ಅತ್ಯಾಚಾರ ಆರೋಪಿಯೊಬ್ಬ ಜಾಮೀನು ಪಡೆದು, ಜೈಲಿನಿಂದ ಹೊರಬಂದು ಸಂತ್ರಸ್ತೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಒಡಿಶಾದಲ್ಲಿ ನಡೆದಿದೆ.
ಒಡಿಶಾದ ಸುಂದರ್‌ಘಡ್ ಜಿಲ್ಲೆಯಲ್ಲಿ ಅಪ್ತಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕುನು ಕಿಸಾನ್ ಎಂಬಾತನನ್ನು ಬಂಧಿಸಲಾಗಿತ್ತು. ಆತ ಇತ್ತೀಚೆಗೆ ಜಾಮೀನು ಪಡೆದು, ಜೈಲಿನಿಂದ ಬಿಡುಗಡೆಯಾಗಿದ್ದ. ತಾನು ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಉದ್ದೇಶಕ್ಕಾಗಿ ಆಕೆಯನ್ನು ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿಯನ್ನು ಜಾರ್ಸುಗುಡಾದಲ್ಲಿ ಅಪಹರಿಸಿ, ರೂರ್ಕೆಲಾದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆಕೆಯ ಮೃತದೇಹವನ್ನ ತುಂಡರಿಸಿ ನದಿಗೆ ಬಿಸಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂತ್ರಸ್ತೆಯ ಪೋಷಕರು ತಮ್ಮ ಮಗಳು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದರು. ವಿಚಾರಣೆ ವೇಳೆ, ಆರೋಪಿಯ ಮೇಲೆ ಅನುಮಾನಗೊಂಡ ಪೊಲೀಸರು ಹಲವೆಡೆ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ, ಬಾಲಕಿಯನ್ನು ಆರೋಪಿ ಅಪಹರಿಸಿರುವುದು ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಬಳಿಕ, ಆರೋಪಿಯನ್ನು ವಿಚಾರಣೆ ಒಳಪಡಿಸಲಾಗಿದ್ದು, ತಾನೇ ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಬಾಲಕಿಯ ಮೃತದೇಹವನ್ನು ತುಂಡರಿಸಿ, ಬ್ರಹ್ಮಿಣಿ ನದಿ ಮತ್ತು ಹನುಮಾನ್ ಬಾಟಿಕಾ-ತಾರಕೇರಾ ಜಲಾಶಯದ ಬಳಿ ಎಸೆರುವುದಾಗಿ ಹೇಳಿದ್ದಾನೆ. ಆ ಪ್ರದೇಶಗಳಲ್ಲಿ ಶೋಧ ನಡೆಸಿದ್ದು, ಬಾಲಕಿಯ ಮೃಹದೇಹ ಭಾಗಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.