ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ನಿಧನ, ಪ್ರಧಾನಿ ಸೇರಿ ಗಣ್ಯರ ಸಂತಾಪ

Date:

ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಅವರು ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಸ್ಮರಣಾನಂದ ಅವರಿಗೆ ಮೂತ್ರನಾಳ ಸೋಂಕು ಕಾಣಿಸಿಕೊಂಡ ಕಾರಣ ಜನವರಿ 29ರಂದು ದಕ್ಷಿಣ ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

2017 ರಲ್ಲಿ ರಾಮಕೃಷ್ಣ ಮಿಷನ್‌ನ 16 ನೇ ಅಧ್ಯಕ್ಷರಾಗಿದ್ದ ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಾರ್ಚ್​ 2022ರಲ್ಲಿ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಸ್ಮರಣಾನಂದರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡ ಅವರಿಗೆ ಮತ್ತೆ ಜನವರಿಯಲ್ಲಿ ಮೂತ್ರನಾಳ ಸೋಂಕು ಕಾಣಿಸಿಕೊಂಡಿದೆ. ಇನ್ನು ಉಸಿರಾಟದ ಸಮಸ್ಯೆಯನ್ನೂ ಹೊಂದಿದ್ದ ಸ್ಮರಣಾನಂದ ಅವರನ್ನು ಮಾರ್ಚ್ ​3 ರಂದು ವೆಂಟಿಲೇಟರ್​ನಲ್ಲಿ ಇರಿಸಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ದಕ್ಷಿಣ ಕನ್ನಡ | ಸಾರ್ವಜನಿಕ ಶೌಚಾಲಯವಾಗಿದ್ದ ಗೋಡೆಗೆ ವಾರ್ಲಿ ಕಲೆಯ ಸಿಂಗಾರ

1929ರಲ್ಲಿ ತಮಿಳುನಾಡಿನ ತಾಂಜಾವೂರು ಜಿಲ್ಲೆಯ ಅಂಡಮಿ ಗ್ರಾಮದಲ್ಲಿ ಜನಿಸಿದ ಸ್ವಾಮಿ ಸ್ಮರಣಾನಂದರು ಸಣ್ಣ ವಯಸ್ಸಿನಲ್ಲಿಯೇ ತಾಯಿಯನ್ನು ಕಳೆದುಕೊಂಡರು. ತಮ್ಮ ಶಾಲಾ ಶಿಕ್ಷಣವನ್ನು 1946ರಲ್ಲಿ ಪೂರ್ಣಗೊಳಿಸಿ ಬಳಿಕ ನಾಸಿಕ್​ನಿಂದ ವಾಣಿಜ್ಯದಲ್ಲಿ ಡಿಪ್ಲೊಮಾ ಮಾಡಿದರು.

1949ರಲ್ಲಿ ಮುಂಬೈಗೆ ತೆರಳಿದ ಸ್ಮರಣಾನಂದರು ರಾಮಕೃಷ್ಣ ಮತ್ತು ಸ್ವಾಮಿ ವಿವೇಕಾನಂದರ ವಿಚಾರಧಾರೆಯಿಂದ ಪ್ರೇರಿತರಾಗಿ ಮುಂಬೈನ ರಾಮಕೃಷ್ಣ ಮಿಷನ್​ಗೆ ಸೇರಿದರು. ತನ್ನ 22ನೇ ವಯಸ್ಸಿನಲ್ಲಿಯೇ ಶಂಕರಾನಂದರಿಂದ ಧೀಕ್ಷೆ ಪಡೆದು 1956ರಲ್ಲಿ ಬ್ರಹ್ಮಚರ್ಯವನ್ನು ಸ್ವೀಕರಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಸೋಲಿಸುವ ಅಭ್ಯರ್ಥಿಗಳಿಗೆ ಮತ ನೀಡಿ: ರೈತ ನಾಯಕ ರಾಕೇಶ್ ಟಿಕಾಯತ್ ಮನವಿ

ಲೋಕಸಭಾ ಚುನಾವಣೆಯಲ್ಲಿ ಮೇ.25 ಹಾಗೂ ಜೂನ್‌ 1ರ  ಕೊನೆಯ ಎರಡು ಹಂತದ...

ಹರಿಯಾಣದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ 7 ಜನರ ಸಾವು, 25 ಮಂದಿಗೆ ಗಾಯ

ಹರಿಯಾಣ ದ ಅಂಬಾಲದಲ್ಲಿ ಇಂದು ಬೆಳಗಿನ ಜಾವ ಟ್ರಕ್‌ವೊಂದು ಮಿನಿ ಬಸ್‌ಗೆ...

5ನೇ ಹಂತದ ಲೋಕಸಭೆ ಚುನಾವಣೆ: ಶೇ. 62.2 ರಷ್ಟು ಮತದಾನ

ಮೇ 20 ರಂದು ನಡೆದ 5ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇ....

ಲೋಕಸಭೆ ಚುನಾವಣೆ 6ನೇಹಂತ: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಲೋಕಸಭಾ ಚುನಾವಣೆ 6ನೇ ಹಂತದ ಮತದಾನ ಇದೇ ಮೇ 25 ರಂದು...