ರಾಮಮಂದಿರ ಲೂಟಿ | ಪತ್ರಿಕಾಗೋಷ್ಠಿಗೆ ನಿರ್ಬಂಧ: 77 ವರ್ಷ ಹಳೆಯ ಸಮಿತಿಯ ಧ್ವನಿ ಹತ್ತಿಕ್ಕಲು ಯತ್ನ!

Date:

ಅಯೋಧ್ಯೆಯ ರಾಮಮಂದಿರದ ದೇಣಿಗೆ ಹಣ, ಬೆಳ್ಳಿ, ಬಂಗಾರ ಹಾಗೂ ವಜ್ರದ ಲೂಟಿಯ ಕುರಿತು ಹಲವು ಮಾಹಿತಿಗಳನ್ನು ಬಹಿರಂಗಪಡಿಸಲು ಮುಂದಾಗಿದ್ದ ಸುಮಾರು 77 ವರ್ಷಗಳ ಹಳೆಯ ಇತಿಹಾಸವಿರುವ ಶ್ರೀರಾಮ ಜನ್ಮಭೂಮಿ ಸೇವಾ ಸಮಿತಿಯ ಧ್ವನಿಯನ್ನು ಬಿಜೆಪಿ ಸರ್ಕಾರ ಹತ್ತಿಕ್ಕಲು ಯತ್ನಿಸಿದೆ. ಜಿಲ್ಲಾಡಳಿತವು ಪತ್ರಿಕಾಗೋಷ್ಠಿ ನಡೆಸದಂತೆ ಕಟ್ಟುನಿಟ್ಟಿನ ನಿರ್ಬಂಧ ಹೇರಿದೆ. ಜೂನ್ 30ರಂದು ನಿಗದಿಯಾಗಿದ್ದ ಪತ್ರಿಕಾಗೋಷ್ಠಿಯು ಕೊನೆಯ ಕ್ಷಣದಲ್ಲಿ ರದ್ದಾಗಿದ್ದು, ಅಯೋಧ್ಯೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

- Advertisement -

ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯಲ್ಲಿ ಭಾರಿ ಪ್ರಮಾಣದ ವಂಚನೆ ಹಾಗೂ ಅಕ್ರಮಗಳು ನಡೆದಿವೆ ಎಂಬುದು ಇತ್ತೀಚೆಗೆ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ 29ರಂದು ಪ್ರಕಟಣೆ ಹೊರಡಿಸಿದ್ದ ಶ್ರೀರಾಮ ಜನ್ಮಭೂಮಿ ಸೇವಾ ಸಮಿತಿಯು, ಜೂನ್ 30ರಂದು ಮಧ್ಯಾಹ್ನ 1 ಗಂಟೆಗೆ ಅಯೋಧ್ಯೆಯ ಟೇಢಿ ಬಜಾರ್ ರಸ್ತೆಯಲ್ಲಿರುವ ‘ಅರುಂಧತಿ ಭವನ’ದಲ್ಲಿ ಪತ್ರಿಕಾಗೋಷ್ಠಿ ಕರೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಇದನ್ನೂ ಓದಿ: ರಾಮಮಂದಿರ ಕಾಣಿಕೆ ಕಳವು: ಕುಂಭಮೇಳದ ಅವಧಿಯಲ್ಲೇ ಭಾರೀ ಕಳ್ಳತನ; ಭಾವ-ಬಾಮೈದರೇ ದೊಡ್ಡ ಕಳ್ಳರು!

“ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಸಂದಾಯವಾಗಿರುವ ಹಣ, ಆಭರಣಗಳು ಮತ್ತು ಅಮೂಲ್ಯ ವಸ್ತುಗಳ ಎಣಿಕೆ ಹಾಗೂ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವವರು ನಡೆಸುತ್ತಿರುವ ಲೂಟಿಯಿಂದ ನಮಗೆ ತೀವ್ರ ಬೇಸರವಾಗಿದೆ,” ಎಂದು ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿತ್ತು. ಈ ಸಮಿತಿಯು ಹಲವು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಬಹುದು ಎಂಬ ಸುದ್ದಿಗಳೂ ಹರಿದಾಡಿತ್ತು.

ಆದರೆ, ಜಿಲ್ಲಾಡಳಿತವು ಅರುಂಧತಿ ಭವನದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ನಿರಾಕರಿಸಿತು. ಅದಾದ ಬಳಿಕ ಸಮಿತಿಯ ಸದಸ್ಯರು ಫೈಜಾಬಾದ್‌ನ ‘ಶಾನ್-ಎ-ಅವಧ್’ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಯತ್ನಿಸಿದರು. ಆದರೆ ಅಲ್ಲಿಯೂ ಆಡಳಿತ ಮಂಡಳಿ ಹಾಗೂ ಹೋಟೆಲ್‌ಗಳು ಸ್ಥಳಾವಕಾಶ ನೀಡಲು ನಿರಾಕರಿಸಿದವು.

