್ವಿಟರ್), ಫೇಸ್‌ಬುಕ್ ಹಾಗೂ ಇತರ ಜಾಲತಾಣಗಳಲ್ಲಿ ಈ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

“ಪ್ರತಿಷ್ಠಿತ ಮತ್ತು ಪವಿತ್ರವಾದ ಟ್ರಸ್ಟ್‌ನ ಉನ್ನತ ಹುದ್ದೆಯಲ್ಲಿರುವವರು ಇಂತಹ ಕೋಟ್ಯಂತರ ರೂಪಾಯಿಗಳ ಹಗರಣ ನಡೆದಾಗ ನೈತಿಕ ಹೊಣೆಗಾರಿಕೆ ಹೊರಬೇಕಾಗಿರುವುದು ಧರ್ಮ ಮತ್ತು ನಿಯಮ ಎರಡೂ ಆಗಿದೆ” ಎಂದು ನೆಟ್ಟಿಗರು ವಾದಿಸಿದ್ದಾರೆ.

“ಕೇವಲ ಬ್ಯಾಂಕ್ ಸಿಬ್ಬಂದಿಯ ತಪ್ಪು ಎಂದು ಹೇಳಿ ಕೈತೊಳೆದುಕೊಳ್ಳುವುದು ಜವಾಬ್ದಾರಿಯುತ ಸ್ಥಾನದಲ್ಲಿರುವವರಿಗೆ ಶೋಭಿಸುವುದಿಲ್ಲ. ವ್ಯವಸ್ಥೆಯ ಮೇಲ್ವಿಚಾರಣೆ ಮಾಡುವುದು ಟ್ರಸ್ಟ್‌ನ ಕೆಲಸವಲ್ಲವೇ?” ಎಂದು ಹಲವು ಬಳಕೆದಾರರು ಪ್ರಶ್ನಿಸಿದ್ದಾರೆ.

ಹಾಗೆಯೇ, ಕೋಶಾಧ್ಯಕ್ಷರು ತಮ್ಮ ಹೇಳಿಕೆಯಲ್ಲಿ “ನನ್ನ ಪ್ರಾಯಶ್ಚಿತ್ತ ಏನಿದ್ದರೂ ಮುಂದೆ ತಪ್ಪು ನಡೆಯದಂತೆ ತಡೆಯುವುದೇ ಹೊರತು ರಾಜೀನಾಮೆ ನೀಡುವುದಲ್ಲ” ಎಂದಿದ್ದನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋಟ್ಯಂತರ ಭಕ್ತರ ಭಾವನೆ ಮತ್ತು ಕಾಣಿಕೆ ಹಣದ ಭದ್ರತೆಯ ವಿಷಯದಲ್ಲಿ ಇಷ್ಟು ನಿರ್ಲಕ್ಷ್ಯ ವಹಿಸಿ, ಈಗ ಅದನ್ನು ಕೇವಲ ಬ್ಯಾಂಕಿನ ತಲೆಗೆ ಕಟ್ಟುವುದು “ಬಾಲಿಶ ಮತ್ತು ಜವಾಬ್ದಾರಿಯಿಂದ ನುಣುಚಿಕೊಳ್ಳುವ ತಂತ್ರ” ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...