ಪಂಜಾಬ್: ಎಲ್‌ಪಿಯು ‘ವಿವಿ’ಯಲ್ಲಿ ಅತ್ಯಾಚಾರ ಆರೋಪ; ಭುಗಿಲೆದ್ದ ಪ್ರತಿಭಟನೆ, ತರಗತಿಗಳು ರದ್ದು

Date:

ಪಂಜಾಬ್‌ನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (ಎಲ್‌ಪಿಯು) ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಭಾರಿ ಪ್ರತಿಭಟನೆ ಮತ್ತು ಹಿಂಸಾಚಾರ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯವು ಇಂದಿನಿಂದ 10 ದಿನಗಳ ಕಾಲ ತರಗತಿಗಳನ್ನು ರದ್ದುಗೊಳಿಸಿದ್ದು, ನಡೆಯಬೇಕಿದ್ದ ಮಧ್ಯಂತರ (ಮಿಡ್-ಟರ್ಮ್) ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ.

- Advertisement -

​ಮೂರು ದಿನಗಳ ಹಿಂದೆ ಹೊರಗಿನಿಂದ ಬಂದಿದ್ದ ಪ್ಲಂಬರ್ ಓರ್ವ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಮತ್ತು ಈ ಬಗ್ಗೆ ವಾರ್ಡನ್‌ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಭಾನುವಾರ ತಡರಾತ್ರಿ ಗರ್ಲ್ಸ್ ಹಾಸ್ಟೆಲ್-3ರ ಬಳಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ಆರಂಭಿಸಿದರು. ಸೋಮವಾರ ಬೆಳಗಿನ ಜಾವದ ವೇಳೆಗೆ ಪ್ರತಿಭಟನಾಕಾರರು ವಿಶ್ವವಿದ್ಯಾಲಯದ ಹೊರಗಿನ ರಾಷ್ಟ್ರೀಯ ಹೆದ್ದಾರಿ-44 ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

​ಹೆದ್ದಾರಿ ತಡೆ ತೆರವುಗೊಳಿಸಲು ಮುಂದಾದ ಪೊಲೀಸರ ಮೇಲೆ ಪ್ರತಿಭಟನಾಕಾರರು ನೀರಿನ ಬಾಟಲಿ ಮತ್ತು ಕಲ್ಲು ತೂರಾಟ ನಡೆಸಿದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ರೊಚ್ಚಿಗೆದ್ದ ಗುಂಪು ಎರಡು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದು, 5ಕ್ಕೂ ಹೆಚ್ಚು ವಾಹನಗಳನ್ನು ಜಖಂಗೊಳಿಸಿದ್ದಾರೆ. ಘಟನೆಯಲ್ಲಿ ಹಲವು ಪೊಲೀಸರಿಗೆ ಗಾಯಗಳಾಗಿವೆ. ಪರಿಸ್ಥಿತಿ ನಿಯಂತ್ರಿಸಲು ಕಪುರ್ತಲಾ, ಜಲಂಧರ್ ಮತ್ತು ಹೋಶಿಯಾರ್‌ಪುರದಿಂದ ಹೆಚ್ಚಿನ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ.

​ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ. ಆದರೆ, ಕ್ಯಾಂಪಸ್‌ನಲ್ಲಿ ಅತ್ಯಾಚಾರ ನಡೆದಿದೆ ಎಂಬ ಆರೋಪವನ್ನು ಎಲ್‌ಪಿಯು ಆಡಳಿತ ಮಂಡಳಿ ಸಾರಾಸಗಟಾಗಿ ತಳ್ಳಿಹಾಕಿದೆ. ವಿಶ್ವವಿದ್ಯಾಲಯದ ಶೈಕ್ಷಣಿಕ ವಾತಾವರಣ ಮತ್ತು ವರ್ಚಸ್ಸಿಗೆ ಧಕ್ಕೆ ತರಲು ಕಿಡಿಗೇಡಿಗಳು ಇಂತಹ ಆಧಾರರಹಿತ ಮತ್ತು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ರಿಜಿಸ್ಟ್ರಾರ್ ಮೋನಿಕಾ ಗುಲಾಟಿ ಸ್ಪಷ್ಟಪಡಿಸಿದ್ದಾರೆ.

​ಆಕ್ರೋಶಗೊಂಡ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿದ್ದ ಎಟಿಎಂ, ಮಳಿಗೆಗಳು, ಹೂಕುಂಡಗಳು ಹಾಗೂ ಕಿಟಕಿ ಗಾಜುಗಳನ್ನು ಒಡೆದು ಜಖಂಗೊಳಿಸಿದ್ದಾರೆ. ಅಲ್ಲದೆ, ಕ್ಯಾಂಪಸ್‌ನಲ್ಲಿ ಪ್ರದರ್ಶನಕ್ಕಿಟ್ಟಿದ್ದ ಮಿಗ್-23 ಯುದ್ಧವಿಮಾನ ಮತ್ತು ಸೇನಾ ಟ್ಯಾಂಕ್ ಮೇಲೇರಿ ಆಕ್ರೋಶ ವ್ಯಕ್ತಪಡಿಸಿದರು. ಮಹಿಳಾ ಹಾಸ್ಟೆಲ್‌ನಲ್ಲಿ ಮಹಿಳಾ ಸಿಬ್ಬಂದಿ ಮಾತ್ರ ಇರಬೇಕು ಮತ್ತು ಕುಲಪತಿ ಅಶೋಕ್ ಮಿತ್ತಲ್ ಅವರು ಖುದ್ದಾಗಿ ಬಂದು ಸಮಸ್ಯೆ ಆಲಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

​ಇದೇ ಕ್ಯಾಂಪಸ್‌ನಲ್ಲಿ 15 ದಿನಗಳ ಹಿಂದೆಯಷ್ಟೇ ತೆಲಂಗಾಣ ಮೂಲದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದೀಗ ಅತ್ಯಾಚಾರದ ಆರೋಪ ಕೇಳಿಬಂದಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಪಂಜಾಬ್‌ನ ಆಮ್ ಆದ್ಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ರಾಜಾ ವಾರ್ರಿಂಗ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಟೀಕಿಸಿದ್ದಾರೆ.

​ಕ್ಯಾಂಪಸ್‌ನಲ್ಲಿ ಬಿಗುವಿನ ವಾತಾವರಣ ಇರುವ ಕಾರಣ, ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಪೋಷಕರ ಅನುಮತಿ ಪಡೆದು ತಮ್ಮ ಊರುಗಳಿಗೆ ತೆರಳಲು ವಿಶ್ವವಿದ್ಯಾಲಯ ಸೂಚಿಸಿದೆ. ಕ್ಯಾಂಪಸ್‌ನಲ್ಲೇ ಉಳಿಯುವ ವಿದ್ಯಾರ್ಥಿಗಳು ಹಾಸ್ಟೆಲ್‌ನಿಂದ ಹೊರಬರದಂತೆ ಹಾಗೂ ಅನಗತ್ಯವಾಗಿ ಓಡಾಡದಂತೆ ತಾಕೀತು ಮಾಡಲಾಗಿದೆ. ಮುಂದೂಡಲಾಗಿರುವ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಯುನಿವರ್ಸಿಟಿ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಯುಎಂಎಸ್) ಮೂಲಕ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...