ಪತ್ರಿಕಾಗೋಷ್ಠಿ ಕರೆದಲ್ಲಿ ಪೊಲೀಸರ ಸರ್ಪಗಾವಲು!

ಪತ್ರಿಕಾಗೋಷ್ಠಿ ಕರೆಯಲಾಗಿದ್ದ ಟೇಢಿ ಬಜಾರ್ ಚೌರಸ್ತೆಯ ಸುತ್ತಮುತ್ತ ಭಾರಿ ಸಂಖ್ಯೆಯ ಪೊಲೀಸರನ್ನು ನಿಯೋಜಿಸಿ ಸರ್ಪಗಾವಲು ಹಾಕಲಾಗಿತ್ತು. ಯಾವುದೇ ರೀತಿಯ ಸಭೆ ಅಥವಾ ಪತ್ರಿಕಾಗೋಷ್ಠಿ ನಡೆಯದಂತೆ ತಡೆಯಲು ರಾಮ ಜನ್ಮಭೂಮಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.

ಇದೇ ಸಂದರ್ಭದಲ್ಲಿ, ದೇಣಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಜಯ್ ರೈ ಅವರ ನೇತೃತ್ವದ ನಿಯೋಗವು ಅಯೋಧ್ಯೆಗೆ ಭೇಟಿ ನೀಡಲು ನಿರ್ಧರಿಸಿದ್ದರಿಂದ, ಕಾನೂನು ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ಅಜಯ್ ರೈ ಅವರನ್ನು ಅಯೋಧ್ಯೆಯ ಹೋಟೆಲ್‌ನಲ್ಲೇ ಗೃಹಬಂಧನದಲ್ಲಿಡಲಾಗಿತ್ತು. ಈ ರಾಜಕೀಯ ಉದ್ವಿಗ್ನತೆಯ ನಡುವೆ ಸಮಿತಿಯ ಪತ್ರಿಕಾಗೋಷ್ಠಿಗೂ ಬ್ರೇಕ್ ಹಾಕಲಾಗಿದೆ. ಅಂದರೆ ರಾಮಮಂದಿರದಲ್ಲಿ ಬಿಜೆಪಿ, ಆರ್‌ಎಸ್‌ಎಸ್‌, ಸಂಘಪರಿವಾರ ನಡೆಸಿರುವ ಲೂಟಿಯನ್ನು ಪ್ರಶ್ನಿಸುವವರು, ಅದರ ವಿರುದ್ಧ ಧ್ವನಿ ಎತ್ತುವವರನ್ನು ಹತ್ತಿಕ್ಕುವ ಯತ್ನ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ಇದನ್ನೂ ಓದಿ: ರಾಮಮಂದಿರ ಲೂಟಿ: ಆರೋಪಿಗಳ ಪರ ವಾದಿಸದಿರಲು ಅಯೋಧ್ಯೆಯ ವಕೀಲರ ನಿರ್ಧಾರ

ಈ ಬಗ್ಗೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಚ್ಯುತ್ ಶಂಕರ್ ಶುಕ್ಲಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ನಮಗೆ ಆಡಳಿತ ಮಂಡಳಿಯಿಂದ ಅನುಮತಿ ಸಿಗದ ಕಾರಣ ಮತ್ತು ಹೋಟೆಲ್‌ಗಳೂ ಜಾಗ ನಿರಾಕರಿಸಿದ್ದರಿಂದ ಕಾರ್ಯಕ್ರಮ ರದ್ದುಗೊಳಿಸಿದ್ದೇವೆ. ಶೀಘ್ರದಲ್ಲೇ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಯವರಿಗೆ ನಮ್ಮ ಕಡೆಯಿಂದ ಮನವಿ ಪತ್ರ ಸಲ್ಲಿಸಲಿದ್ದೇವೆ,” ಎಂದು ಸ್ಪಷ್ಟಪಡಿಸಿದ್ದಾರೆ.

