ರಾಮಮಂದಿರ ಲೂಟಿ | ಸಂಸತ್‌ ಆವರಣದಲ್ಲಿ ಪ್ರತಿಭಟಿಸಿದ್ದಕ್ಕೆ ಪಪ್ಪು ಯಾದವ್ ವಿರುದ್ಧ ಪೊಲೀಸ್ ದೂರು

Date:

ಅಯೋಧ್ಯೆಯ ರಾಮಮಂದಿರದಲ್ಲಿ ನಡೆದಿರುವ ದೇಣಿಗೆ ಲೂಟಿ ವಿರುದ್ಧ ಸಂಸತ್‌ ಆವರಣದಲ್ಲಿ ಕಾಂಗ್ರೆಸ್‌ ವಿಶಿಷ್ಠ ಪ್ರತಿಭಟನೆ ನಡೆಸಿತ್ತು. ಇದೀಗ, ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪಕ್ಷೇತರ ಸಂಸದ ರಾಜೇಶ್‌ ರಂಜನ್‌ ಅಲಿಯಾಸ್‌ ಪಪ್ಪು ಯಾದವ್‌ ವಿರುದ್ಧ ದೆಹಲಿಯ ಜಹಾಂಗೀರ್‌ಪುರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಪಪ್ಪು ಯಾದವ್‌ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -

ಸೂರ್ಯ ಮೈಥಿಲ್‌ ಎಂಬವರು ಸಲ್ಲಿಸಿರುವ ದೂರಿನಲ್ಲಿ, “ಪಪ್ಪು ಯಾದವ್‌ ಅವರು ಸಂಸತ್‌ ಆವರಣದಲ್ಲಿ ನಡೆಸಿದ ಪ್ರತಿಭಟನೆಯ ವೇಳೆ ಧಾರ್ಮಿಕ ಚಿಹ್ನೆಗಳನ್ನು ಅವಮಾನಿಸಿದ್ದಾರೆ. ಪ್ರತಿಭಟನೆಯ ನಾಟಕದಲ್ಲಿ ಅವರು ಕೇಸರಿ ವಸ್ತ್ರ ಧರಿಸಿ, ಭಗವಾನ್‌ ರಾಮಲಲ್ಲಾ ಅವರ ಚಿತ್ರವನ್ನು ಕಾಲಿನ ಕೆಳಭಾಗದಲ್ಲಿ ಇರಿಸಿದ್ದು ಸನಾತನ ಧರ್ಮದ ಅನುಯಾಯಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಶುಕ್ರವಾರ ಸಂಸತ್ತಿನ ಆವರಣದಲ್ಲಿ ಬೀದಿ ನಾಟಕದ ಮಾದರಿಯಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ, “ಚಂದಾ ಚೋರ್‌, ಗದ್ದಿ ಛೋಡ್‌”, “ಜವಾಬ್‌ ತುಮ್ಕೋ ದೇನಾ ಹೋಗಾ” ಮತ್ತು “ಅಮಿತ್‌ ಶಾ ಸದನ್‌ ಮೇ ಆಓ” ಎಂಬ ಘೋಷಣೆಗಳನ್ನು ಕೂಗಲಾಯಿತು. ಪ್ರತಿಭಟನೆಯ ಭಾಗವಾಗಿ ಪಪ್ಪು ಯಾದವ್‌ ಕೇಸರಿ ವಸ್ತ್ರ ಧರಿಸಿ ದೇವಾಲಯದ ಅರ್ಚಕರ ಪಾತ್ರದಲ್ಲಿ ಕಾಣಿಸಿಕೊಂಡರು. ಅವರ ಕೈಯಲ್ಲಿ ರಾಮನ ಭಾವಚಿತ್ರವೂ ಇತ್ತು. ಕೆಲವು ಸಂಸದರು ಭಕ್ತರ ಪಾತ್ರ ನಿರ್ವಹಿಸಿ ದೇಣಿಗೆಯ ಪೆಟ್ಟಿಗೆಗೆ ಹಣ ಹಾಕುವಂತೆ ಅಭಿನಯಿಸಿದರು. ನಾಟಕದಲ್ಲಿ, ಅರ್ಚಕರ ಪಾತ್ರದಲ್ಲಿದ್ದ ಪಪ್ಪು ಯಾದವ್‌, ದೇಣಿಗೆ ಪೆಟ್ಟಿಗೆಯಲ್ಲಿ ಹಣ ಹಾಕುವ ಬದಲು ಅದನ್ನು ತಮ್ಮ ಜೇಬಿಗೆ ಹಾಕಿಕೊಳ್ಳುವ ಮೂಲಕ ರಾಮಮಂದಿರ ದೇಣಿಗೆ ದುರುಪಯೋಗವಾಗಿದೆ ಎಂಬ ಆರೋಪವನ್ನು ಸಾಂಕೇತಿಕವಾಗಿ ಪ್ರದರ್ಶಿಸಿದರು.

ಪ್ರತಿಭಟನೆಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಸಂಸದರಾದ ಡಿಂಪಲ್‌ ಯಾದವ್‌, ಅವಧೇಶ್‌ ಪ್ರಸಾದ್‌ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಹಲವು ಸಂಸದರು ಬೆಂಬಲ ನೀಡಿದ್ದರು.

ಈ ಪ್ರತಿಭಟನೆ ವಿರುದ್ಧ ಬಿಜೆಪಿ ಸಂಸದರು ಅಸಮಾಧಾನಗೊಂಡಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದು, ಈಗಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸಿದ್ಧತೆ ನಡೆಯುತ್ತಿದೆ ಎಂದಿದ್ದಾರೆ. ಅಂತೆಯೇ, ಲೋಕಸಭಾ ಕಾರ್ಯದರ್ಶಿಯೂ ಕಿಡಿಕಾರಿದ್ದಾರೆ. ಸಂಸತ್‌ ಆವರಣದಲ್ಲಿ ವೇಷಭೂಷಣ ಧರಿಸಿ ಅಥವಾ ನಾಟಕೀಯ ಪ್ರದರ್ಶನಗಳ ಮೂಲಕ ಪ್ರತಿಭಟನೆ ನಡೆಸುವುದನ್ನು ಇನ್ನು ಮುಂದೆ ಅನುಮತಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

ಆದಾಗ್ಯೂ, ವಿಪಕ್ಷಗಳು ಪ್ರತಿಭಟನೆಯನ್ನು ಸಮರ್ಥಿಸಿದ್ದಾರೆ. ಸಮಾಜವಾದಿ ಪಕ್ಷದ ಸಂಸದ ಧರ್ಮೇಂದ್ರ ಯಾದವ್‌ ಅವರು, “ಅಯೋಧ್ಯೆಯಲ್ಲಿ ಭಕ್ತರು ನೀಡಿದ ದೇಣಿಗೆಗೆ ರಸೀದಿ ನೀಡಿಲ್ಲ, ಈ ಪ್ರಕರಣಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಅಳಿಸಲಾಗಿದೆ. ಇದೇ ವಿಚಾರವನ್ನು ಸಂಸತ್ತಿನಲ್ಲಿ ಚರ್ಚಿಸಬೇಕು ಎಂಬ ಒತ್ತಾಯವನ್ನು ಸರ್ಕಾರದ ಗಮನಕ್ಕೆ ತರಲು ಈ ಸಾಂಕೇತಿಕ ಪ್ರತಿಭಟನೆ ನಡೆಸಲಾಗಿದೆ” ಎಂದು ಹೇಳಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...