1949ರಲ್ಲಿ ಸ್ಥಾಪನೆಯಾಗಿರುವ ಈ ಸಮಿತಿ

ಈ ಶ್ರೀರಾಮ ಜನ್ಮಭೂಮಿ ಸೇವಾ ಸಮಿತಿಯು 1949ರಲ್ಲಿ ಸ್ಥಾಪನೆಯಾದ ಐತಿಹಾಸಿಕ ಸಂಸ್ಥೆ. ಈ ಸಂದರ್ಭದಲ್ಲಿ ಫೈಜಾಬಾದ್‌ನ ಸಿಟಿ ಮ್ಯಾಜಿಸ್ಟ್ರೇಟ್ ಆಗಿದ್ದ ಠಾಕೂರ್ ಗುರುದತ್ ಸಿಂಗ್ ಅವರು ಈ ಸಮಿತಿಯ ಅಧ್ಯಕ್ಷರಾಗಿದ್ದರು. ಅಂದಿನಿಂದ ಈ ಸಮಿತಿಯು ರಾಮನವಮಿ, ಪ್ರಕಟ್ಯೋತ್ಸವ ಮತ್ತು ದಸರಾ ರಾಮಲೀಲಾ ಉತ್ಸವಗಳನ್ನು ಅಯೋಧ್ಯೆಯಲ್ಲಿ ಆಯೋಜಿಸುತ್ತಾ ಬಂದಿದೆ. ಆದರೆ ಕೇಂದ್ರ ಸರ್ಕಾರ ‘ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್’ ರಚಿಸಿದ ನಂತರ ಈ ಸಮಿತಿಯ ಸಾಂಪ್ರದಾಯಿಕ ಕಾರ್ಯಕ್ರಮಗಳು ಸ್ಥಗಿತಗೊಂಡಿದ್ದವು. ಬಿಜೆಪಿ ಹಿಡಿತದಲ್ಲೇ ಎಲ್ಲ ಕಾರ್ಯಕ್ರಮಗಳನ್ನು ‘ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್’ ನಡೆಸುತ್ತಿದೆ, ಶ್ರೀರಾಮ ಜನ್ಮಭೂಮಿ ಸೇವಾ ಸಮಿತಿಗೆ ಅವಕಾಶವೇ ಇಲ್ಲದಂತಾಗಿದೆ ಎಂಬ ಆರೋಪಗಳಿವೆ.

ರಾಮಮಂದಿರದ ದೇಣಿಗೆ ಹಗರಣವು ಪ್ರಸ್ತುತ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮತ್ತು ಆರ್‌ಎಸ್‌ಎಸ್ ನಾಯಕತ್ವಕ್ಕೆ ರಾಷ್ಟ್ರಮಟ್ಟದಲ್ಲಿ ಭಾರಿ ಮುಜುಗರ ಉಂಟುಮಾಡಿದೆ. ಈ ಸಂದರ್ಭದಲ್ಲಿ 1949ರಿಂದಲೂ ಮಂದಿರದ ಚಳವಳಿಯ ಇತಿಹಾಸ ಹೊಂದಿರುವ ಹಳೆಯ ಸಮಿತಿಯೊಂದು ಬಹಿರಂಗವಾಗಿ ಲೂಟಿಯ ಆರೋಪ ಮಾಡಿ ಪತ್ರಿಕಾಗೋಷ್ಠಿ ನಡೆಸಿದರೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ನೇತೃತ್ವದ ಟ್ರಸ್ಟ್‌ಗೆ ಮತ್ತಷ್ಟು ರಾಜಕೀಯ ಹಿನ್ನಡೆ ತರಬಹುದು ಎಂಬ ಆತಂಕ ಯೋಗಿ ಸರ್ಕಾರಕ್ಕಿದೆ.

ಈ ಸಮಿತಿ ಪತ್ರಿಕಾಗೋಷ್ಠಿ ನಡೆಸಿ ಹಲವು ವಿಚಾರಗಳನ್ನು ಬಹಿರಂಗಪಡಿಸುವ ಸಾಧ್ಯತೆಯೂ ಇದೆ. ಈಗಾಗಲೇ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಬಿಜೆಪಿಯ ರಾಮಮಂದಿರ ರಾಜಕೀಯವನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಹೀಗಿರುವಾಗ ಅಯೋಧ್ಯೆಯಲ್ಲಿ ಯಾವುದೇ ರೀತಿಯ ಪ್ರತಿಭಟನೆ ಅಥವಾ ಬಹಿರಂಗ ಅಸಮಾಧಾನದ ಧ್ವನಿಗಳು ಮಾಧ್ಯಮಗಳ ಮೂಲಕ ದೇಶಕ್ಕೆ ತಲುಪಬಾರದು ಎಂಬ ಕಾರಣಕ್ಕಾಗಿಯೇ ಬಿಜೆಪಿ ಆಡಳಿತ ಯಂತ್ರವನ್ನು ಬಳಸಿ ಪತ್ರಿಕಾಗೋಷ್ಠಿಯನ್ನು ಹತ್ತಿಕ್ಕುತ್ತಿದೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...